ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಾಳದಲ್ಲಿ ಪೆಟ್ರೋಲ್, ಡೀಸೆಲ್ ಇಳಿಕೆ ಮಾಡಿದ ಮಮತಾ ಸರ್ಕಾರ

|
Google Oneindia Kannada News

ಕೋಲ್ಕತಾ, ಫೆಬ್ರವರಿ 22: ಚುನಾವಣೆ ಸಿದ್ಧತೆಯಲ್ಲಿರುವ ಪಶ್ಚಿಮ ಬೆಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರವು ಇಂಧನ ದರವನ್ನು ಇಳಿಕೆ ಮಾಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು 1 ರು ಪ್ರತಿ ಲೀಟರ್ ನಷ್ಟು ಇಳಿಕೆ ಮಾಡಲಾಗಿದೆ.

ಪಶ್ಚಿಮ ಬೆಂಗಾಳದ ವಿತ್ತ ಸಚಿವೆ ಅಮಿತ್ ಮಿತ್ರಾ ಅವರು ಈ ಬಗ್ಗೆ ಮಾಹಿತಿ ನೀಡಿ ಫೆ.22ರ ಮಧ್ಯರಾತ್ರಿಯಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದಿದ್ದಾರೆ.

 ರಾಜಸ್ಥಾನ ನಂತರ ಮಧ್ಯ ಪ್ರದೇಶದಲ್ಲೂ ಪೆಟ್ರೋಲ್ ಬೆಲೆ 100 ರು ಪ್ಲಸ್ ರಾಜಸ್ಥಾನ ನಂತರ ಮಧ್ಯ ಪ್ರದೇಶದಲ್ಲೂ ಪೆಟ್ರೋಲ್ ಬೆಲೆ 100 ರು ಪ್ಲಸ್

ಅಂಫಾನ್ ಚಂಡಮಾರುತ, ಕೋವಿಡ್ 19 ಆರ್ಥಿಕ ಸಂಕಷ್ಟ ಹಾಗೂ ಕೇಂದ್ರ ಸರ್ಕಾರದಿಂದ ಬಾಕಿ ಉಳಿದಿರುವ 77,000 ಕೋಟಿ ರು ಸಿಕ್ಕಿಲ್ಲ ಆದರೂ ರಾಜ್ಯ ಸರ್ಕಾರವು ಜನತೆಗೆ ಸ್ಪಂದಿಸಲು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 1 ರು ಪ್ರತಿ ಲೀಟರ್ ಇಳಿಕೆ ಮಾಡಿದೆ ಎಂದಿದ್ದಾರೆ.

Bengal govt reduces tax by Re 1 per litre on petrol, diesel

ಕೋಲ್ಕತಾದಲ್ಲಿ ಪೆಟ್ರೋಲ್ ಬೆಲೆಯು ಪ್ರತಿ ಲೀಟರ್‌ಗೆ 91.78 ರೂ. ತಲುಪಿದೆ. ಇನ್ನು ಡೀಸೆಲ್ ಬೆಲೆ 84.56 ರೂ.ಗೆ ಮುಟ್ಟಿದೆ. ಚೆನ್ನೈನಲ್ಲಿ ಡೀಸೆಲ್ ಬೆಲೆ 85.98 ರೂ.ಗೆ ಹೆಚ್ಚಾಗಿದೆ. ಪೆಟ್ರೋಲ್ ಬೆಲೆ 92.59ಕ್ಕೆ ಏರಿಕೆಯಾಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. ಇದಲ್ಲದೆ, ಆಯಾ ರಾಜ್ಯಗಳಲ್ಲಿನ ವ್ಯಾಟ್, ಸೆಸ್ ದರ ಸೇರಿಸಿ ಇಂಧನ ದರ ಇನ್ನಷ್ಟು ಹೆಚ್ಚಳವಾಗುತ್ತದೆ.

ವಾಹನ ಸವಾರರಿಗೆ ಕಹಿ ಸುದ್ದಿ, ಪೆಟ್ರೋಲ್, ಡೀಸೆಲ್ ಬೆಲೆ ತಗ್ಗಲ್ಲ!ವಾಹನ ಸವಾರರಿಗೆ ಕಹಿ ಸುದ್ದಿ, ಪೆಟ್ರೋಲ್, ಡೀಸೆಲ್ ಬೆಲೆ ತಗ್ಗಲ್ಲ!

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 63 ಯುಎಸ್ ಡಾಲರ್ ಪ್ರತಿ ಬ್ಯಾರೆಲ್ ನಷ್ಟಿದೆ. ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ 32. 98ರು ನಷ್ಟಿದೆ

English summary
The West Bengal government has decided to cut taxes on petrol and diesel price by Re 1 a litre effective Monday midnight.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X