ರಾಮ್‌ಪುರಹತ್ ಹತ್ಯಾಕಾಂಡ: ಕೋಲ್ಕತ್ತಾ ಹೈಕೋರ್ಟ್ ವಿಚಾರಣೆ

ಕೋಲ್ಕತ್ತಾ, ಮಾರ್ಚ್ 24: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ರಾಮ್‌ಪುರಹತ್‌ನಲ್ಲಿ ನಡೆದಿರುವ 8 ಜನರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಗುರವಾರ ಕೋಲ್ಕತ್ತಾ ಹೈಕೋರ್ಟ್ ಸುಮೋಟೋ ಪ್ರಕರಣದ ವಿಚಾರಣೆ ನಡೆಸಲಿದೆ.

ಬುಧವಾರ ವಕೀಲ ಅನಿಂದ್ಯಾ ಕುಮಾರ್ ದಾಸ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಜೊತೆಗೆ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ನೇತೃತ್ವದ ವಿಭಾಗೀಯ ಪೀಠ, ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ನಡೆಸಿತು.

ಇದೇ ವೇಳೆ ರಾಮ್‌ಪುರಹತ್‌ನಲ್ಲಿ ನಡೆದ ಹತ್ಯಾಕಾಂಡದ ಬಗ್ಗೆ ಪಿಐಎಲ್ ಸಲ್ಲಿಸಿದ್ದ ವಕೀಲ ಅನಿಂದ್ಯಾ ಕುಮಾರ್ ದಾಸ್ ಕೇಂದ್ರೀಯ ತನಿಖಾ ತಂಡ(ಸಿಬಿಐ) ಅಥವಾ ರಾಷ್ಟ್ರೀಯ ತನಿಖಾ ತಂಡ(ಎನ್ಐಎ) ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ರಾಜ್ಯ ಪೊಲೀಸರು ವಿಫಲರಾಗಿದ್ದಾರೆ ಎಂದು ದೂಷಿಸಲಾಗಿದೆ.

Birbhum Massacre: Calcutta High Court Will Takes Suo Moto case Hearing At 2pm Today

ಬಿರ್ಭುಮ್ ಹತ್ಯಾಕಾಂಡ ಪ್ರಕರಣದ ಹಿನ್ನೆಲೆ:

ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ರಾಮ್‌ಪುರಹತ್ ಬ್ಲಾಕ್ 1ರ ಅಡಿಯಲ್ಲಿ ಬರೀಶಾಲ್ ಗ್ರಾಮ ಪಂಚಾಯತ್‌ನ ಉಪ ಪ್ರಧಾನ (ಟಿಎಂಸಿ) ಬದು ಶೇಖ್ ಮೇಲೆ ನಾಲ್ವರು ದುಷ್ಕರ್ಮಿಗಳು ಕಚ್ಚಾಬಾಂಬ್ ಎಸೆದು ಹತ್ಯೆ ಮಾಡಿದರು ಎಂದು ಹೇಳಲಾಗುತ್ತಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೇಖ್ ಅನ್ನು ರಾಮ್‌ಪುರಹತ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಅಂತಿಮವಾಗಿ ಶೇಖ್ ಮೃತದೇಹವನ್ನು ಬೊಗ್ಟುಯಿ ಗ್ರಾಮಕ್ಕೆ ತೆಗೆದುಕೊಂಡು ಹೋಗಲಾಯಿತು.

ಇನ್ನು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡರು. ನೋಡ ನೋಡುತ್ತಿದ್ದಂತೆ ರಾಮ್‌ಪುರಹತ್ ಗ್ರಾಮದಲ್ಲಿ ಹಿಂಸಾಚಾರ ಭುಗಿಲೆದ್ದಿತು. ರಾಮ್‌ಪುರಹತ್‌ನಲ್ಲಿ ಮಂಗಳವಾರ ಮುಂಜಾನೆ ಎಂಟು ಜನರು ತಮ್ಮ ಮನೆಗೆ ಬೆಂಕಿ ಹಚ್ಚಲಾಗಿದ್ದು, ಮನೆಯಲ್ಲಿದ್ದ ಹತ್ತು ಜನರ ಪೈಕಿ ಏಳು ಮಂದಿ ಮನೆಯಲ್ಲಿಯೇ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದರಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೇ ಪ್ರಾಣ ಬಿಟ್ಟಿದ್ದರು.

ಪಶ್ಚಿಮ ಬಂಗಾಳ ಸಿಎಂಗೆ ಮೋದಿ ಭರವಸೆ:

"ಪಶ್ಚಿಮ ಬಂಗಾಳದ ಬಿರ್ಭೂಮ್ ಹಿಂಸಾಚಾರದ ಬಗ್ಗೆ ನಾನು ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಅಪರಾಧಿಗಳನ್ನು ಬಂಧಿಸಲು ಏನೇ ಸಹಾಯ ಬೇಕಾದರೂ ಕೇಂದ್ರದಿಂದ ರಾಜ್ಯಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುವ ಭರವಸೆ ನೀಡುತ್ತೇನೆ. ರಾಜ್ಯ ಸರ್ಕಾರವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ಅಂತಹ ಅಪರಾಧಿಗಳನ್ನು ಪ್ರೋತ್ಸಾಹಿಸುವವರನ್ನು ಕ್ಷಮಿಸುವಂತಿಲ್ಲ," ಎಂದು ಪ್ರಧಾನಿ ಮೋದಿ ಹೇಳಿದರು.

Recommended Video

      Ravindra Jadeja ಇನ್ಮುಂದೆ CSKಗೆ ನಾಯಕ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+