• search
  • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ABP-CNX ಚುನಾವಣಾಪೂರ್ವ ಸಮೀಕ್ಷೆ: ಪಶ್ಚಿಮ ಬಂಗಾಳದಲ್ಲಿ ಹೇಗಿದೆ ಜನಾಭಿಪ್ರಾಯ?

|

ಕೋಲ್ಕತ್ತಾ, ಮಾರ್ಚ್.08: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಅಖಾಡದಲ್ಲಿ ರಾಜಕಾರಣದ ರಂಗು ಹರಡಿದೆ. 294 ವಿಧಾನಸಭಾ ಕ್ಷೇತ್ರಗಳ ಪೈಕಿ ತೃಣಮೂಲ ಕಾಂಗ್ರೆಸ್ ಪಕ್ಷವು 291 ಕ್ಷೇತ್ರಗಳಿಗೆ ತನ್ನ ಎಲ್ಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಭಾರತೀಯ ಜನತಾ ಪಕ್ಷ 57 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಎಡಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ 13 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ.

ಟೈಮ್ಸ್ ನೌ ಸಮೀಕ್ಷೆ: ಡಿಎಂಕೆ- ಕಾಂಗ್ರೆಸ್ ಮೈತ್ರಿಗೆ ಭರ್ಜರಿ ಜಯ

ಪಶ್ಚಿಮ ಬಂಗಾಳದಲ್ಲಿ ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್.27, ಏಪ್ರಿಲ್.1, ಏಪ್ರಿಲ್.6, ಏಪ್ರಿಲ್.10, ಏಪ್ರಿಲ್.17, ಏಪ್ರಿಲ್.22, ಏಪ್ರಿಲ್.26 ಮತ್ತು ಏಪ್ರಿಲ್.29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ.2ರಂದು ಹೊರ ಬೀಳಲಿದೆ. ಬಿಜೆಪಿ ಮತ್ತು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷದ ನಡುವೆ ನೇರಹಣಾಹಣಿ ನಡೆಯುತ್ತಿದೆ. ರಾಜ್ಯ ರಾಜಕೀಯ ಬೆಳವಣಿಗೆ ನಡುವೆ ಎಬಿಪಿ-ಸಿಎನ್ಎಕ್ಸ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಚಿತ್ರಣ ಇಲ್ಲಿದೆ.

ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಮುನ್ನಡೆ

ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಮುನ್ನಡೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಬಿಪಿ-ಸಿಎನ್ಎಕ್ಸ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು 154 ರಿಂದ 164 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಈ ಮೊದಲು ನಡೆಸಿದ ಸಮೀಕ್ಷೆಯಲ್ಲಿ 117 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿ ಎರಡನೇ ಬಾರಿ ನಡೆಸಿದ ಸಮೀಕ್ಷೆಯಲ್ಲಿ 102 ರಿಂದ 112 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಳ್ಳಲಿದೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ.

ABP ಸಮೀಕ್ಷೆ ಯಾವ ಪಕ್ಷಕ್ಕೆ ಹೆಚ್ಚಿನ ಸ್ಥಾನ?

ABP ಸಮೀಕ್ಷೆ ಯಾವ ಪಕ್ಷಕ್ಕೆ ಹೆಚ್ಚಿನ ಸ್ಥಾನ?

ಪಕ್ಷ ಸಿಎನ್ಎಕ್ಸ್ ಸಮೀಕ್ಷೆ 2016ರ ಚುನಾವಣೆ
ಟಿಎಂಸಿ 154-164 211
ಬಿಜೆಪಿ 102-112 03
ಎಡ-ಐಎನ್ ಸಿ 22-30 76
ಇತರೆ 01-03 04
ಒಟ್ಟು 294 294
ಯಾವ ಪಕ್ಷಕ್ಕೆ ಎಷ್ಟು ಪ್ರಮಾಣದಲ್ಲಿ ಮತ?

ಯಾವ ಪಕ್ಷಕ್ಕೆ ಎಷ್ಟು ಪ್ರಮಾಣದಲ್ಲಿ ಮತ?

ಪಕ್ಷ ಸಿಎನ್ಎಕ್ಸ್ ಸಮೀಕ್ಷೆ 2016ರ ಚುನಾವಣೆ
ಟಿಎಂಸಿ ಶೇ.41.53 ಶೇ.44.91
ಬಿಜೆಪಿ ಶೇ.34.22 ಶೇ.10.16
ಎಡ-ಐಎನ್ ಸಿ ಶೇ.19.66 ಶೇ.37.94
ಇತರೆ ಶೇ.04.59 ಶೇ.06.99
ಒಟ್ಟು ಶೇ.100 ಶೇ.100
ಪ್ರದೇಶವಾರು ಸೋಲು-ಗೆಲುವಿನ ಲೆಕ್ಕಾಚಾರ

ಪ್ರದೇಶವಾರು ಸೋಲು-ಗೆಲುವಿನ ಲೆಕ್ಕಾಚಾರ

ಪಕ್ಷ ಉತ್ತರ ಬಂಗಾಳ(56) ದಕ್ಷಿಣ ಬಂಗಾಳ(84) ಗ್ರೇಟರ್ ಕೋಲ್ಕತ್ತಾ(35) ನೈಋತ್ಯ (119)
ಟಿಎಂಸಿ 12-18 54-60 21-27 60-66
ಟಿಎಂಸಿ 29-35 7-13 8-14 51-57
ಎಡ-ಐಎನ್ ಸಿ 5-9 14-20 00 1-3
ಇತರೆ 1-3 00 00 00
ಒಟ್ಟು 56 84 35 119

English summary
ABP-CNX Opinion Poll 2021: TMC Ahead From BJP In West Bengal Assembly Election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X