ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮ್ಯಾನ್ ಆಫ್‌ ದಿ ಮ್ಯಾಚ್ ನಾನೇ; ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್

|
Google Oneindia Kannada News

ಕೋಲ್ಕತ್ತಾ, ಅಕ್ಟೋಬರ್ 03; ಇಡೀ ದೇಶದ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಭಾನುವಾರ ಪ್ರಕಟವಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಭಾನುವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಯಿತು. ಪ್ರತಿ ವಾರ್ಡ್‌ಗಳಲ್ಲಿಯೂ ಮುನ್ನಡೆ ಪಡೆಯುತ್ತಾ ಹೋದ ಮಮತಾ ಬ್ಯಾನರ್ಜಿ 58 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲವು ದಾಖಲಿಸಿದರು. ಈ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಅವರು ಮುಂದುವರೆಯಲಿದ್ದಾರೆ.

ಭವಾನಿಪುರ ಉಪ ಚುನಾವಣೆ; ಮಮತಾ ಬ್ಯಾನರ್ಜಿ ಜಯಭೇರಿಭವಾನಿಪುರ ಉಪ ಚುನಾವಣೆ; ಮಮತಾ ಬ್ಯಾನರ್ಜಿ ಜಯಭೇರಿ

ಹಿಂದೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಪಕ್ಷ ಗೆದ್ದು ಸರ್ಕಾರ ರಚನೆ ಮಾಡಿತ್ತು. ಮಮತಾ ಬ್ಯಾನರ್ಜಿ ಮುಖ್ಯಮಂತ್ರಿಯಾದರು. ಆದರೆ ನಂದಿಗ್ರಾಮದಲ್ಲಿ ಚುನಾವಣೆಯಲ್ಲಿ ಸೋಲು ಕಂಡ ಅವರು ನವೆಂಬರ್ 5ರೊಳಗೆ ವಿಧಾನಸಭೆಗೆ ಆಯ್ಕೆಯಾಗಬೇಕಿತ್ತು.

ಭವಾನಿಪುರ ಉಪ ಚುನಾವಣೆ; ಫಲಿತಾಂಶದ ಬಗ್ಗೆ ಎಚ್‌ಡಿಕೆ ಭವಿಷ್ಯ! ಭವಾನಿಪುರ ಉಪ ಚುನಾವಣೆ; ಫಲಿತಾಂಶದ ಬಗ್ಗೆ ಎಚ್‌ಡಿಕೆ ಭವಿಷ್ಯ!

 Bhawanipur By Poll Result I am Man of the Match Says BJP Candidate Priyanka Tibrewal

ಮಮತಾ ಬ್ಯಾನರ್ಜಿಗೆ ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ ಭಾರೀ ಪೈಪೋಟಿ ನೀಡಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ 58,832 ಮತಗಳ ಅಂತರದಿಂದ ಮಮತಾ ಬ್ಯಾನರ್ಜಿ ಗೆಲುವು ಸಾಧಿಸಿದರು. ಬಿಜೆಪಿ ನಾಯಕರಿಗೆ ಭಾರೀ ಮುಖಭಂಗವಾಗಿದೆ.

 ಮಮತಾ ಬ್ಯಾನರ್ಜಿಗೆ ಭಾರೀ ಅಂತರದಿಂದ ಗೆಲುವು ನಿಶ್ಚಿತ; ಟಿಎಂಸಿ ಭವಿಷ್ಯ ಮಮತಾ ಬ್ಯಾನರ್ಜಿಗೆ ಭಾರೀ ಅಂತರದಿಂದ ಗೆಲುವು ನಿಶ್ಚಿತ; ಟಿಎಂಸಿ ಭವಿಷ್ಯ

ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಪ್ರತಿಕ್ರಿಯೆ ನೀಡಿದ ಪ್ರಿಯಾಂಕಾ ಟಿಬ್ರೆವಾಲ್, " ಈ ಆಟದಲ್ಲಿ ನಾನು ಮ್ಯಾನ್ ಆಫ್ ದಿ ಮ್ಯಾಚ್. ಮಮತಾ ಬ್ಯಾನರ್ಜಿ ಪ್ರಭಾವ ಇರುವ ಕ್ಷೇತ್ರದಲ್ಲಿ ನಾನು ಚುನಾವಣೆಗೆ ನಿಂತಿದ್ದೆ ಮತ್ತು 25 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದಿದ್ದೇನೆ" ಎಂದು ಹೇಳಿದರು.

ಮಮತಾ ಬ್ಯಾನರ್ಜಿ ಹೇಳಿಕೆ; ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, "ನಾನು ಭವಾನಿಪುರ ಉಪ ಚುನಾವಣೆಯಲ್ಲಿ 58,832 ಮತಗಳ ಅಂತರದಲ್ಲಿ ಗೆದ್ದಿದ್ದೇನೆ. ಪ್ರತಿ ವಾರ್ಡ್‌ನಲ್ಲಿಯೂ ಗೆಲುವು ಸಾಧಿಸಿದ್ದೇನೆ" ಎಂದರು.

"ಭವಾನಿಪುರದಲ್ಲಿ ಶೇ 46ರಷ್ಟು ಜನರು ಬೆಂಗಾಲಿಗಳಲ್ಲ. ಅವರೆಲ್ಲಾ ನನಗೆ ಮತ ನೀಡಿದ್ದಾರೆ. ಪಶ್ಚಿಮ ಬಂಗಾಳದ ಜನರು ಭವಾನಿಪುರವನ್ನು ನೋಡುತ್ತಿದ್ದರು. ಅದು ನನಗೆ ಸ್ಫೂರ್ತಿ ತುಂಬಿತು" ಎಂದು ಮಮತಾ ಬ್ಯಾನರ್ಜಿ ಹೇಳಿದರು.

"ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಆರಂಭವಾದ ಬಳಿಕ ಕೇಂದ್ರ ಸರ್ಕಾರ ನಮ್ಮನ್ನು ಅಧಿಕಾರದಿಂದ ಕೆಳಗಿಳಿಸಲು ಷಡ್ಯಂತ್ರ ಮಾಡಿದೆ. ನಮಗೆ ಮತ ನೀಡಿದ ಜನರಿಗೆ ನಾನು ಅಭಾರಿಯಾಗಿದ್ದೇನೆ" ಎಂದು ಮಮತಾ ಬ್ಯಾನರ್ಜಿ ತಿಳಿಸಿದರು.

ಭವಾನಿಪುರದಲ್ಲಿ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್, ಸಿಪಿಐ(ಎಂ) ನಿಂದ ಶ್ರೀಜಿಬ್ ಬಿಸ್ವಾಸ್ ಅಭ್ಯರ್ಥಿಗಳಾಗಿದ್ದರು. ಕಾಂಗ್ರೆಸ್ ಪಕ್ಷ ಕೊನೆ ಕ್ಷಣದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಮಮತಾ ಬ್ಯಾನರ್ಜಿ ಎಷ್ಟು ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂಬ ಲೆಕ್ಕಾಚಾರ ಚುನಾವಣೆ ಘೋಷಣೆಯಾದ ದಿನದಿಂದ ನಡೆಯುತ್ತಿತ್ತು.

ಕ್ಷೇತ್ರದ ಕುರಿತು ಮಾಹಿತಿ; ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ವ್ಯಾಪ್ತಿಯಲ್ಲಿರುವ ಒಂದು ವಿಧಾನಸಭಾ ಕ್ಷೇತ್ರವಾಗಿದೆ. 2011ರಲ್ಲಿ ಕ್ಷೇತ್ರ ಪುನರ್ ವಿಂಗಡನೆ ಬಳಿಕ ಭವಾನಿಪುರ ವಿಧಾನಸಭಾ ಕ್ಷೇತ್ರ ಉದಯವಾಯಿತು. ಈ ಕ್ಷೇತ್ರ ಟಿಎಂಸಿ ಪಕ್ಷದ ಭದ್ರಕೋಟೆಯಾಗಿದೆ. ಮಮತಾ ಬ್ಯಾನರ್ಜಿ ನಿವಾಸವೂ ಇದೇ ಕ್ಷೇತ್ರದ ವ್ಯಾಪ್ತಿಯಲ್ಲಿದೆ.

ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಮಮತಾ ಬ್ಯಾನರ್ಜಿ ಕ್ಷೇತ್ರದಲ್ಲಿ ಕಣಕ್ಕಿಳಿಯುವುದು ಖಚಿತವಾಯಿತು. ಆಗ ಟಿಎಂಸಿಯ ಕಾರ್ಯಕರ್ತರು, ನಾಯಕರು ಮನೆ ಮಗಳು ಕಣಕ್ಕಿಳಿಯುತ್ತಿದ್ದಾಳೆ ಎಂದು ಸಂಭ್ರಮಿಸಿದ್ದರು.

ಭವಾನಿಪುರ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಪ್ರಬಲ ಪೈಪೋಟಿ ನಿರೀಕ್ಷೆ ಮಾಡಲಾಗಿತ್ತು. ಆದರೆ ಕ್ಷೇತ್ರದ ವ್ಯಾಪ್ತಿಯ 7 ವಾರ್ಡ್‌ಗಳ ಪೈಕಿ 5 ವಾರ್ಡ್‌ ಟಿಎಂಸಿ ವಶದಲ್ಲಿತ್ತು. ಪ್ರಬಲ ಪೈಪೋಟಿ ನೀಡಲು ಬಿಜೆಪಿ ವಿಫಲವಾಗಿದೆ.

English summary
After Bhawanipur constituency election result announced BJP candidate Priyanka Tibrewal said that, I am Man of the Match of this game because I contested the election in Mamata Banerjee's stronghold and got more than 25,000 votes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X