• search
  • Live TV
ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಮಾಜ್ ಮಾಡುತ್ತಿದ್ದವರನ್ನು ಮಸೀದಿ ಪ್ರವೇಶಿಸಿ ವಶಕ್ಕೆ ಪಡೆದ ಕೋಲಾರ ತಹಶೀಲ್ದಾರ್

By ಕೋಲಾರ ಪ್ರತಿನಿಧಿ
|

ಕೋಲಾರ, ಮೇ 01: ಲಾಕ್ ಡೌನ್ ನಿಯಮ ಉಲ್ಲಂಘಿಸಿ ಮಸೀದಿಯೊಳಗೆ ನಮಾಜ್ ಮಾಡುತ್ತಿದ್ದವರನ್ನು ಬಂಧಿಸಲು ಕೋಲಾರ ತಹಶೀಲ್ದಾರ್ ಶೋಭಿತಾ ಅವರು ಮಸೀದಿ ಪ್ರವೇಶಿಸಿ ಅಲ್ಲಿದ್ದವರನ್ನು ವಶಕ್ಕೆ ಪಡೆದು ದಿಟ್ಟೆ ಎನಿಸಿಕೊಂಡಿದ್ದಾರೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಕೊರೊನಾದಿಂದಾಗಿ ಲಾಕ್ ಡೌನ್ ವಿಧಿಸಲಾಗಿದೆ. ಕೊರೊನಾ ಪ್ರಕರಣಗಳೂ ಹೆಚ್ಚಾಗುತ್ತಿರುವ ಕಾರಣ ಜನರು ಸಾಮೂಹಿಕವಾಗಿ ಎಲ್ಲೂ ಸೇರಬಾರದು, ದೇವಸ್ಥಾನ, ಮಸೀದಿ, ಚರ್ಚ್ ಗಳಲ್ಲಿ ಎಲ್ಲೂ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಾರದು ಎಂಬ ನಿರ್ಬಂಧ ಹೇರಲಾಗಿದೆ. ಆದರೆ ಈ ಕಾನೂನು ಉಲ್ಲಂಘಿಸಿ ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದವರಿಗೆ ಪಾಠ ಕಲಿಸಲು ತಹಶೀಲ್ದಾರ್ ಶೋಭಿತಾ ಅವರು ಮಸೀದಿ ಪ್ರವೇಶಿಸಿದ್ದಾರೆ.

ಮಹಿಳೆಯರಿಗೆ ಮಸೀದಿಯೊಳಗೆ ನಿರ್ಬಂಧದ ನಡುವೆಯೂ ಮಸೀದಿಯೊಳಗೆ ತೆರಳಿದ ಶೋಭಿತಾ, ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ನಮಾಜ್ ಮಾಡುತ್ತಿದ್ದ ಹನ್ನೊಂದು ಜನರನ್ನು ವಶಕ್ಕೆ ಪಡೆದಿದ್ದಾರೆ. ಮಸೀದಿಗೆ ನುಗ್ಗಿದ ತಹಶೀಲ್ದಾರ್ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ನಮಾಜ್ ಮಾಡುತ್ತಿರುವ ಮಾಹಿತಿ ಮೇರೆಗೆ ಕೋಲಾರ ನಗರದ ಮುನಿಸಿಪಾಲ್ ಆಸ್ಪತ್ರೆ ಮುಂಭಾಗದ ಮಸೀದಿಗೆ ನುಗ್ಗಿದ ಶೋಭಿತಾ ಅವರು, ಲಾಕ್ ಡೌನ್ ಸಮಯದಲ್ಲಿ ನಮಾಜ್ ಮಾಡಲು ನಿಮಗೆ ಯಾರು ಹೇಳಿದ್ದು, ಇವರೆಲ್ಲರನ್ನೂ ಇಲ್ಲಿಯೇ ಕೂಡಿಹಾಕಿ. ಯಾರನ್ನೂ ಹೊರಗೆ ಬಿಡಬೇಡಿ ಎಂದು ಹೇಳಿ ಕಾನೂನು ಉಲ್ಲಂಘನೆ ಮಾಡಿದ ಹನ್ನೊಂದು ಜನರನ್ನು ವಶಕ್ಕೆ ಪಡೆದಿದ್ದಾರೆ.

English summary
Video of kolar tahsildar shobhitha entered Masjid And Detained 11 people viral in social media,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X