ಗಾಲ್ವಾನ್ ಕಣಿವೆಯಲ್ಲಿ ಹುತಾತ್ಮರಾದ ಯೋಧರ ಕುಟುಂಬಕ್ಕೆ 5 ಲಕ್ಷ ಪರಿಹಾರ, ಸರ್ಕಾರಿ ಕೆಲಸ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ, ಜೂನ್ 17: ಪೂರ್ವ ಲಡಾಕ್‌ನ ಗಾಲ್ವಾನ್ ಕಣಿವೆಯಲ್ಲಿ ಹುತಾತ್ಮರಾದ ಇಬ್ಬರು ಪಶ್ಚಿಮ ಬಂಗಾಳದ ಸೈನಿಕರ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರ್ಧರಿಸಿದ್ದಾರೆ.

ಎಲ್‌ಎಸಿಯಲ್ಲಿ ಗಾಲ್ವಾನ್ ಕಣಿವೆಯಲ್ಲಿ ಚೀನಾ ಜೊತೆ ನಡೆದ ಘರ್ಷಣೆಯಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳದ ಇಬ್ಬರು ಸೈನಿಕರ ಕುಟುಂಬಗಳಿಗೆ ಸರ್ಕಾರ ಐದು ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಪ್ರಕಟಿಸಿದ್ದಾರೆ. ಇದಲ್ಲದೆ, ಈ ಹುತಾತ್ಮ ಸೈನಿಕರ ಕುಟುಂಬದಲ್ಲಿ ಒಬ್ಬ ಸದಸ್ಯರಿಗೂ ರಾಜ್ಯದ ಪರವಾಗಿ ಕೆಲಸ ನೀಡಲಾಗುವುದು.

ಜೂನ್ 19 ರಂದು ಇಂಡೋ-ಚೀನಾ ಸಂಘರ್ಷದ ಕುರಿತು ಪ್ರಧಾನಿ ಸಭೆ ಕರೆದ ಎಲ್ಲ ಪಕ್ಷಗಳ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಮ್ಮ ರಾಷ್ಟ್ರದ ಬಗ್ಗೆ ನಮಗೆ ಹೆಮ್ಮೆ ಇದೆ, ನಾವು ಒಟ್ಟಾಗಿ ಹೋರಾಡುತ್ತೇವೆ ಎಂದು ಹೇಳಿದರು.

5 Lakh Compensation And Govt Job To A Family Member Of Soldiers From The State:WB

ಚೀನಾದ ಸೇನೆಯೊಂದಿಗೆ ಭಾರತೀಯ ಸೇನೆಯ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾದರು. ಆ 20 ಸೈನಿಕರಲ್ಲಿ ಇಬ್ಬರು ಪಶ್ಚಿಮ ಬಂಗಾಳದವರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+