ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಸ್ಲಿಮರು ಟಿಎಂಸಿಗೆ ಮತ ಹಾಕಲೇಬೇಕು; ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

|
Google Oneindia Kannada News

ಕೋಲ್ಕತ್ತಾ, ಏಪ್ರಿಲ್ 6: ತೃಣಮೂಲ ಕಾಂಗ್ರೆಸ್‌ಗೆ ಮತ ನೀಡುವಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮುಸ್ಲಿಮರಿಗೆ ಮನವಿ ಮಾಡಿದ್ದು, ಮಮತಾ ಬ್ಯಾನರ್ಜಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಟಿಎಂಸಿಗೆ ಮತ ಹಾಕದಿದ್ದರೆ ಅದರ ಪರಿಣಾಮವನ್ನು ಮುಂದೆ ಅನುಭವಿಸಬೇಕಾಗುತ್ತದೆ ಎಂದು ಟಿಎಂಸಿ ಸದಸ್ಯರು ಜನರಿಗೆ ಬೆದರಿಕೆ ಹಾಕುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ ಮಾಡಿದೆ.

ಒಂದೇ ಕಾಲಿನಲ್ಲಿ ಬಂಗಾಳ ಗೆದ್ದು ಎರಡು ಕಾಲಿನಲ್ಲಿ ದೆಹಲಿ ಗೆಲ್ಲುವೆ; ಮಮತಾ ಬ್ಯಾನರ್ಜಿಒಂದೇ ಕಾಲಿನಲ್ಲಿ ಬಂಗಾಳ ಗೆದ್ದು ಎರಡು ಕಾಲಿನಲ್ಲಿ ದೆಹಲಿ ಗೆಲ್ಲುವೆ; ಮಮತಾ ಬ್ಯಾನರ್ಜಿ

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅಲ್ಪಸಂಖ್ಯಾತರ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ, "ಪಶ್ಚಿಮ ಬಂಗಾಳದಲ್ಲಿ ಚುನಾವಣಾ ನೀತಿ ಸಂಹಿತೆಯು ಉಲ್ಲಂಘನೆಯಾಗುತ್ತಿದೆ. ಜನರ ಪ್ರಾತಿನಿಧ್ಯ ಕಾಯ್ದೆಯ ಉಲ್ಲಂಘನೆಯೂ ಆಗುತ್ತಿದೆ. ಜನರನ್ನು ಬೆದರಿಸಿ ಮತ ಕೇಳಲಾಗುತ್ತಿದೆ. ಮುಸ್ಲಿಮರಿಗೂ ಟಿಎಂಸಿಗೆ ಮತ ಹಾಕಲೇಬೇಕೆಂದು ಒತ್ತಡ ತರಲಾಗುತ್ತಿದೆ" ಎಂದು ಆರೋಪಿಸಿದ್ದಾರೆ.

BJP Complaints To EC On Mamata Banerjee Alleging Threatening Voters

ಪಶ್ಚಿಮ ಬಂಗಾಳದಲ್ಲಿ ಮಂಗಳವಾರ ಮೂರನೇ ಹಂತದ ಚುನಾವಣೆ ನಡೆಯುತ್ತಿದೆ. 291 ಕ್ಷೇತ್ರಗಳಿಗೆ ಎಂಟು ಹಂತಗಳಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ನಡುವೆ ಭಾರೀ ಪೈಪೋಟಿಯಿದೆ.

English summary
BJP claimed that voters are being threatened with consequences if they do not vote for the TMC and requested the EC to deploy more central forces in the poll-bound Bengal
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X