ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ.ಬಂಗಾಳ ಬಿಜೆಪಿ ಶಾಸಕ ಸಾವು; ಸಿಬಿಐ ತನಿಖೆಗಾಗಿ ಅರ್ಜಿ

|
Google Oneindia Kannada News

ಕೋಲ್ಕತ್ತಾ, ಜುಲೈ 17 : ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ದೇಬೇಂದ್ರನಾಥ ರಾಯ್ ಸಾವಿನ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ರಾಜ್ಯ ಬಿಜೆಪಿ ಘಟಕ ಸಹ ಸಾವಿನ ಕುರಿತು ಸಿಬಿಐ ತನಿಖೆಯಾಗಬೇಕು ಎಂದು ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದೆ.

Recommended Video

B Srimalu ಆರೋಗ್ಯ ಸಚಿವರಾಗಿ ಹೀಗೆ ಹೇಳಬಾರದಿತ್ತಾ ? | Oneindia Kannada

ಶಾಸಕ ದೇಬೇಂದ್ರನಾಥ ರಾಯ್ ಪತ್ನಿ ಚಾಂದಿಮಾ ರಾಯ್ ಕೋಲ್ಕತ್ತಾ ಹೈಕೋರ್ಟ್‌ಗೆ ಶುಕ್ರವಾರ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ದೇಬೇಂದ್ರನಾಥ ರಾಯ್ ಸಾವಿನ ಕುರಿತು ಸಿಬಿಐ ತನಿಖೆ ನಡೆಯಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಬಿಜೆಪಿ ಶಾಸಕನ ಕೊಲೆ, ಮನೆ ಮುಂದೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ!ಬಿಜೆಪಿ ಶಾಸಕನ ಕೊಲೆ, ಮನೆ ಮುಂದೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ!

ಜುಲೈ 13ರ ಸೋಮವಾರ ಹುಟ್ಟೂರಿನಲ್ಲಿರುವ ಮಾರುಕಟ್ಟೆಯ ಕಟ್ಟಡವೊಂದರ ಎದುರು ನೇಣು ಬಿಗಿದ ಸ್ಥಿತಿಯಲ್ಲಿ ಶಾಸಕರ ಶವ ಪತ್ತೆಯಾಗಿತ್ತು. ಈ ಸಾವಿನ ಪ್ರಕರಣದ ಬಗ್ಗೆ ರಾಜ್ಯದಲ್ಲಿ ಚರ್ಚೆಗಳು ನಡೆಯುತ್ತಿವೆ. ಪ್ರಸ್ತುತ ರಾಜ್ಯದ ಸಿಐಡಿ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಪಶ್ಚಿಮ ಬಂಗಾಳ ಬಿಜೆಪಿ ಶಾಸಕನ ಸಾವು; ಸಿಬಿಐ ತನಿಖೆಗೆ ಒತ್ತಾಯ ಪಶ್ಚಿಮ ಬಂಗಾಳ ಬಿಜೆಪಿ ಶಾಸಕನ ಸಾವು; ಸಿಬಿಐ ತನಿಖೆಗೆ ಒತ್ತಾಯ

BJP MLA Debendra Nath Roy Wife Seeks CBI Probe On Death

ದೇಬೇಂದ್ರನಾಥ ರಾಯ್ ಬರೆದಿದ್ದಾರೆ ಎನ್ನಲಾದ ಡೆತ್ ನೋಟ್‌ನಲ್ಲಿ ಹಲವರ ಹೆಸರನ್ನು ಪ್ರಸ್ತಾಪಿಸಿದ್ದರು. ಒಬ್ಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಬುಧವಾರ ಮತ್ತೊಬ್ಬ ವ್ಯಕ್ತಿಯನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು.

ಪ. ಬಂಗಾಳ ಬಿಜೆಪಿ ಶಾಸಕನ ಸಾವು; ಸಿಐಡಿಯಿಂದ ಒಬ್ಬನ ಬಂಧನ ಪ. ಬಂಗಾಳ ಬಿಜೆಪಿ ಶಾಸಕನ ಸಾವು; ಸಿಐಡಿಯಿಂದ ಒಬ್ಬನ ಬಂಧನ

ಹೆಮ್ಟಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ದೇಬೇಂದ್ರನಾಥ ರಾಯ್ ಅವರನ್ನು ಕೊಲೆ ಮಾಡಲಾಗಿದೆ ಎಂದು ಜನರು ಆರೋಪಿಸುತ್ತಿದ್ದಾರೆ. ರಾಜ್ಯ ಬಿಜೆಪಿ ಘಟಕ ಸಹ ಇದು ರಾಜಕೀಯ ಪ್ರೇರಿತ ಕೊಲೆ ಎಂದು ಆರೋಪಿಸಿದೆ.

ದೇಬೇಂದ್ರನಾಥ ರಾಯ್ ಹೆಮ್ಟಾಬಾದ್ ಕ್ಷೇತ್ರದಿಂದ ಮೊದಲು ಸಿಪಿಐಎಂ ಚಿನ್ಹೆಯಲ್ಲಿ ಗೆದ್ದು ಶಾಸಕರಾಗಿದ್ದರು. 2019ರ ಲೋಕಸಭೆ ಚುನಾವಣೆ ವೇಳೆ ಅವರು ಬಿಜೆಪಿ ಸೇರಿದ್ದರು, ಬಳಿಕ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಗೆಲುವು ಸಾಧಿಸಿದ್ದರು.

English summary
Chandima Roy wife of BJP MLA Debendra Nath Roy moved Calcutta high court seeks CBI probe on death of her husband. BJP MLA found hanging on July 13 and CID is currently investigating the case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X