ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಸ್ಟ್ರಾನ್ ಕಂಪನಿಯಲ್ಲಿ ಗಲಾಟೆ; 156 ಮಂದಿ ಬಂಧನ

|
Google Oneindia Kannada News

ಕೋಲಾರ, ಡಿಸೆಂಬರ್ 14: ಕೋಲಾರದ ನಸರಾಪುರದಲ್ಲಿರುವ ತೈವಾನ್ ಮೂಲದ ವಿಸ್ಟ್ರಾನ್ ಘಟಕದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ 156 ಜನರನ್ನು ಬಂಧಿಸಲಾಗಿದೆ. ಸುಮಾರು 440 ಕೋಟಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

Recommended Video

ಬೆಂಗಳೂರು ಬಳಿಯ ಐಫೋನ್ ಉತ್ಪಾದನಾ ಘಟಕದಲ್ಲಿ ನೌಕರರಿಂದಲೇ ದಾಂಧಲೆ | Iphone Plant Vandalised in Kolar

ಮಾಜಿ ಸಚಿವ, ಕಾಂಗ್ರೆಸ್ ನಾಯಕ ಆರ್. ವಿ. ದೇಶಪಾಂಡೆ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳು ಮಧ್ಯ ಪ್ರವೇಶಿಸಿ ಸೂಕ್ತ ಭದ್ರತೆಯೊಂದಿಗೆ ವಿವಾದವನ್ನು ಸುಖಾಂತ್ಯಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೋಲಾರದ ಮೊಬೈಲ್ ಘಟಕ ವಿಸ್ತರಣೆ ಮಾಡಲಿದೆ ವಿಸ್ಟ್ರಾನ್ ಕೋಲಾರದ ಮೊಬೈಲ್ ಘಟಕ ವಿಸ್ತರಣೆ ಮಾಡಲಿದೆ ವಿಸ್ಟ್ರಾನ್

ಕೈಗಾರಿಕೋದ್ಯಮಿಗಳಿಗೆ, ಹೂಡಿಕೆದಾರರಿಗೆ ಉದ್ಯಮ ಸ್ನೇಹಿ ವಾತಾವರಣದ ಜೊತೆಗೆ ಸುರಕ್ಷತೆಯ ಭಾವ ಮೂಡಿಸುವುದು ಈ ಕ್ಷಣದ ಅಗತ್ಯತೆಯಾಗಿದೆ ಎಂದು ದೇಶಪಾಂಡೆ ಫೇಸ್ ಬುಕ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

 ಬೆಂಗಳೂರು ಬಳಿಯ ಐಫೋನ್ ಉತ್ಪಾದನಾ ಘಟಕದಲ್ಲಿ ನೌಕರರಿಂದಲೇ ದಾಂಧಲೆ: ಸರಿಯಾಗಿ ವೇತನ ನೀಡದ ಆರೋಪ ಬೆಂಗಳೂರು ಬಳಿಯ ಐಫೋನ್ ಉತ್ಪಾದನಾ ಘಟಕದಲ್ಲಿ ನೌಕರರಿಂದಲೇ ದಾಂಧಲೆ: ಸರಿಯಾಗಿ ವೇತನ ನೀಡದ ಆರೋಪ

Violence In Wistrons Plant 156 Arrested

ಉದ್ಯಮ ಸ್ನೇಹಿ ವಾತಾವರಣವನ್ನು ಹೊಂದಿರುವ ನಮ್ಮ ರಾಜ್ಯದಲ್ಲಿ ಅನೇಕ ಬೃಹತ್ ಕೈಗಾರಿಕೆಗಳು ಬಂಡವಾಳ ಹೂಡಿಕೆಯನ್ನು ಮಾಡಿರುವುದು ನಮಗೆ ಹೆಮ್ಮೆಯ ವಿಷಯ.

ವರ್ತೂರು ಪ್ರಕಾಶ್ ಕಿಡ್ನಾಪ್: ಮಹತ್ವದ ಮಾಹಿತಿ ನೀಡಿದ ಕೋಲಾರ ಎಸ್ಪಿ ವರ್ತೂರು ಪ್ರಕಾಶ್ ಕಿಡ್ನಾಪ್: ಮಹತ್ವದ ಮಾಹಿತಿ ನೀಡಿದ ಕೋಲಾರ ಎಸ್ಪಿ

ಆದರೆ, 'ಆ್ಯಪಲ್' ಮೊಬೈಲ್ ಬಿಡಿಭಾಗಗಳ ಉತ್ಪಾದನಾ ಘಟಕವಾದ ವಿಸ್ಟ್ರಾನ್ ಇನ್ಫೊಟೆಕ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಕೆಲ ಕಾರ್ಮಿಕರು ಗುಂಪುಗೂಡಿ ಗಲಾಟೆ ಮಾಡಿದ್ದು ಹಾಗೂ ಕಂಪನಿಯ ಆಸ್ತಿಪಾಸ್ತಿಗಳನ್ನು ನಾಶ ಮಾಡಿರುವುದು ದುರದೃಷ್ಟಕರ ಸಂಗತಿ ಎಂದು ಹೇಳಿದ್ದಾರೆ.

ಮಾತುಕತೆ, ಸಂಧಾನಗಳ ಮೂಲಕ ಬಗೆಹರಿಸುವಂತಹ ಸಮಸ್ಯೆಯನ್ನು ದೊಡ್ಡದು ಮಾಡಿದ್ದಾರೆ. ಅತಿರೇಕದ ವರ್ತನೆಯಿಂದ ಕಾನೂನನ್ನು ಕೈಗೆತ್ತಿಕೊಂಡು ಹಿಂಸಾಚಾರಕ್ಕೆ ಇಳಿದಿರುವುದು ವಿಷಾದನೀಯ.

ಇದರಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರಬಹುದು. ಸರಕಾರವು ಇವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಮುಖ್ಯಮಂತ್ರಿಗಳು ತಕ್ಷಣ ಮಧ್ಯ ಪ್ರವೇಶಿಸಿ ಸೂಕ್ತ ಭದ್ರತೆಯೊಂದಿಗೆ ಇದನ್ನು ಸುಖಾಂತ್ಯಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

English summary
156 people arrested in connection with the violence in Wistron's plant in Kolar, Karnataka. Company has revealed that it suffered a loss of Rs 440 crore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X