ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಮತಾ ಬ್ಯಾನರ್ಜಿ ಸರ್ಕಾರ ಹೆಚ್ಚು ದಿನ ಉಳಿಯೋಲ್ಲ: ಬಿಜೆಪಿ ಮುಖಂಡ

|
Google Oneindia Kannada News

ಕೋಲ್ಕತ್ತಾ, ಮೇ 29: "ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸರ್ಕಾರ 2021 ರವರೆಗೆ ಪೂರ್ಣಾವಧಿಯನ್ನು ಪೂರೈಸುವುದಿಲ್ಲ" ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಹುಲ್ ಸಿನ್ಹಾ ಹೇಳಿದರು.

ಮಮತಾ ಬ್ಯಾನರ್ಜಿಗೆ ಮತ್ತೆ ಭಾರೀ ಆಘಾತ, ಬಿಜೆಪಿಯತ್ತ ಮೂವರು ಶಾಸಕರುಮಮತಾ ಬ್ಯಾನರ್ಜಿಗೆ ಮತ್ತೆ ಭಾರೀ ಆಘಾತ, ಬಿಜೆಪಿಯತ್ತ ಮೂವರು ಶಾಸಕರು

ಲೋಕಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳದಲ್ಲೂ ಬದಲಾವಣೆಯ ಗಾಳಿ ಬೀಸಿರುವುದು ಸ್ಪಷ್ಟವಾಗಿದ್ದು, ಇನ್ನು ಆರು ತಿಂಗಳು ಅಥವಾ ಒಂದು ವರ್ಷದೊಳಗೆ ಅಲ್ಲಿ ವಿಧಾನಸಭೆ ಚುನಾವಣೆ ನಡೆಯಬೇಕಾದ ಸನ್ನಿವೇಶ ಏರ್ಪಡುತ್ತದೆ ಎಂದು ಸಿನ್ಹಾ ಭವಿಷ್ಯ ನುಡಿದಿದ್ದಾರೆ.

'ದಯವಿಟ್ಟು ಕ್ಷಮಿಸಿ,' ಪ್ರಧಾನಿ ಮೋದಿಗೆ ಮಮತಾ ದೀದಿ ಸಂದೇಶ'ದಯವಿಟ್ಟು ಕ್ಷಮಿಸಿ,' ಪ್ರಧಾನಿ ಮೋದಿಗೆ ಮಮತಾ ದೀದಿ ಸಂದೇಶ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತಪ್ರಮಾಣವನ್ನು ನೋಡಿದರೆ ಸದ್ಯದಲ್ಲೇ ಅಲ್ಲಿನ ಸರ್ಕಾರ ಬೀಳುವುದು ಖಂಡಿತ ಎಂಬ ಅನುಮಾನ ಹುಟ್ಟಿಕೊಂಡಿದೆ. ಲೋಕಸಭೆ ಚುನಾವಣೆಯಲ್ಲಿ ತನ್ನ ಮತ ಹಂಚಿಕೆಯ ಪ್ರಮಾಣವನ್ನು ಬಿಜೆಪಿ ಶೇ.17 (2014ರಲ್ಲಿ) ರಂದ ಶೇ.40 ಕ್ಕೆ ಏರಿಸಿಕೊಂಡಿದೆ.

BJP leader predicts Mamata Banerjees government will not complete full term

2014 ರಲ್ಲಿ ಕೇವಲ ಎರಡು ಸ್ಥಾನಗಳಲ್ಲಿ ಜಯಗಳಿಸಿದ್ದ ಬಿಜೆಪಿ ಈ ಬಾರಿ 18 ಸ್ಥಾನಗಳಲ್ಲಿ ಜಯಸಾಧಿಸಿದೆ.

ಪಶ್ಚಿಮ ಬಂಗಾಳದಲ್ಲಿ ಅಚ್ಚರಿ, ಮತದಾರನ ಚಿತ್ತ 'ಎಡದಿಂದ ಬಲ'ಕ್ಕೆ! ಪಶ್ಚಿಮ ಬಂಗಾಳದಲ್ಲಿ ಅಚ್ಚರಿ, ಮತದಾರನ ಚಿತ್ತ 'ಎಡದಿಂದ ಬಲ'ಕ್ಕೆ!

ಈ ಎಲ್ಲ ಬೆಳವಣಿಗೆಗಳನ್ನು ನೋದಿದರೆ ವಿಧಾನಸಭೆ ಚುನಾವಣೆ ಆರೇಳು ತಿಂಗಳೊಳಗೆ ನಡೆದು, ಹಾಲಿ ಸರ್ಕಾರ ಬೀಳುವ ಎಲ್ಲಾ ಸಾಧ್ಯತೆಗಳೂ ಇವೆ ಎಂದು ಸಿನ್ಹಾ ಹೇಳಿದ್ದಾರೆ. 2014 ರ ಲೋಕಸಭೆ ಚುನಾವನೆಯಲ್ಲಿ 34 ಕ್ಷೇತ್ರಗಳಲ್ಲಿ ಗೆದ್ದಿದ್ದ ಟಿಎಂಸಿ, ಈ ಬಾರಿ 22 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, 12 ಕ್ಷೇತ್ರಗಳಲ್ಲಿ ಸೋಲನುಭವಿಸಿದೆ.

English summary
BJP national secretary Rahul Sinha predicted, Mamata Banerjee's government in West Bengal will not complete its full term till 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X