ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋಲ್ಕತ್ತಾ; 217 ಪೊಲೀಸ್ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು

|
Google Oneindia Kannada News

ಕೋಲ್ಕತ್ತಾ, ಜೂನ್ 09 : ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದಲ್ಲಿ 11 ಪೊಲೀಸ್ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಖಚಿತವಾಗಿದೆ. ಪ್ರಸ್ತುತ ನಗರದಲ್ಲಿನ ಸೋಂಕಿತರ ಸಂಖ್ಯೆ 2,886.

ಕೋಲ್ಕತ್ತಾದಲ್ಲಿ ಮಂಗಳವಾರ 11 ಪೊಲೀಸ್ ಸಿಬ್ಭಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಇದುವರೆಗೂ 217 ಸಿಬ್ಬಂದಿಗೆ ಸೋಂಕು ತಗುಲಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಇಂದೋರ್-ಕೋಲ್ಕತ್ತಾ ನಡುವೆ ಶ್ರಮಿಕ್ ರೈಲು ಸಂಚಾರಕ್ಕೆ ಮನವಿ ಇಂದೋರ್-ಕೋಲ್ಕತ್ತಾ ನಡುವೆ ಶ್ರಮಿಕ್ ರೈಲು ಸಂಚಾರಕ್ಕೆ ಮನವಿ

11 ಸಿಬ್ಬಂದಿಗಳಲ್ಲಿ ಕೆಲವರು ಪೊಲೀಸ್ ತರಬೇತಿ ಶಾಲೆಯ ಸಿಬ್ಬಂದಿಗಳು, ಉಳಿದವರು ನಗರದ ವಿವಿಧ ಪೊಲೀಸ್ ಠಾಣೆಯ ಸಿಬ್ಬಂದಿಗಳಾಗಿದ್ದಾರೆ. ಕೆಲವು ಸಿಬ್ಬಂದಿಗಳು ಸೋಂಕಿನಿಂದ ಗುಣಮುಖರಾಗಿದ್ದು, ಕರ್ತವ್ಯಕ್ಕೆ ಮರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾರ್ಜ್ ಫ್ಲಾಯ್ಡ್ ಹತ್ಯೆ: ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ?ಜಾರ್ಜ್ ಫ್ಲಾಯ್ಡ್ ಹತ್ಯೆ: ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ?

11 Police Personnel Tested Positive For Coronavirus In Kolkata

"ಕೋವಿಡ್ ಪರಿಸ್ಥಿತಿಯಲ್ಲಿ ಪೊಲೀಸ್ ಸಿಬ್ಬಂದಿಗಳು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಸೋಂಕಿನಿಂದ ರಕ್ಷಣೆ ಪಡೆಯಲು ಅವರು ಸಹ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಎಲ್ಲರೂ ಬೇಗ ಗುಣಮುಖರಾಗಲಿ" ಎಂದು ಐಪಿಎಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು!ಬಳ್ಳಾರಿಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು!

ಕೋಲ್ಕತ್ತಾ ನಗರದ ಒಂದೇ ಪೊಲೀಸ್ ಠಾಣೆಯ 17 ಸಿಬ್ಭಂದಿಗಳಿಗೆ ಕೋವಿಡ್ - 19 ಸೋಂಕು ಹಬ್ಬಿದೆ. ಎಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

English summary
On June 9, 2020 11 Kolkata police personnel have tested positive for Coronavirus. Till number of infected policemen 217 in the city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X