ಪಶ್ಚಿಮ ಬಂಗಾಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕೋಲ್ಕತ್ತಾ, ಮಾರ್ಚ್ 14: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ಭಾರತೀಯ ಜನತಾ ಪಕ್ಷವು 3ನೇ ಹಂತ ಮತ್ತು ನಾಲ್ಕನೇ ಹಂತದ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. 3ನೇ ಹಂತದ ಚುನಾವಣೆ 27 ಅಭ್ಯರ್ಥಿ ಹಾಗೂ 4ನೇ ಹಂತದ ಚುನಾವಣೆಗೆ 36 ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಪ್ರಕಟಿಸಲಾಗಿದೆ.

BJP Releases 3rd And 4th Phase Candidates List At West Bengal

ಅರ್ಥಶಾಸ್ತ್ರಜ್ಞ ಅಶೋಕ್ ಲಾಹಿರಿ ಅಲಿಪುರ್ದುರ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ದೊಮ್ಜುರ್ ಕ್ಷೇತ್ರದಿಂದ ರಜಿಬ್ ಬ್ಯಾನರ್ಜಿ, ಸಿಂಗೂರ್ ಕ್ಷೇತ್ರದಿಂದ ರವಿಂದ್ರನಾಥ್ ಭಟ್ಟಾಚಾರ್ಯ ಹಾಗೂ ತಾರಕೇಶ್ವರ ವಿಧಾನಸಭಾ ಕ್ಷೇತ್ರದಿಂದ ಸ್ವಪನ್ ದಾಸ್ ಗುಪ್ತಾ ಕಣಕ್ಕಿಳಿಯಲಿದ್ದಾರೆ. ಟೋಲಿಗುಂಗ್ ವಿಧಾನಸಭಾ ಸ್ಥಾನದಿಂದ ಕೇಂದ್ರ ಸಚಿವ ಬಬುುಲ್ ಸುಪ್ರಿಯೋ ಸ್ಪರ್ಧಿಸಲಿದ್ದಾರೆ. ನಟ ಯಶ್ ದಾಸ್ ಗುಪ್ತಾ ಅವರು ಚಂಡಿತಾಲ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ.

8 ಹಂತಗಳಲ್ಲಿ ಪಶ್ಚಿಮ ಬಂಗಾಳ ಚುನಾವಣಾ ಮತದಾನ

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್.27, ಏಪ್ರಿಲ್.1, ಏಪ್ರಿಲ್.6, ಏಪ್ರಿಲ್.10, ಏಪ್ರಿಲ್.17, ಏಪ್ರಿಲ್.22, ಏಪ್ರಿಲ್.26 ಮತ್ತು ಏಪ್ರಿಲ್.29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ.2ರಂದು ಹೊರ ಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+