ಪ್ರೇಯಸಿ ಕರೆ ಸ್ವೀಕರಿಸಲಿಲ್ಲ ಎಂದು ಯುವಕ ಆತ್ಮಹತ್ಯೆ
ಕೋಲಾರ, ಮಾರ್ಚ್ 6: ಮನಸಾರೆ ಪ್ರೀತಿಸಿದ ಯುವತಿ ಮೊಬೈಲ್ ಕರೆ ಸ್ವೀಕರಿಸಿಸಲಿಲ್ಲ ಎಂದು ಮನನೊಂದ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಶಿವಾರಪಟ್ಟಣ ಗ್ರಾಮದ ಸಮೀಪ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕೊರಟಿ ಗ್ರಾಮದ ಮನೋಜ್ ಕುಮಾರ್ (25) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಶಿವಾರಪಟ್ಟಣ ಗ್ರಾಮದ ಸಮೀಪದ ಕೆಸಿ ವ್ಯಾಲಿ ಯೋಜನೆಯಡಿ ಸ್ಥಾಪಿಸಿರುವ ಪಂಪ್‌ಹೌಸ್‌ನಲ್ಲಿ ಒಂದು ವರ್ಷದಿಂದ ಜಲಗಾರನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಗುರುವಾರ ರಾತ್ರಿ ಕೆಲಸಕ್ಕೆ ಆಗಮಿಸಿದ ಸುನೀಲ್ ಕುಮಾರ್, ತಾನು ಪ್ರೀತಿಸುತ್ತಿದ್ದ ಯುವತಿಗೆ ರಾತ್ರಿ ಮೊಬೈಲ್ ಮೂಲಕ ಕರೆ ಮಾಡಿದ್ದಾನೆ. ಆಕೆ ಕರೆ ಸ್ವೀಕರಿಸಲಿಲ್ಲ ಎಂದು ಬೇಸರಗೊಂಡು ಪಂಪ್‌ಹೌಸ್‌ನ ಕಟ್ಟಡದ ಸಮೀಪ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆತ್ಮಹತ್ಯೆ ಮಾಡಿಕೊಂಡ ಸ್ಥಳಕ್ಕೆ ಮಾಲೂರು ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777












Click it and Unblock the Notifications