ನೆರವು ಕೇಳಿಕೊಂಡು ಬಂದ ಸ್ನೇಹಿತನಿಂದ ನಟಿ ಮೇಲೆ ಅತ್ಯಾಚಾರ!
ಕೋಲ್ಕತ್ತಾ, ಜುಲೈ.09: ಹಣದ ನೆರವು ಕೇಳಿಕೊಂಡು ಅಪಾರ್ಟ್ ಮೆಂಟ್ ಗೆ ಆಗಮಿಸಿದ ಸ್ನೇಹಿತನೇ ನಟಿಯ ಮೇಲೆ ಅತ್ಯಾಚಾರ ನಡೆಸಿದಂತಾ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
Recommended Video
26 ವರ್ಷದ ಬೆಂಗಾಳಿ ನಟಿಯ ಮೇಲೆ ಸ್ನೇಹಿತನೇ ಅತ್ಯಾಚಾರ ನಡೆಸಿರುವ ಘಟನೆ ಕೋಲ್ಕತ್ತಾದ ಬಿಜೋಯ್ ಘರ್ ಪ್ರದೇಶದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಜಾಧವ್ ಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಕಳೆದ ಜುಲೈ.05ರಂದು ನಟಿ ಬಳಿ ಹಣದ ಸಹಾಯಕ್ಕಾಗಿ ಸ್ನೇಹಿತ ಬಿಜೋಯ್ ಘರ್ ಪ್ರದೇಶದಲ್ಲಿರುವ ಅಪಾರ್ಟ್ ಮೆಂಟ್ ಗೆ ತೆರಳಿದ್ದನು. ಈ ವೇಳೆ ನಟಿ ಒಬ್ಬಂಟಿಯಾಗಿರುವುದನ್ನೇ ಗಮನಿಸಿ ಕ್ರೌರ್ಯ ಮೆರೆದಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅತ್ಯಾಚಾರದ ವಿಡಿಯೋ ಮಾಡಿಕೊಂಡು ಬೆದರಿಕೆ:
ಪೊಲೀಸರು ನಡೆಸಿರುವ ಪ್ರಾಥಮಿಕ ತನಿಖೆ ಸಂದರ್ಭದಲ್ಲಿ ಆಪ್ತ ಸ್ನೇಹಿತನೇ ನಟಿ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಲಾಕ್ ಡೌನ್ ನಿಂದಾಗಿ ವ್ಯಾಪಾರದಲ್ಲಿ ತೀವ್ರ ನಷ್ಟ ಅನುಭವಿಸಿದ್ದ ಸ್ನೇಹಿತನು ಆರ್ಥಿಕ ನೆರವು ನೀಡುವಂತೆ ಕೋರಿ ನಟಿ ವಾಸವಿದ್ದ ಅಪಾರ್ಟ್ ಮೆಂಟ್ ಗೆ ತೆರಳಿದ್ದನು. ಈ ವೇಳೆ ನಟಿ ಮೇಲೆ ಅತ್ಯಾಚಾರ ಎಸಗಿದ್ದು ಅಲ್ಲದೇ ಅದರ ವಿಡಿಯೋ ಮಾಡಿಕೊಂಡು ಬೆದರಿಕೆ ಹಾಕಿದ್ದಾನೆ. ಪೊಲೀಸರಿಗೆ ಈ ಕುರಿತು ದೂರು ನೀಡಿದ್ದಲ್ಲಿ ವಿಡಿಯೋವನ್ನು ರಿಲೀಸ್ ಮಾಡುವುದಾಗಿ ಆವಾಜ್ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.












Click it and Unblock the Notifications