• search
  • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸೌರವ್ ಗಂಗೂಲಿಗೆ ಇಂತಹ ಗಂಭೀರ ಸಮಸ್ಯೆ ಇತ್ತು ಎಂದು ತಿಳಿದಿರಲಿಲ್ಲ: ಮಮತಾ ಬ್ಯಾನರ್ಜಿ

|

ಕೋಲ್ಕತಾ, ಜನವರಿ 03: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ತೆರಳಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಆರೋಗ್ಯವನ್ನು ವಿಚಾರಿಸಿದರು.

ಸೌರವ್ ಗಂಗೂಲಿ ಅವರಿಗೆ ಲಘು ಹೃದಯಾಘಾತವಾಗಿದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೌರವ್ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮಮತಾ ಬ್ಯಾನರ್ಜಿ, ಗಂಗೂಲಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದರು.

ಸೌರವ್ ಗಂಗೂಲಿ ಇಂತಹ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ತಾವು ಊಹಿಸಿರಲಿಲ್ಲ, ಆಂಜಿಯೋಪ್ಲ್ಯಾಸ್ಟಿ ನಡೆಸಿದ ವೈದ್ಯರಿಗೆ ಮುಖ್ಯಮಂತ್ರಿ ಧನ್ಯವಾದಗಳು ಸಲ್ಲಿಸಿದ್ದಾರೆ. ಮತ್ತೊಂದುಕಡೆ, ಗಂಗೂಲಿಗೆ ಆಂಜಿಯೋಪ್ಲ್ಯಾಸ್ಟಿ ನಡೆಸಿರುವುದಾಗಿ ವೈದ್ಯರು ತಿಳಿಸಿದ್ದು, ಅವರ ಹೃದಯದ ಎರಡು ರಕ್ತನಾಳಗಳು ಬ್ಲಾಕ್ ಆಗಿದ್ದವು.

ನಂತರ ಅವರು ನೇರವಾಗಿ ಗಂಗೂಲಿ ಚಿಕಿತ್ಸೆ ಪಡೆಯುತ್ತಿರುವ ವುಡ್ ಲ್ಯಾಂಡ್ ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದರು.

ಪಕ್ಷ ತೊರೆಯುತ್ತಿರುವ ನಾಯಕರು; ತೃಣಮೂಲ ಕಾಂಗ್ರೆಸ್‌ಗೆ ಭಾರೀ ಸವಾಲು

ಗಂಗೂಲಿ ಆರೋಗ್ಯ ಕುರಿತು ವೈದ್ಯರಿಂದ ಮಾಹಿತಿ ಪಡೆದ ನಂತರ, ಸೌರವ್ ಗಂಗೂಲಿ ಈಗ ಚೆನ್ನಾಗಿದ್ದಾರೆ. ಅವರೊಂದಿಗೆ ತಾವು ಮಾತನಾಡಿದ್ದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪ್ರಸ್ತುತ, ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಇನ್ನೂ 24 ಗಂಟೆಗಳ ಕಾಲ ವೈದ್ಯರ ಮೇಲ್ವಿಚಾರಣೆಯಲ್ಲಿರಲಿದ್ದಾರೆ. ಗಂಗೂಲಿ ಅವರರನ್ನು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಿಸಿರುವ ಬಗ್ಗೆ ಕ್ರಿಕೆಟ್ ಜಗತ್ತು ಗೊಂದಲದಲ್ಲಿದೆ.

ಅವರು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಹಲವು ಪ್ರಮುಖ ವ್ಯಕ್ತಿಗಳು, ಅಭಿಮಾನಿಗಳು ಹಾಗೂ ಕ್ರಿಕೆಟಿಗರು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದಾರೆ.

English summary
BCCI president and former India captain Sourav Ganguly, who underwent angioplasty at Woodlands Hospital in Kolkata after complaing of a chest pain on Saturday, was visited by West Bengal CM Mamata Banerjee, Governer Jadeep Dhankhar among other political heavyweights of the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X