ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ರಮ ಗಡಿ ಪ್ರವೇಶ: ಭಾರತೀಯರು, ಬಾಂಗ್ಲಾದೇಶೀಯರು ಸೇರಿ 17 ಮಂದಿ ಬಂಧನ

|
Google Oneindia Kannada News

ಕೊಲ್ಕತ್ತಾ, ಅಕ್ಟೋಬರ್ 31: ಅಕ್ರಮವಾಗಿ ಗಡಿಯನ್ನು ದಾಟಲು ಯತ್ನಿಸುತ್ತಿದ್ದ ಒಟ್ಟು 17 ಮಂದಿಯನ್ನು ಗಡಿಭದ್ರತಾ ಪಡೆ ಯೋಧರು ಬಂಧಿಸಿದ್ದಾರೆ.

ಸಂಬಂಧಿಕರನ್ನು ಭೇಟಿಯಾಗಲು ಬಾಂಗ್ಲಾದೇಶಕ್ಕೆ ಹೊರಟಿದ್ದ ಹಾಗೂ ಉದ್ಯೋಗಕ್ಕಾಗಿ ಬೆಂಗಳೂರಿಗೆ ತೆರಳಲು ಅಕ್ರಮವಾಗಿ ಭಾರತ-ಬಾಂಗ್ಲಾ ಗಡಿ ದಾಟುತ್ತಿದ್ದ 17 ಮಂದಿ ಬಾಂಗ್ಲಾದೇಶಿಯರು ಮತ್ತು ಭಾರತೀಯರನ್ನು ಬಂಧಿಸಲಾಗಿದೆ.

ಪುಲ್ವಾಮಾ ಉಗ್ರರ ದಾಳಿ ನಡೆಸಿದ್ದು ನಾವೇ: ಬಹಿರಂಗವಾಗಿ ಒಪ್ಪಿಕೊಂಡ ಪಾಕ್ಪುಲ್ವಾಮಾ ಉಗ್ರರ ದಾಳಿ ನಡೆಸಿದ್ದು ನಾವೇ: ಬಹಿರಂಗವಾಗಿ ಒಪ್ಪಿಕೊಂಡ ಪಾಕ್

ಬಂಧಿತ ಭಾರತೀಯರು ಪಶ್ಚಿಮ ಬಂಗಾಳದ ಬೆನಪೋಲೆ ಪ್ರದೇಶದಲ್ಲಿ ಅಕ್ರಮವಾಗಿ ಗಡಿ ದಾಟಿ ಬಾಂಗ್ಲಾದೇಶದಲ್ಲಿರುವ ತಮ್ಮ ಸಂಬಂಧಿಕರನ್ನು ಭೇಟಿಯಾಗಿ ವಾಪಸ್ ಭಾರತಕ್ಕೆ ಹಿಂದಿರುಗುತ್ತಿದ್ದೆವು ಎಂದು ಹೇಳಿದ್ದರೆ, ಬಾಂಗ್ಲಾದೇಶಿಯರು ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ.

5 Bangladeshis, 12 Indians Apprehended By BSF For Illeglly Crossing Border

ಬಂಧಿತ 17 ಮಂದಿಯನ್ನು ಬಿಎಸ್ಎಫ್ ಯೋಧರು ಹನ್ಸಖಾಲಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಬಂಧಿತರಲ್ಲಿ ಐವರು ಬಾಂಗ್ಲಾದೇಶಿಯರು ಮತ್ತು 12 ಮಂದಿ ಭಾರತೀಯರು ಇದ್ದಾರೆ. ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿರುವ ಭಾರತ-ಬಾಂಗ್ಲಾ ಗಡಿಯ ರಾಮನಗರ ಔಟ್‌ಪೋಸ್ಟ್ ಮೂಲಕ ಗಡಿ ದಾಟುತ್ತಿದ್ದ ಈ ಹದಿನೇಳು ಮಂದಿಯನ್ನು ಬಿಎಸ್ಎಫ್ ಯೋಧರು ಬಂಧಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮತ್ತೊಂದು ಘಟನೆ ನಡೆದಿದ್ದು, ಅದೇ ದಿನ ಒಬ್ಬ ಭಾರತೀಯನನ್ನು ಬಿಎಸ್ಎಫ್ ತಂಡದವರು ಖಾಸ್ಮಾಹಲ್ ಔಟ್ ಪೋಸ್ಟ್‌ನಲ್ಲಿ ವಶಕ್ಕೆ ಪಡೆದು, ಅವರಿಂದ 10 ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಜಾನುವಾರುಗಳನ್ನು ಕಳ್ಳಸಾಗಣೆ ಮಾಡಲಾಗಿತ್ತು ಎಂದು ಹೇಳಲಾಗಿದೆ.

English summary
Five Bangladeshis and 12 Indian nationals were apprehended by Border Security Force personnel in separate incidents, for illegally crossing the Indo-Bangla border in West Bengal’s Nadia district, a statement issued by the paramilitary force said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X