ಪಶ್ಚಿಮ ಬಂಗಾಳದಲ್ಲಿ ಹಳಿತಪ್ಪಿದ ಎಕ್ಸ್‌ಪ್ರೆಸ್ ರೈಲು: 7 ಮಂದಿ ಬಲಿ, 45 ಮಂದಿಗೆ ಗಾಯ

ಜಲ್ಪೈಗುರಿ/ ಪಶ್ಚಿಮ ಬಂಗಾಳ ಜನವರಿ 14: ಗುರುವಾರ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ದೊಮೊಹನಿ ಬಳಿ ಬಿಕಾನೇರ್-ಗುವಾಹಟಿ ಎಕ್ಸ್‌ಪ್ರೆಸ್ ರೈಲಿನ 12 ಬೋಗಿಗಳು ಹಳಿತಪ್ಪಿ ಪಲ್ಟಿಯಾಗಿ ಏಳು ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 45 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಪಶ್ಚಿಮ ಬಂಗಾಳ ಸರ್ಕಾರದ ಮೂಲಗಳ ಪ್ರಕಾರ ಕನಿಷ್ಠ 50 ಗಾಯಾಳುಗಳನ್ನು ರಕ್ಷಿಸಲಾಗಿದೆ. 10 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಾಯಗೊಂಡವರಲ್ಲಿ 24 ಮಂದಿಯನ್ನು ಜಲಪೈಗುರಿ ಜಿಲ್ಲಾ ಆಸ್ಪತ್ರೆಗೆ ಮತ್ತು 16 ಮಂದಿಯನ್ನು ಮೊಯ್ನಗುರಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ತೀವ್ರವಾಗಿ ಗಾಯಗೊಂಡವರನ್ನು ಉತ್ತರ ಬಂಗಾಳ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗುವುದು ಎಂದು ನ್ಯೂ ಫ್ರಾಂಟಿಯರ್ ರೈಲ್ವೆ ಮೂಲಗಳು ತಿಳಿಸಿವೆ.ಹಳಿ ತಪ್ಪಿದ ಕೋಚ್‌ಗಳಲ್ಲಿ ಹಲವು ಪ್ರಯಾಣಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಗ್ಯಾಸ್ ಕಟ್ಟರ್‌ಗಳನ್ನು ಬಳಸಿ ಕೋಚ್‌ಗಳನ್ನು ಕಟ್ ಮಾಡಲಾಗುತ್ತಿದೆ.

ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಬೆಳಗ್ಗೆ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಘಟನೆಯನ್ನು ಪರಿಶೀಲಿಸಿದರು. ಘಟನಯ ಬಗ್ಗೆ ಟ್ವೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲು ತಿಳಿಸಲಾಗಿದೆ. ನಾವು ನಮ್ಮ ಎಲ್ಲಾ ಕರ್ತವ್ಯಗಳನ್ನು ಪೂರೈಸುತ್ತೇವೆ ಎಂದು ಅವರು ಹೇಳಿದ್ದಾರೆ.

7 Killed, 45 Injured As Express Train Derails In West Bengal

ಜೊತೆಗೆ ಈ ಬಗ್ಗೆ ಟ್ವಿಟ್ ಮಾಡಿದ ಅವರು, "ದುರದೃಷ್ಟಕರ ಅಪಘಾತದಲ್ಲಿ, ಇಂದು(ಜನವರಿ 13) ಸಂಜೆ ಪಶ್ಚಿಮ ಬಂಗಾಳ ಬಳಿ ಬಿಕಾನೇರ್ - ಗುವಾಹಟಿ ಎಕ್ಸ್‌ಪ್ರೆಸ್‌ನ 12 ಕೋಚ್‌ಗಳು ಹಳಿತಪ್ಪಿವೆ. ತ್ವರಿತ ರಕ್ಷಣಾ ಕಾರ್ಯಾಚರಣೆಗಾಗಿ ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ" ಎಂದು ತಿಳಿಸಿದ್ದಾರೆ. ಇನ್ನೂ ಘಟನೆಯಲ್ಲಿ ಮೃತಪಟ್ಟವರಿಗೆ 5 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ, ಗಂಭೀರವಾಗಿಲ್ಲದವರಿಗೆ 25,000 ಪರಿಹಾರ ಘೋಷಿಸಲಾಗಿದೆ.

ಜೊತೆಗೆ ವೈದ್ಯಕೀಯ ತಂಡಗಳು, ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಪ್ರಧಾನಿ ಮೋದಿ ಅವರು ಪರಿಸ್ಥಿತಿ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದ್ದಾರೆ. ನಮ್ಮ ಗಮನ ರಕ್ಷಣೆಯ ಮೇಲೆ ಇದೆ. ಪರಿಹಾರವನ್ನು ಸಹ ಘೋಷಿಸಲಾಗಿದೆ" ಎಂದು ಸಚಿವರು ಸುದ್ದಿ ಸಂಸ್ಥೆ ANI ಗೆ ತಿಳಿಸಿದರು. ಅಪಘಾತದ ಕುರಿತು ಉನ್ನತ ಮಟ್ಟದ ರೈಲ್ವೆ ಆಯುಕ್ತರು ತನಿಖೆಗೆ ಆದೇಶಿಸಿದ್ದಾರೆ. ರೈಲ್ವೆ ಮಂಡಳಿಯ ಅಧ್ಯಕ್ಷರು ಮತ್ತು ಡಿಜಿ (ಸುರಕ್ಷತೆ), ರೈಲ್ವೆ ಮಂಡಳಿಯ ಅಧಿಕಾರಿಗಳು ದೆಹಲಿಯಿಂದ ಅಪಘಾತದ ಸ್ಥಳಕ್ಕೆ ತೆರಳುತ್ತಿದ್ದಾರೆ.

ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿಗಳೊಂದಿಗಿನ ಸಭೆಯ ಮಧ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಅಪಘಾತದ ಬಗ್ಗೆ ವಿಚಾರಿಸಿದರು. ಜಲ್ಪೈಗುರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಜೊತೆ ಮಾತನಾಡಿದ ಬ್ಯಾನರ್ಜಿ, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಪ್ರಧಾನಿಗೆ ವಿವರಿಸಿದರು.

ಅಪಘಾತದ ಸ್ಥಳದ ದೃಶ್ಯಗಳಲ್ಲಿ ಅಪಾರ ಹಾನಿಗೊಳಗಾದ ರೈಲು ಕೋಚ್‌ಗಳ ಅವಶೇಷಗಳು ಅಪಘಾತದ ತೀವ್ರತೆಯನ್ನು ತೋರಿಸುತ್ತಿವೆ. ಇನ್ನೂ ರೈಲಿನಲ್ಲಿ ಅನೇಕರು ಸಿಲುಕಿರುವ ಶಂಕೆ ಇದ್ದು ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ನ್ಯೂ ದೋಮೊಹನಿ ಮತ್ತು ನ್ಯೂ ಮೇನಗುರಿ ರೈಲು ನಿಲ್ದಾಣಗಳ ನಡುವೆ ಸಂಜೆ 5 ಗಂಟೆ ಸುಮಾರಿಗೆ ರೈಲು ಹಳಿತಪ್ಪಿತು. ರೈಲು ಬುಧವಾರ ಬಿಕಾನೇರ್ ಜಂಕ್ಷನ್‌ನಿಂದ ಹೊರಟು ಗುರುವಾರ ಸಂಜೆ ಗುವಾಹಟಿ ತಲುಪಬೇಕಿತ್ತು. ರೈಲ್ವೆ ಮತ್ತು ಜಿಲ್ಲಾಡಳಿತ ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಬೋಗಿಗಳು ಇಳಿಜಾರಿನ ಕೆಳಗೆ ಬಿದ್ದು ಪಲ್ಟಿಯಾದಾಗ, ಮತ್ತೊಂದು ಕೋಚ್ ಇನ್ನೊಂದರ ಮೇಲೆ ಬಿದ್ದಿರುವ ದೃಶ್ಯಗಳು ಕಂಡು ಬಂದಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+