ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಬಿಜೆಪಿ ತೊರೆದು ಮತ್ತೆ ಟಿಎಂಸಿ ಸೇರಿದ ಮುಕುಲ್ ರಾಯ್

|
Google Oneindia Kannada News

ಕೋಲ್ಕತ್ತಾ, ಜೂನ್ 11: ಇತ್ತೀಚೆಗಷ್ಟೇ ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಮುಖುಲ್ ರಾಯ್ ಮತ್ತೆ ಟಿಎಂಸಿಗೆ ಸೇರ್ಪಡೆಯಾಗಿದ್ದು ಎಲ್ಲರಲ್ಲೂ ಆಶ್ಚರ್ಯವನ್ನುಂಟುಮಾಡಿದೆ.

ಮುಕುಲ್ ರಾಯ್ ಬಿಜೆಪಿ ಟಿಎಂಸಿಯಿಂದ ತೆರಳಿದ ಮೊದಲ ವ್ಯಕ್ತಿಯಾಗಿದ್ದರು. ಇದೀಗ ಅವರು ಪುತ್ರ ಶುಭ್ರಾಂಶು ಜತೆ ಟಿಎಂಸಿಗೆ ಮರಳಿದ್ದಾರೆ.

ಆಪರೇಷನ್ ಘರ್‌ವಾಪಸಿ ಇದೀಗ ಶುರುವಾಗಿದೆ, ಮುಂದಿನ ದಿನಗಳಲ್ಲಿ ಮತ್ತಷ್ಟು ಮಂದಿ ಬಿಜೆಪಿಯಿಂದ ಮತ್ತೆ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಸುಳಿವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ್ದಾರೆ.

ಮುಕುಲ್ ರಾಯ್ ತೃಣಮೂಲ ಕಾಂಗ್ರೆಸ್‌ನ ಸಂಸ್ಥಾಪನಾ ಸದಸ್ಯರಾಗಿದ್ದಾರೆ, ಅವರು ಟಿಎಂಸಿ ತೊರೆಯುವ ಸಂದರ್ಭದಲ್ಲಿ ಜನರಲ್ ಸೆಕ್ರೆಟರಿಯಾಗಿದ್ದರು. ಇದೀಗ ಆ ಹುದ್ದೆಯು ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್ ಬ್ಯಾನರ್ಜಿ ಬಳಿ ಇದೆ.

BJPs Mukul Roy Returns To Mamata Banerjees Party

ಕಳೆದ ವಾರವಷ್ಟೇ ಮುಕುಲ್ ರಾಯ್ ಅವರ ಪತ್ನಿ ದಾಖಲಾಗಿದ್ದ ಆಸ್ಪತ್ರೆಗೆ ಅಭಿಷೇಕ್ ಬ್ಯಾನರ್ಜಿ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಮರುದಿನವೇ ಪ್ರಧಾನಿ ನರೇಂದ್ರ ಮೋದಿಯವರು ದೂರವಾಣಿ ಮೂಲಕ ಮುಕುಲ್ ಅವರನ್ನು ಸಂಪರ್ಕಿಸಿ ಪತ್ನಿ ಆರೋಗ್ಯ ವಿಚಾರಿಸಿದ್ದರು.ಬಿಜೆಪಿಯ ರಾಜಕೀಯ ಸಂಸ್ಕೃತಿ ಮತ್ತು ನೀತಿಗಳು ಬಂಗಾಳಕ್ಕೆ ಅನ್ಯವಾಗಿದೆ ಮತ್ತು ಭವಿಷ್ಯದಲ್ಲಿ "ಹೊರಗಿನವನಾಗಿ" ಉಳಿಯುವಂತೆ ಮಾಡುತ್ತದೆ ಎಂಬ ಅಭಿಪ್ರಾಯವನ್ನು ರಾಯ್ ಹೊಂದಿದ್ದರು ಎಂದು ಅವರ ನಿಕಟವರ್ತಿಗಳು ಹೇಳಿದ್ದಾರೆ.

ಮಮತಾ ಬ್ಯಾನರ್ಜಿಯ ಸೋದರಳಿಯ ಮತ್ತು ಅವರ ಪಕ್ಷದ ಪ್ರಮುಖ ಮುಖಂಡ ಅಭಿಷೇಕ್ ಬ್ಯಾನರ್ಜಿ ರಾಯ್ ಅವರ ಪತ್ನಿ ದಾಖಲಾಗಿದ್ದ ಆಸ್ಪತ್ರೆಯಲ್ಲಿ ರಾಯ್ ಅವರನ್ನು ಭೇಟಿ ಮಾಡಿದಾಗಿನಿಂದ ಮುಕುಲ್ ರಾಯ್ ವಾಪಸ್ ಬರುವ ಬಗ್ಗೆ ಊಹಾಪೋಹಗಳು ಪ್ರಾರಂಭವಾದವು.

ಮರುದಿನವೇ ಪ್ರಧಾನಿ ನರೇಂದ್ರ ಮೋದಿ ಅವರು ವೈಯಕ್ತಿಕವಾಗಿ ರಾಯ್ ಅವರಿಗೆ ಕರೆ ಮಾಡಿ ಅವರೊಂದಿಗೆ ಸಂಭಾಷಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ರಾಯ್ ಅವರ ಮೌನ ಮತ್ತು ಕೋಲ್ಕತ್ತಾದ ಪ್ರಮುಖ ಬಿಜೆಪಿ ಸಭೆಗೆ ಅವರು ಗೈರುಹಾಜರಿ ಟಿಎಂಸಿಗೆ ಮರಳುತ್ತಾರೆ ಎಂಬ ಊಹಾಪೋಹಗಳಿಗೆ ಪುಷ್ಠಿ ನೀಡಿತ್ತು.

English summary
Mukul Roy, the BJP's first import from Mamata Banerjee's Trinamool Congress in Bengal, returned to his former party today along with son Shubhranshu, ending weeks of speculation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X