ಮಿಥುನ್ ಚಕ್ರವರ್ತಿ ರೋಡ್‌ಶೋಗೆ ತಡೆ, ಕಾರ್ಯಕರ್ತರ ಪ್ರತಿಭಟನೆ

ಕೋಲ್ಕತ್ತಾ, ಏಪ್ರಿಲ್ 8: ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿರುವ ಮಿಥುನ್ ಚಕ್ರವರ್ತಿ ರೋಡ್‌ ಶೋಗೆ ಪೊಲೀಸರು ಅನುಮತಿ ನಿರಾಕರಿಸಿದ್ದು, ಕಾರ್ಯಕರ್ತರು ಪ್ರತಿಭಟನೆ ನಡೆಸಿರುವ ಘಟನೆ ಬೆಹಲಾ ಪ್ರದೇಶದಲ್ಲಿ ನಡೆದಿದೆ.

ಬಿಜೆಪಿ ಟಿಕೆಟ್ ನಿಂದ ಬೆಹಲಾ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ನಟ- ರಾಜಕಾರಣಿ ಶ್ರಬಂತಿ ಚಟರ್ಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಯಾವುದೇ ಕಾರಣವಿಲ್ಲದೆ ನನ್ನ ಕ್ಷೇತ್ರದಲ್ಲಿ ಮಿಥುನ್ ಚಕ್ರವರ್ತಿ ಪ್ರಚಾರ ನಡೆಸಲುಕೋಲ್ಕತ್ತಾ ಪೊಲೀಸರು ಅವಕಾಶ ನಿರಾಕರಿಸಿದ್ದಾರೆ. ಪ್ರಚಾರದಿಂದ ತಡೆಯುವ ಇಂತಹ ಅಪ್ರಜಾಸತಾತ್ಮಕ ಕೃತ್ಯಗಳಿಂದ ಟಿಎಂಸಿ ಸೋಲಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ರಾಜ್ಯಸರ್ಕಾರಕ್ಕೆ ಅಧಿಕಾರ ಕಳೆದುಕೊಳ್ಳುವ ಭಯ ಕಾಡುತ್ತಿದೆ ಎಂದು ಬಂಗಾಳದ ಪ್ರಸಿದ್ಧ ನಟ ಶ್ರಬಂತಿ ಹೇಳಿದ್ದಾರೆ.

BJP leader Mithun Chakraborty’s Roadshow Disallowed In Kolkata’s Behala, Workers Hold Protest

ಸೂಪರ್ ಸ್ಟಾರ್ ಮಿಥುನ್ ಚಕ್ರವರ್ತಿ, ಬೆಹಲಾದಲ್ಲಿನ ರೋಡ್ ಶೋಗೆ ಪೊಲೀಸರು ಅನುಮತಿ ನಿರಾಕರಿಸಿದ ನಂತರ ಮನೆ ಮನೆ ಪ್ರಚಾರ ನಡೆಸಲು ಅವಕಾಶ ನೀಡುವಂತೆ ಮನವಿ ಮಾಡಲಾಗಿತ್ತು.

ಅದಕ್ಕೂ ಕೊನೆ ಕ್ಷಣದಲ್ಲಿ ಅವಕಾಶ ನೀಡಲಿಲ್ಲ ಎಂದು ಬಿಜೆಪಿ ಮೂಲಗಳು ಹೇಳಿವೆ. ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ಕೋಲ್ಕತ್ತಾ ಪೊಲೀಸರು ನಿರಾಕರಿಸಿದ್ದಾರೆ. ಪರ್ನಶ್ರೀ ಪೊಲೀಸ್ ಠಾಣೆ ಎದುರು ಜಮಾಯಿಸಿದ್ದ ಬಿಜೆಪಿ ಪಕ್ಷದ ಕಾರ್ಯಕರ್ತರು ಆಡಳಿತರೂಢ ಟಿಎಂಸಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+