• search
  • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋಲ್ಕತ್ತಾ ಐಐಎಂನ 61 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

|

ಕೋಲ್ಕತ್ತಾ, ಏಪ್ರಿಲ್ 12: ಕೋಲ್ಕತ್ತಾದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್‌ನ 61 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದ್ದು, ಎಲ್ಲರನ್ನೂ ಕ್ಯಾಂಪಸ್‌ನಲ್ಲಿಯೇ ಐಸೊಲೇಷನ್‌ನಲ್ಲಿರಿಸಲಾಗಿದೆ.

ಏಪ್ರಿಲ್ 2ರಿಂದ ಈವರೆಗೂ 61 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಮಾರ್ಚ್‌ ತಿಂಗಳ ಕೊನೆಯಲ್ಲಿ ಕೆಲವು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು, ಆ ವಿದ್ಯಾರ್ಥಿಗಳನ್ನು ಕ್ಯಾಂಪಸ್‌ನ ಎರಡು ಕಟ್ಟಡಗಳಲ್ಲಿ ಪ್ರತ್ಯೇಕ ಕೋಣೆಗಳಲ್ಲಿ ಐಸೊಲೇಷನ್‌ನಲ್ಲಿರಿಸಲಾಗಿದೆ.

ಕೋವಿಡ್-19 ಸಮಸ್ಯೆಗೆ ಒಳಗಾದ ವಿದ್ಯಾರ್ಥಿಗಳಿಗೆ ಸಿಬಿಎಸ್‌ಇ ಪ್ರಾಕ್ಟಿಕಲ್ ಪರೀಕ್ಷೆ

ಮೂರು ವೈದ್ಯರಿಗೆ ಉಸ್ತುವಾರಿ ವಹಿಸಲಾಗಿದ್ದು, ಐಐಎಂ ಉನ್ನತ ಆರೋಗ್ಯ ಸಂಸ್ಥೆಗಳೊಂದಿಗೆ ಮಾರ್ಗದರ್ಶನ ಪಡೆದುಕೊಳ್ಳುತ್ತಿದೆ. ಏಪ್ರಿಲ್ ಆರಂಭದಿಂದ ಸುಮಾರು 570 ವಿದ್ಯಾರ್ಥಿಗಳು ಕ್ಯಾಂಪಸ್ ತೊರೆದು ಹೋಗಿದ್ದಾರೆ. 335 ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿದ್ದು, ಅದರಲ್ಲಿ 61 ವಿದ್ಯಾರ್ಥಿಗಳು ಐಸೊಲೇಷನ್‌ನಲ್ಲಿದ್ದಾರೆ.

"ಕೆಲವು ವಿದ್ಯಾರ್ಥಿಗಳಲ್ಲಿ ಸೋಂಕಿನ ಮಂದಗತಿಯ ಲಕ್ಷಣಗಳು ಕಂಡುಬಂದಿದ್ದು, ಯಾರನ್ನೂ ಸದ್ಯಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿಲ್ಲ. ತುರ್ತು ಬಳಕೆಗೆ ಆಮ್ಲಜನಕ ಸಿಲಿಂಡರ್ ಹಾಗೂ ಆಂಬುಲೆನ್ಸ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳಲಾಗಿದೆ" ಎಂದು ಐಐಎಂ ಪ್ರೊಫೆಸರ್ ಪ್ರಶಾಂತ್ ಮಿಶ್ರಾ ತಿಳಿಸಿದ್ದಾರೆ.

ತಿಂಗಳಿನಿಂದ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದಂತೆ, ಕ್ಯಾಂಪಸ್‌ಗೆ ಮರಳುವ ವಿದ್ಯಾರ್ಥಿಗಳಿಗೆ ನಿಯಮಗಳನ್ನು ವಿಧಿಸಲಾಗಿದೆ. ಕ್ಯಾಂಪಸ್‌ಗೆ ಮರಳುವ ವಿದ್ಯಾರ್ಥಿಗಳು ಕೊರೊನಾ ನೆಗೆಟಿವ್ ವರದಿ ತರುವುದು ಕಡ್ಡಾಯವಾಗಿದೆ. ಜನವರಿಯಲ್ಲಿ ಸುಮಾರು 900 ವಿದ್ಯಾರ್ಥಿಗಳು ಮರಳಿದ್ದು, ಎಲ್ಲರೂ ಕೊರೊನಾ ನೆಗೆಟಿವ್ ವರದಿ ಹೊಂದಿದ್ದರು.

ಆದರೆ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಹೋಲಿ ಆಚರಣೆಯಲ್ಲಿ ತೊಡಗಿದ್ದು, ಆನಂತರ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗಿದೆ. ಮೊದಲು ಏಪ್ರಿಲ್ 2ರಂದು ಏಳು ವಿದ್ಯಾರ್ಥಿಗಳಲ್ಲಿ ಕೊರೊನಾ ಕಂಡುಬಂದಿತ್ತು. 4ರಂದು ಆರು ಮಂದಿಯಲ್ಲಿ ಹಾಗೂ ಏಪ್ರಿಲ್ 6ರಂದು ಹತ್ತೊಂಬತ್ತು ವಿದ್ಯಾರ್ಥಿಗಳಲ್ಲಿ ಸೋಂಕು ಕಂಡುಬಂದಿತ್ತು. ಇದೀಗ ಸಂಖ್ಯೆ 61ಕ್ಕೆ ತಲುಪಿದೆ.

ಐಐಎಂ ಅಹಮದಾಬಾದ್ ಹಾಗೂ ಬೆಂಗಳೂರಿನ ವಿದ್ಯಾರ್ಥಿಗಳಲ್ಲಿಯೂ ಕೊರೊನಾ ಸೋಂಕು ಕಂಡುಬಂದ ವರದಿಯಾಗಿತ್ತು.

English summary
61 students at the Indian Institute of Management kolkata have tested positive for the coronavirus since April 2
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X