Breaking: 'ಬಿಜೆಪಿ ಸಂಪರ್ಕದಲ್ಲಿ 38 ತೃಣಮೂಲ ಶಾಸಕರು'
ಕೊಲ್ಕತ್ತಾ, ಜುಲೈ 27: ತೃಣಮೂಲ ಕಾಂಗ್ರೆಸ್ ಪಕ್ಷದ 38 ಸಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಮತ್ತು ಅವರು ವಿರೋಧ ಪಕ್ಷದೊಂದಿಗೆ "ಅತ್ಯಂತ ಉತ್ತಮ ಸಂಬಂಧ" ಹೊಂದಿದ್ದಾರೆ ಎಂದು ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.
ಕೋಲ್ಕತ್ತಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 38 ಶಾಸಕರ ಪೈಕಿ 21 ಶಾಸಕರು ಬಿಜೆಪಿಯೊಂದಿಗೆ ನೇರ ಸಂಪರ್ಕದಲ್ಲಿದ್ದಾರೆ ಎಂದು ಘೋಷಿಸಿದ್ದಾರೆ.
"ನೀವು ಬ್ರೇಕಿಂಗ್ ನ್ಯೂಸ್ ಕೇಳಲು ಬಯಸುವಿರಾ? ಈ ಕ್ಷಣದಲ್ಲಿ, 38 ಟಿಎಂಸಿ ಶಾಸಕರು ನಮ್ಮೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ, ಅವರಲ್ಲಿ 21 ಮಂದಿ ನೇರ (ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ)" ಎಂದು ಹೇಳಿರುವ ವಿಡಿಯೋವನ್ನು ಸುದ್ದಿ ಸಂಸ್ಥೆ ANI ಹಂಚಿಕೊಂಡಿದೆ.
#WATCH | West Bengal: Do you want to hear breaking news? At this moment, 38 TMC MLAs have very good relations with us, out of which 21 are in direct (contact with us): BJP leader Mithun Chakraborty in Kolkata pic.twitter.com/1AI7kB4H5I
— ANI (@ANI) July 27, 2022
ಕಳೆದ ವರ್ಷ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಮುನ್ನ, ಟಿಎಂಸಿಯ ಪ್ರಮುಖ ನಾಯಕರಾಗಿದ್ದ ಸುವೇಂಧು ಅಧಿಕಾರಿ ಸೇರಿದಂತೆ ಹಲವಾರು ತೃಣಮೂಲ ನಾಯಕರು ಪಕ್ಷವನ್ನು ತೊರೆದು ಬಿಜೆಪಿಗೆ ಸೇರಿದ್ದರು. ಆದರೂ, ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಟಿಎಂಸಿ ಭರ್ಜರಿ ಜಯ ಗಳಿಸಿ ಮತ್ತೆ ಅಧಿಕಾರಕ್ಕೆ ಮರಳಿದರು.

ಮಮತಾ ಬ್ಯಾನರ್ಜಿ ಮುಖ್ಯಮಂತ್ರಿಯಾದ ಬಳಿಕ ಬಿಜೆಪಿಗೆ ತೆರಳಿದ್ದ ಹಲವಾರು ನಾಯಕರು ಕ್ಷಮೆಯಾಚಿಸಿ ತೃಣಮೂಲಕ್ಕೆ ಮರಳಿದರು.
ಟಿಎಂಸಿ ವಿಜಯದ ನಂತರ, ಬಿಜೆಪಿಯ ಪಶ್ಚಿಮ ಬಂಗಾಳ ಘಟಕದಲ್ಲಿ ಹಲವು ಬಿರುಕುಗಳು ಕಾಣಿಸಿಕೊಂಡಿವೆ. ಪ್ರಸ್ತುತ, ಸುಕಾಂತ ಮಜುಂದಾರ್ ಅವರು ಬಂಗಾಳದಲ್ಲಿ ಪಕ್ಷದ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ. ಇವುಗಳ ನಡುವೆಯೇ ನಟ ಮಿಥುನ್ ಚಕ್ರವರ್ತಿ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್ ಸಿಡಿಸಿ ಟಿಎಂಸಿ ಶಾಸಕರು ಬಿಜೆಪಿಯ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ. ಇನ್ನು ಈ ಕುರಿತು ಟಿಎಂಸಿ ಯಾವುದೇ ಹೇಳಿಕೆ ನೀಡಿಲ್ಲ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications