ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

"ಎಸ್ಎಸ್ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಲ್ಲ"

|
Google Oneindia Kannada News

ಕೋಲ್ಕತ್ತಾ, ನವೆಂಬರ್.11: ಪಶ್ಚಿಮ ಬಂಗಾಳದಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ಪರೀಕ್ಷೆಗಳು ಇರುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗಳನ್ನು ಎದುರಿಸದೇ ಸಾಮಾನ್ಯ ಪರೀಕ್ಷೆಗಳನ್ನೇ ಬರೆದು ಕನಿಷ್ಠ ಅಂಕಗಳಿಂದ ಉತ್ತೀರ್ಣರಾದರೆ ಸಾಕಾಗುತ್ತದೆ. 2021ನೇ ಸಾಲಿನಲ್ಲಿ ಈ ಸಾಮಾನ್ಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಕರ್ನಾಟಕದಲ್ಲಿ 31063 ಕೊವಿಡ್-19 ಸಕ್ರಿಯ ಪ್ರಕರಣ!ಕರ್ನಾಟಕದಲ್ಲಿ 31063 ಕೊವಿಡ್-19 ಸಕ್ರಿಯ ಪ್ರಕರಣ!

ಪಶ್ಚಿಮ ಬಂಗಾಳದಲ್ಲಿ ಎದುರಾಗಿರುವ ಕೊವಿಡ್-19 ದುಸ್ಥಿತಿ ನಡುವೆ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆ ನಡೆಸದಿರುವುದಕ್ಕೆ ಶಿಕ್ಷಣ ಇಲಾಖೆಯು ತೀರ್ಮಾನಿಸಿರುವ ಬಗ್ಗೆ ಸಿಎಂ ಮಮತಾ ಬ್ಯಾನರ್ಜಿ ಮಾಹಿತಿ ನೀಡಿದ್ದಾರೆ.

10 And 12th Class Students No Need To Write Board Exams At West Bengal: Mamata Banerjee

ನವೆಂಬರ್.15ರ ನಂತರ ಶಾಲೆಗಳು ಪುನಾರಂಭ:

ದೇಶಾದ್ಯಂತ ಕಾಲೇಜುಗಳನ್ನು ಆರಂಭಿಸುವುದಕ್ಕೆ ಈಗಾಗಲೇ ಯುಜಿಸಿ ಕೊವಿಡ್-19 ನಿಯಂತ್ರಣ ಮತ್ತು ನಿರ್ವಹಣೆ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಿದೆ. ಪಶ್ಚಿಮ ಬಂಗಾಳದಲ್ಲಿ ನವೆಂಬರ್.15ರ ಕಾಳಿ ಪೂಜೆ ಬಳಿಕ ಶಾಲಾ-ಕಾಲೇಜುಗಳ ಪುನಾರಂಭದ ಬಗ್ಗೆ ತೀರ್ಮಾನಿಸಲಾಗುತ್ತದೆ. ನವೆಂಬರ್.15ರ ವೇಳೆಗೆ ರಾಜ್ಯದಲ್ಲಿನ ಕೊರೊನಾವೈರಸ್ ಸೋಂಕಿನ ಪರಿಸ್ಥಿತಿ ಮತ್ತು ಸೋಂಕಿತ ಪ್ರಮಾಣ ಗಮನದಲ್ಲಿಟ್ಟುಕೊಂಡು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬುಧವಾರದ ಅಂಕಿ-ಅಂಶಗಳ ಪ್ರಕಾರ, 4,13,112 ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. ರಾಜ್ಯದಲ್ಲಿ ಈವರೆಗೂ 3,72,265 ಸೋಂಕಿತರು ಗುಣಮುಖರಾಗಿದ್ದು, 33,444 ಸಕ್ರಿಯ ಪ್ರಕರಣಗಳಿವೆ. ಮಹಾಮಾರಿಗೆ ಈವರೆಗೂ 7403 ಮಂದಿ ಬಲಿಯಾಗಿದ್ದಾರೆ.

English summary
10 And 12th Class Students No Need To Write Board Exams At West Bengal: Mamata Banerjee Govt Announces.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X