ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ.ಬಂ ಉಪ ಚುನಾವಣೆ: ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್ ನಾಮಪತ್ರ ಸಲ್ಲಿಕೆ

|
Google Oneindia Kannada News

ಕೋಲ್ಕತ್ತ, ಸೆಪ್ಟೆಂಬರ್ 13: ಪಶ್ಚಿಮ ಬಂಗಾಳಲ್ಲಿ ಉಪಚುನಾವಣೆ ಸನ್ನಿಹಿತವಾಗಿದೆ. ಭವಾನಿಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ನಾಮಪತ್ರ ಸಲ್ಲಿಸಿದ್ದಾರೆ.

ಭವಾನಿಪುರ ಕ್ಷೇತ್ರದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪ್ರಿಯಾಂಕಾ ಸ್ಪರ್ಧೆಗಿಳಿಯಲಿದ್ದಾರೆ.

ಈ ಸಂದರ್ಭದಲ್ಲಿ ಪ್ರಿಯಾಂಕಾ ಮಾತನಾಡಿ, ಇದು ಅನ್ಯಾಯದ ವಿರುದ್ಧದ ಹೋರಾಟ, ಪಶ್ಚಿಮ ಬಂಗಾಳದ ಜನರ ನ್ಯಾಯ, ಹಕ್ಕುಗಳಿಗಾಗಿ ಹೋರಾಟ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ, ಬಿಜೆಪಿಯ ಸುವೇಂದು ವಿರುದ್ಧ ಅಲ್ಪ ಮತಗಳ ಅಂತರದಿಂದ ಸೋತಿದ್ದರು.

 ಭವಾನಿಪುರದಲ್ಲಿ ಹೈ ವೋಲ್ಟೆಜ್‌ ಸ್ಪರ್ಧೆ: ದೀದಿ ಎದುರು ಬಿಜೆಪಿಯಿಂದ ವಕೀಲೆ ಕಣಕ್ಕೆ? ಭವಾನಿಪುರದಲ್ಲಿ ಹೈ ವೋಲ್ಟೆಜ್‌ ಸ್ಪರ್ಧೆ: ದೀದಿ ಎದುರು ಬಿಜೆಪಿಯಿಂದ ವಕೀಲೆ ಕಣಕ್ಕೆ?

ಆದರೂ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲು ಈ ಕ್ಷೇತ್ರದಲ್ಲಿ ಗೆಲುವು ದಾಖಲಿಸುವು ಅನಿವಾರ್ಯವಾಗಿದೆ.

Bhabanipur By-polls: Priyanka Tibrewal Files Nomination

ಭವಾನಿಪುರದಿಂದ ಗೆದ್ದಿರುವ ಟಿಎಂಸಿ ಶಾಸಕ ಸೋಮದೇವ್ ಚಟ್ಟೋಪಾಧ್ಯಾಯ ಅವರು ಮಮತಾ ಅವರಿಗೆ ಅನುಕೂಲವಾಗಲೆಂದೇ ಕ್ಷೇತ್ರವನ್ನು ತೊರೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

2011 ಹಾಗೂ 2016ರ ವಿಧಾನಸಭೆ ಚುನಾವಣೆಗಳಲ್ಲಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿ ಮಮತಾ ಗೆಲುವು ದಾಖಲಿಸಿದ್ದರು. ಉಪ ಚುನಾವಣೆಯಲ್ಲಿ ಮಮತಾ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ.

ಭವಾನಿಪುರದ ಜನರಿಗೆ ಲಭಿಸಿರುವ ದೊಡ್ಡ ಅವಕಾಶ ಇದಾಗಿದೆ. ಜನರು ಮುಂದೆ ಬಿಜೆಪಿಯನ್ನು ಗೆಲ್ಲಿಸಿ ಇತಿಹಾಸ ರಚಿಸಬೇಕು ಎಂದು ಕರೆ ನೀಡಿದ್ದಾರೆ. ಭವಾನಿಪುರಕ್ಷೇತ್ರಕ್ಕೆ ಉಪ ಚುನಾವಣೆ ಸೆಪ್ಟೆಂಬರ್ 30ರಂದು ನಡೆಯಲಿದೆ.

ಬಿಜೆಪಿ ನಾಯಕಿಯೂ ಆಗಿ ಗುರುತಿಸಿಕೊಂಡಿರುವ ಪ್ರಿಯಾಂಕಾ ಟಿಬ್ರೆವಾಲ್, ಏಪ್ರಿಲ್-ಮೇ ತಿಂಗಳಲ್ಲಿ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. 'ನಾನು ಮಮತಾ ಬ್ಯಾನರ್ಜಿ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಹೋರಾಡುತ್ತಿದ್ದೇನೆ.

ಚುನಾವಣೋತ್ತರ ಹಿಂಸಾಚಾರ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಪ್ರಾಯೋಜಿತ ದೌರ್ಜನ್ಯದ ಪ್ರಕರಣಗಳಾಗಲಿ, ನಾನು ಯಾವುದಕ್ಕೂ ಹೆದರುವುದಿಲ್ಲ. ಮಮತಾ ಬ್ಯಾನರ್ಜಿ ವಿರುದ್ಧ ಹೋರಾಟ ಮಾಡಲು ನಾನು ಸಿದ್ಧ. ಉಪಚುನಾವಣೆಯಲ್ಲಿ ನಾನು ಗೆಲ್ಲುವುದು ಖಚಿತ' ಎಂದು ಪ್ರಿಯಾಂಕಾ ಟಿಬ್ರೆವಾಲ್ ಭರವಸೆ ವ್ಯಕ್ತಪಡಿಸಿದ್ದಾರೆ.

ಚುನಾವಣಾ ನಂತರದ ಹಿಂಸಾಚಾರದ ಬಗ್ಗೆ ಕೋಲ್ಕತ್ತಾ ಹೈಕೋರ್ಟ್‌ನ ಗಮನ ಸೆಳೆದು ಇತ್ತೀಚೆಗೆ ಸಂತ್ರಸ್ತರ ಪರ ತೀರ್ಪು ಪಡೆದ ಪ್ರಿಯಾಂಕಾ ಟಿಬ್ರೆವಾಲ್ ಸಖತ್ ಸುದ್ದಿಯಾಗಿದ್ದರು. ಚುನಾವಣೆಯ ನಂತರದ ಹಿಂಸಾಚಾರ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಸಿಬಿಐ ತನಿಖೆಗೆ ಆದೇಶಿಸಲಾಗಿತ್ತು. ಟಿಬ್ರೆವಾಲ್ ಬಿಜೆಪಿಯಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಮತ್ತು ಪಶ್ಚಿಮ ಬಂಗಾಳದಲ್ಲಿ ಪಕ್ಷದ ರಾಜ್ಯ ಅಧಿಕಾರಿಯಾಗಿ ಕೆಲಸ ಮಾಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ ಅವರು ಟಿಎಂಸಿ( ತೊರೆದು ಬಿಜೆಪಿ ಸೇರಿದ್ದ ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ಹೀಗಾಗಿ ಮಮತಾ ಉಪಚುನಾವಣಾ ಕಣಕ್ಕಿಳಿದಿದ್ದು, ಅವರು ಸಿಎಂ ಆಗಿ ಮುಂದುವರಿಯಬೇಕಾದರೆ ಗೆಲುವು ಅನಿವಾರ್ಯವಾಗಿದೆ. ಸೆ.30ರಂದು ಉಪಚುನಾವಣೆನಡೆಯಲಿದ್ದು, ಅಕ್ಟೋಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ. ಮಮತಾ ವಿರುದ್ಧ ಅಭ್ಯರ್ಥಿಯನ್ನು ಹಾಕದಿರಲು ಕಾಂಗ್ರೆಸ್‌ ನಿರ್ಧರಿಸಿದೆ.

ಈ ಬಾರಿ ಮೂವರು ಮುಖ್ಯ ಸ್ಪರ್ಧಿಗಳು ವಕೀಲರಾಗಿರುವುದರಿಂದ ಕೋಲ್ಕತ್ತಾದ ಭಬಾನಿಪುರದಲ್ಲಿನ ಹೋರಾಟವು ಕಾನೂನು ಸ್ಪರ್ಧೆಯಾಗಿಯೂ ಮಾರ್ಪಟ್ಟಿದೆ. ಈ ಚುನಾವಣೆಯು ಇಡೀ ರಾಷ್ಟ್ರದ ಗಮನ ಸೆಳೆದಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಮಮತಾ ಬ್ಯಾನರ್ಜಿಅವರು ಕೋಲ್ಕತ್ತಾದ ಜೋಗೇಶ್ ಚಂದ್ರ ಕಾಲೇಜಿನಿಂದ ಕಾನೂನು ಪದವೀಧರರಾಗಿದ್ದು, 1982 ರ ಬ್ಯಾಚ್‌ನ ವಿದ್ಯಾರ್ಥಿಯಾಗಿದ್ದರು. ತನ್ನ ವೃತ್ತಿಜೀವನದ ಆರಂಭದ ದಿನಗಳಲ್ಲಿ, ಅವರು ನ್ಯಾಯಾಲಯದಲ್ಲಿ ಅಭ್ಯಾಸ ಮಾಡಿದ್ದರು. ಈ ಬಾರಿ ಬ್ಯಾನರ್ಜಿಯ ಚುನಾವಣಾ ಏಜೆಂಟ್ ಆಗಿರುವ ಟಿಎಂಸಿ ನಾಯಕ ಬೈಶ್ಯಾನೋರ್ ಚಟರ್ಜಿ, "ನಾವು ದಿದಿಯನ್ನು ನ್ಯಾಯಾಲಯದ ಕಲಾಪದಲ್ಲಿ ಭಾಗವಹಿಸುವುದನ್ನು ನೋಡಿದ್ದೇವೆ.

ಅವಳು ಕಾಂಗ್ರೆಸ್‌ನಲ್ಲಿದ್ದಾಗ, ಒಮ್ಮೆ ನಮ್ಮ ನಾಯಕ ಪಂಕಜ್ ಬ್ಯಾನರ್ಜಿಯನ್ನು ಬಂಧಿಸಲಾಯಿತು. ಜಾಮೀನು ಪಡೆಯಲು ಆಕೆ ನ್ಯಾಯಾಲಯದಲ್ಲಿ ನಿಂತಿದ್ದಳು. ಅವರು ಬಾರ್ ಕೌನ್ಸಿಲ್‌ ಸದಸ್ಯತ್ಯ ಪಡೆದಿದ್ದರು.. ಅವರು ರಾಜಕೀಯದಲ್ಲಿ ಹಿರಿಯರು, ಮತ್ತು ವಕೀಲೆಯಾಗಿ ಅವರು ಈಗ ಸ್ಪರ್ಧೆಯಲ್ಲಿ ಭಾಗವಹಿಸಿರುವ ಇತರರಿಗಿಂತ ಹಿರಿಯರು. " ಎಂದು ಹೇಳಿದ್ದಾರೆ.

ಪ್ರಿಯಾಂಕಾ ಟಿಬ್ರೆವಾಲ್ ಹಜ್ರಾ ಕಾನೂನು ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದು, ಬಿಜೆಪಿಯ ಪರವಾಗಿ ಹೋರಾಡಿದ ಪ್ರಸಿದ್ಧ ವಕೀಲರಾಗಿದ್ದಾರೆ. ಇವರು ಬಾಬುಲ್ ಸುಪ್ರಿಯೋ ಪ್ರಕರಣಗಳ ವಿರುದ್ಧ ಹೋರಾಡುತ್ತಿದ್ದಾರೆ.

2021 ರ ಚುನಾವಣಾ ಫಲಿತಾಂಶಗಳ ನಂತರ, ಅವರು ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೋರಾಡುತ್ತಿದ್ದಾರೆ. ಚುನಾವಣಾ ಹಿಂಸಾಚಾರ ಪ್ರಕರಣಗಳಲ್ಲಿ ವಕೀಲರಾಗಿ ಆಕೆಯ ಕಾರ್ಯಕ್ಷಮತೆ ಅತ್ಯುತ್ತಮವಾಗಿದೆ ಮತ್ತು ಟಿಕೆಟ್ ಸಿಗಲು ಪ್ರಮುಖ ಕಾರಣ ಎಂದು ರಾಜಕೀಯ ಪಂಡಿತರು ಹೇಳುತ್ತಾರೆ.

English summary
West Bengal BJYM vice president Priyanka Tibrewal filed her nomination for the Bhabanipur by-election on Monday. The constituency is expected to see a high-octane battle between Tibrewal and West Bengal Chief Minister Mamata Banerjee who is hoping to save her CM berth.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X