• search
  • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಜೆಪಿ ಸಂಸದನ ಮನೆ ಮುಂದೆ 3 ಬಾಂಬ್ ಎಸೆತ: ಟಿಎಂಸಿ ವಿರುದ್ಧ ಆಕ್ರೋಶ

|
Google Oneindia Kannada News

ಕೋಲ್ಕತ್ತ, ಸೆಪ್ಟೆಂಬರ್ 08: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸಂಸದರ ಮನೆಮುಂದೆ 3 ಬಾಂಬ್ ಎಸೆಯಲಾಗಿದ್ದು, ಟಿಎಂಸಿ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸದ ಸಮೀಪ ಬುಧವಾರ ಬೆಳಗಿನ ಜಾವ ವೇಳೆ 3 ಕಚ್ಚಾ ಬಾಂಬ್‌ಗಳನ್ನು ಎಸೆಯಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯ ಹಾನಿಯಾಗಿಲ್ಲವೆಂದು ತಿಳಿದುಬಂದಿದೆ.

ಬಾಂಬ್ ದಾಳಿಯ ವಿಷಯ ತಿಳಿದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ದೆಹಲಿಯಲ್ಲಿರುವ ಸಂಸದ ಅರ್ಜುನ್ ಸಿಂಗ್ ಘಟನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಬುಧವಾರ ಸಂಜೆ ವೇಳೆಗೆ ಅವರು ಕೋಲ್ಕತಾಗೆ ವಾಪಸ್ ಆಗುವ ನಿರೀಕ್ಷೆ ಇದೆ ಎಂದು ವರದಿಯಾಗಿದೆ. ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸದ ಬಳಿ ಬಾಂಬ್ ದಾಳಿ ನಡೆಸಿದವರು ಬಹುಶಃ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿರಬಹುದು ಎಂದು ಬಿಜೆಪಿ ಅಧ್ಯಕ್ಷ ದಿಲೀಫ್ ಘೋಷ್ ಆರೋಪಿಸಿದ್ದಾರೆ.

ಆದಾಗ್ಯೂ, ಟಿಎಂಸಿ ಬಿಜೆಪಿಯ ಆರೋಪವನ್ನು ನಿರಾಕರಿಸಿದೆ ಮತ್ತು ಈ ದಾಳಿಯು ಬಂಗಾಳ ಬಿಜೆಪಿಯಲ್ಲಿನ ಆಂತರಿಕ ವೈಷಮ್ಯದ ಪರಿಣಾಮ ಎಂದು ಹೇಳಿದೆ.

ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಕರ್ ಕೂಡ ಟ್ವೀಟ್ ಮಾಡುವ ಮೂಲಕ ಈ ಘಟನೆಯನ್ನು ಖಂಡಿಸಿದ್ದಾರೆ. 'ಬಾಂಬ್ ದಾಳಿ ನಡೆದಿರುವುದು ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಆತಂಕ ಮೂಡಿಸಿದೆ' ಎಂದಿರುವ ಅವರು, ತಪ್ಪಿತಸ್ಥರ ವಿರುದ್ಧ ತ್ವರಿತ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

ಅಪರಾಧಿಗಳನ್ನು ಗುರುತಿಸಲು ಮತ್ತು ದಾಳಿಯ ಹಿಂದಿನ ಉದ್ದೇಶವನ್ನು ತಿಳಿದುಕೊಳ್ಳಲು ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಸಿಂಗ್ ಅವರ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಟ್ಯಾಗ್ ಮಾಡಿ, ಅವರ ಭದ್ರತೆಯ ಕುರಿತು ಈ ಹಿಂದೆಯೂ ಪ್ರಸ್ತಾಪಿಸಲಾಗಿತ್ತು ಎಂದು ಆರೋಪಿಸಿದ್ದಾರೆ.
ಬಂಗಾಳ ಬಿಜೆಪಿಯಲ್ಲಿನ ಆಂತರಿಕ ವೈಷಮ್ಯದಿಂದಾಗಿ ಬಾಂಬ್ ಸ್ಫೋಟ ನಡೆಸಿರುವುದಾಗಿ ತೃಣಮೂಲ ಕಾಂಗ್ರೆಸ್ ಪ್ರತಿಕ್ರಿಯಿಸಿರುವುದಾಗಿ ವರದಿಯಾಗಿದೆ.

ಕೋಲ್ಕತ್ತಾದಿಂದ 100 ಕಿ.ಮೀ ದೂರದಲ್ಲಿರುವ ಜಗತ್ದಾಲ್ ಪ್ರದೇಶದಲ್ಲಿರುವ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಮನೆ ಸಮೀಪವೇ ಕಚ್ಚಾ ಬಾಂಬ್ ಗಳನ್ನು ಎಸೆಯಲಾಗಿದೆ.

ಇಂದು ಬೆಳಗ್ಗೆ 6.30ರ ವೇಳೆ ಬೈಕ್ ನಲ್ಲಿ ಆಗಮಿಸಿದ್ದ ಮೂವರು ದುಷ್ಕರ್ಮಿಗಳು 3 ಬಾಂಬ್ ಗಳನ್ನು ಎಸೆದು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆಂದು ತಿಳಿದುಬಂದಿದೆ.

ಘಟನೆ ನಡೆದ ಸಂದರ್ಭದಲ್ಲಿ ಅರ್ಜುನ್ ಸಿಂಗ್ ಅವರು ಮನೆಯಲ್ಲಿರಲಿಲ್ಲ. ಆದರೆ ಅವರ ಕುಟುಂಬ ಸದಸ್ಯರು ಮಾತ್ರ ಮನೆಯೊಳಗೆ ಇದ್ದರು. ಸಿಂಗ್ ನಿವಾಸದ ಹೊರಗೆ ಪೊಲೀಸ್ ಕಾವಲಿದ್ದರೂ ಈ ಘಟನೆ ನಡೆದಿದೆ ಅಂತಾ ತಿಳದುಬಂದಿದೆ.

ಈ ವರ್ಷದ ಏಪ್ರಿಲ್​​ ತಿಂಗಳಲ್ಲಿ, ಅರ್ಜುನ್​ ಸಿಂಗ್​ ತಮ್ಮ ಮೇಲೆ ಗುಂಪೊಂದು ದಾಳಿ ಮಾಡಿದೆ ಎಂದು ಆರೋಪ ಮಾಡಿದ್ದರು. ಉತ್ತರ ಕೋಲ್ಕತ್ತದ ಬೆಲ್ಗಾಚಿಯಾದಲ್ಲಿ ನನ್ನ ಮೇಲೆ ಗುಂಡಿನ ದಾಳಿ ಮಾಡಲು ಪ್ರಯತ್ನ ನಡೆದಿತ್ತು.

ನನ್ನ ರಕ್ಷಣಾ ಸಿಬ್ಬಂದಿ ಕಾಪಾಡಿದರು ಎಂದು ಆಗ ಹೇಳಿದ್ದರು. ಅರ್ಜುನ್​ ಸಿಂಗ್​ ಮೊದಲು ತೃಣಮೂಲ ಕಾಂಗ್ರೆಸ್ ಶಾಸಕರೇ ಆಗಿದ್ದರು. 2019ರ ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಸೇರಿ, ಬಾರಕ್​ಪುರ ಕ್ಷೇತ್ರದಲ್ಲಿ ಗೆದ್ದು ಸಂಸದರಾಗಿದ್ದಾರೆ.

ಬಾಂಬ್ ದಾಳಿಯಲ್ಲಿ ಯಾರೂ ಗಾಯಗೊಂಡಿಲ್ಲ, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸಂಸದ ಅರ್ಜುನ್ ಸಿಂಗ್ ದೆಹಲಿಯಲ್ಲಿದ್ದು, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬುಧವಾರ ಸಂಜೆ ಕೋಲ್ಕತ್ತಾಗೆ ವಾಪಸ್ ಆಗುವ ನಿರೀಕ್ಷೆ ಇದೆ ಎಂದು ವರದಿಯಾಗಿದೆ.

ಪಶ್ಚಿಮ ಬಂಗಾಳದಲ್ಲಿ ನಿಷ್ಕಾರಣದ ಹಿಂಸಾಚಾರ ನಿಲ್ಲುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ, ಬೆಳಗ್ಗೆಯೇ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರ ನಿವಾಸದ ಹೊರ ಭಾಗದಲ್ಲಿ ಬಾಂಬ್ ದಾಳಿ ನಡೆಸಿರುವುದು ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಆತಂಕ ಮೂಡಿಸಿರುವುದಾಗಿ ಪಶ್ಚಿಮ ಬಂಗಾಳ ಗವರ್ನರ್ ಜಗದೀಪ್ ಧನ್ಕಾರ್ ತಿಳಿಸಿದ್ದಾರೆ.

English summary
Three bombs were thrown at BJP MP Arjun Singh's home near Kolkata early this morning, scarring the iron gate to the house but causing no injuries to anyone.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X