ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ
ಕೋಲ್ಕತ್ತ, ಮೇ 6: ಪಶ್ಚಿಮ ಬಂಗಾಳದ ಬ್ಯಾರಕ್‌ಪುರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರ್ಜುನ್ ಸಿಂಗ್ ಮೇಲೆ ಹಲ್ಲೆಯಾದ ಘಟನೆ ಸೋಮವಾರ ನಡೆದಿದೆ.
ಮತದಾನಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಟಿಎಂಸಿ ಗೂಂಡಾಗಳು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಖುದ್ದು ಅರ್ಜುನ್ ಸಿಂಗ್ ಆರೋಪಿಸಿದ್ದಾರೆ. ಕ್ಷೇತ್ರದಲ್ಲಿ ಮತದಾರರನ್ನು ತಡೆಯಲು ಟಿಎಂಸಿ ಈ ರೀತಿಯ ವರ್ತನೆ ತೋರುತ್ತಿದೆ, ಬೇರೆ ಭಾಗಗಳಿಂದ ಗೂಂಡಾಗಳನ್ನು ಕ್ಷೇತ್ರಕ್ಕೆ ತರಿಸಲಾಗಿದೆ ಎಂದು ಅರ್ಜುನ್ ಸಿಂಗ್ ಆರೋಪಿಸಿದ್ದಾರೆ.

ಟಿಎಂಸಿ ಶಾಸಕರಾಗಿದ್ದ ಅರ್ಜುನ್ ಸಿಂಗ್ ಇತ್ತೀಚೆಗೆ ಬಿಜೆಪಿ ಸೇರಿದ್ದರು. ಇಲ್ಲಿ ಕೇಂದ್ರದ ಮಾಜಿ ಸಚಿವ ದಿನೇಶ್ ತ್ರಿವೇದಿ ವಿರುದ್ಧ ವಿರುದ್ಧ ಅರ್ಜುನ್ ಸಿಂಗ್ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಐದನೇ ಹಂತದ ಮತದಾನ ನಡೆಯುತ್ತಿದೆ.












Click it and Unblock the Notifications