ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಸ್ಟ್ರಾನ್ ಗಲಾಟೆ; ಎಸ್‌ಎಫ್‌ಐ ಸಂಘಟನೆ ಅಧ್ಯಕ್ಷ ಬಿಡುಗಡೆ

By ಕೋಲಾರ ಪ್ರತಿನಿಧಿ
|
Google Oneindia Kannada News

ಕೋಲಾರ, ಡಿಸೆಂಬರ್ 18: ವಿಸ್ಟ್ರಾನ್ ಕಂಪನಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಎಫ್‌ಐ ಸಂಘಟನೆ ಕೋಲಾರ ತಾಲೂಕು ಅಧ್ಯಕ್ಷ ಶ್ರೀಕಾಂತ್ ಬಂಧಿಸಲಾಗಿತ್ತು. ಪೊಲೀಸರು ವಿಚಾರಣೆ ಪೂರ್ಣಗೊಳಿಸಿ ಅವರನ್ನು ಬಿಡುಗಡೆ ಮಾಡಿದ್ದಾರೆ.

Recommended Video

ವೆಸ್ಟ್ರಾನ್‌ ಐಫೋನ್‌ ಕಾರ್ಖಾನೆ ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ | Oneindia Kannada

ಗುರುವಾರ ರಾತ್ರಿ ಎಸ್‌ಎಫ್‌ಐ ಸಂಘಟನೆ ಕೋಲಾರ ತಾಲೂಕು ಅಧ್ಯಕ್ಷ ಶ್ರೀಕಾಂತ್‌ ಬಿಡುಗಡೆ ಮಾಡಲಾಗಿದೆ. ಬಿಜೆಪಿ ಸಂಸದ ಮುನಿಸ್ವಾಮಿ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಶ್ರೀಕಾಂತ್ ವಶಕ್ಕೆ ಪಡದು ಪೊಲೀಸರು ವಿಚಾರಣೆ ನಡೆಸಿದ್ದರು.

 ವಿಸ್ಟ್ರಾನ್ ಕಾರ್ಖಾನೆಯಲ್ಲಿ ಕಾರ್ಮಿಕರ ಹಕ್ಕುಗಳ ಉಲ್ಲಂಘನೆಯಾಗಿದೆ: ಕರ್ನಾಟಕ ಕಾರ್ಮಿಕ ಇಲಾಖೆ ವಿಸ್ಟ್ರಾನ್ ಕಾರ್ಖಾನೆಯಲ್ಲಿ ಕಾರ್ಮಿಕರ ಹಕ್ಕುಗಳ ಉಲ್ಲಂಘನೆಯಾಗಿದೆ: ಕರ್ನಾಟಕ ಕಾರ್ಮಿಕ ಇಲಾಖೆ

ವಿಸ್ಟ್ರಾನ್ ಕಂಪನಿಯಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಎಸ್‌ಎಫ್‌ಐ ಸಂಘಟನೆ ಕೈವಾಡವಿದೆ ಎಂದು ಆರೋಪಿಸಲಾಗಿತ್ತು. ಆದ್ದರಿಂದ, ಗುರುವಾರ ಬೆಳಗ್ಗೆ ವೇಮಗಲ್ ಪೊಲೀಸರು ಶ್ರೀಕಾಂತ್ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ವಿಸ್ಟ್ರಾನ್ ಕಂಪನಿಯಲ್ಲಿ ಗಲಾಟೆ; 156 ಮಂದಿ ಬಂಧನ ವಿಸ್ಟ್ರಾನ್ ಕಂಪನಿಯಲ್ಲಿ ಗಲಾಟೆ; 156 ಮಂದಿ ಬಂಧನ

Violence In Wistron Plant SFI Leader Released By Police

ಶ್ರೀಕಾಂತ್ ಬಿಡುಗಡೆ ಮಾಡುವಂತೆ ಹಲವು ಕಾರ್ಮಿಕ ಸಂಘಟನೆ ಮುಖಂಡರು ಪೊಲೀಸರನ್ನು ಒತ್ತಾಯಿಸಿದ್ದರು. ಈ ಹಿನ್ನಲೆಯಲ್ಲಿ ಗುರುವಾರ ರಾತ್ರಿ ಪೊಲೀಸರು ಶ್ರೀಕಾಂತ್ ಬಿಡುಗಡೆ ಮಾಡಿದ್ದಾರೆ. ಗಲಭೆ ಪ್ರಕರಣದ ತನಿಖೆಯನ್ನು ವೇಮಗಲ್ ಪೊಲೀಸರು ಮುಂದುವರೆಸಿದ್ದಾರೆ.

ವಿಸ್ಟ್ರಾನ್ ಘಟಕದ ಗಲಭೆ; 7 ಸಾವಿರ ಜನರ ವಿರುದ್ಧ ಪ್ರಕರಣ ದಾಖಲು! ವಿಸ್ಟ್ರಾನ್ ಘಟಕದ ಗಲಭೆ; 7 ಸಾವಿರ ಜನರ ವಿರುದ್ಧ ಪ್ರಕರಣ ದಾಖಲು!

ಕಳೆದ ಶನಿವಾರ ಕೋಲಾರ ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಕಂಪನಿಯಲ್ಲಿ ಕಾರ್ಮಿಕರು ಗಲಾಟೆ ಮಾಡಿದ್ದರು. ಕಂಪನಿಯ ಕಾರುಗಳಿಗೆ ಬೆಂಕಿ ಹಚ್ಚಿದ್ದರು, ಪಿಠೋಪಕರಣ ಧ್ವಂಸ ಮಾಡಿದ್ದರು. ಐಪೋನ್‌ಗಳನ್ನು ಕಳ್ಳತನ ಮಾಡಿದ್ದಾರೆ ಎಂಬ ಆರೋಪವೂ ಇದೆ.

ವೇತನದ ವಿಚಾರದಲ್ಲಿ ಕಾರ್ಮಿಕರು ದಾಂಧಲೆ ನಡೆಸಿದ್ದರಿಂದ ಸುಮಾರು 400 ಕೋಟಿಗೂ ಅಧಿಕ ನಷ್ಟವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಪೊಲೀಸರಿಗೆ ದೂರು ನೀಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಜನರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

English summary
Police detained Students' federation of India (SFI) Kolar taluk president Srikanth in connection with the the violence in Wistron plant. Srikanth released by police on December 17th night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X