ಚುನಾವಣೆ ಹೊಸ್ತಿಲಿನಲ್ಲೇ ಬಂಗಾಳ ಡಿಜಿಪಿ ವೀರೇಂದ್ರ ವರ್ಗಾವಣೆ
ಕೋಲ್ಕತ್ತಾ, ಮಾರ್ಚ್.09: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸನ್ನದ್ಧತೆ ಬಗ್ಗೆ ಪರಿಶೀಲಿಸಿದ ಕೇಂದ್ರ ಚುನಾವಣಾ ಆಯೋಗವು ರಾಜ್ಯದ ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ವಿರೇಂದ್ರ ಅವರನ್ನು ಬದಲಾಯಿಸುವ ನಿರ್ಧಾರದ ಬಗ್ಗೆ ಆದೇಶಿಸಿದೆ.
ಪಶ್ಚಿಮ ಬಂಗಾಳ ಪೊಲೀಸ್ ಮಹಾ ನಿರ್ದೇಶಕ ವೀರೇಂದ್ರ ಸ್ಥಾನಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಿ. ನಿರಜ್ನಾಯನ್ ಅವರನ್ನು ನೇಮಿಸಿ ಆದೇಶಿಸಿದೆ. ನೂತನ ಡಿಜಿಪಿಯವರಿಗೆ ರಾಜ್ಯ ಚುನಾವಣೆ ಸಿದ್ಧತೆಗೆ ಸಂಬಂಧಿಸಿದ ಹೊಣೆಯನ್ನು ವಹಿಸಲಾಗಿದೆ.
ರಾಜ್ಯದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಡಿಜಿಪಿ ವೀರೇಂದ್ರ ಅವರಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ಹುದ್ದೆಯನ್ನು ನೀಡಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಚುನಾವಣೆ:
ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್.27, ಏಪ್ರಿಲ್.1, ಏಪ್ರಿಲ್.6, ಏಪ್ರಿಲ್.10, ಏಪ್ರಿಲ್.17, ಏಪ್ರಿಲ್.22, ಏಪ್ರಿಲ್.26 ಮತ್ತು ಏಪ್ರಿಲ್.29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ.2ರಂದು ಹೊರ ಬೀಳಲಿದೆ.












Click it and Unblock the Notifications