ಸುವೇಂದು ನಾಮಪತ್ರ ರದ್ದು ಕೋರಿ ಚುನಾವಣಾ ಆಯೋಗಕ್ಕೆ ಟಿಎಂಸಿ ಪತ್ರ
ಕೋಲ್ಕತ್ತಾ, ಮಾರ್ಚ್ 17: ನಂದಿಗ್ರಾಮದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ನಾಮಪತ್ರ ರದ್ದು ಕೋರಿ ಟಿಎಂಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.
ಸುವೇಂದು ಅಧಿಕಾರಿ ನಾಮಪತ್ರದಲ್ಲಿ ತಮ್ಮ ಸುಳ್ಳು ವಿಳಾಸವನ್ನು ನೀಡಿದ್ದಾರೆ, ಅವರು ನೀಡಿರುವ ವಿಳಾಸದಲ್ಲಿ ಅವರು ವಾಸಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಸುವೇಂದು ಅಧಿಕಾರಿ ಹಾಲ್ಡಿಯಾದಲ್ಲಿ ಮತ್ತೊಂದು ಮತದಾರ ಗುರುತಿನ ಚೀಟಿ ಹೊಂದಿದ್ದಾರೆ. ಕಳೆದ ಆರು ತಿಂಗಳಿನಿಂದ ಸುವೇಂದು ಅಧಿಕಾರಿ ನಂದಿಗ್ರಾಮದ ನಂದನಾಯಕ್‌ಬಾರ್‌ನಲ್ಲಿ ವಾಸಿಸುತ್ತಿಲ್ಲ ಎಂದು ದೂರಿದ್ದಾರೆ.

ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಆಪ್ತರಾಗಿದ್ದರು, ಪಕ್ಷದಲ್ಲಿ ಭಿನ್ನಾಭಿಪ್ರಾಯ ಬಂದ ಬಳಿಕ ಟಿಎಂಸಿ ಬಿಟ್ಟು ಬಿಜೆಪಿ ಸೇರಿದ್ದರು. ಈಗ ಸುವೇಂದು ನಂದಿಗ್ರಾಮದ ಬಿಜೆಪಿ ಅಭ್ಯರ್ಥಿಯಾಗಿದ್ದು, ಟಿಎಂಸಿಯಿಂದ ಮಮತಾ ಬ್ಯಾನರ್ಜಿ ಇದೇ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಒಟ್ಟು 8 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೇ 2 ರಂದು ಫಲಿತಾಂಶ ಹೊರಬೀಳಲಿದೆ. ಇಂದು ಸಿಎಂ ಮಮತಾ ಬ್ಯಾನರ್ಜಿ ಟಿಎಂಸಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಒಂದೊಮ್ಮೆ ಪಕ್ಷ ಅಧಿಕಾರಕ್ಕೆ ಬಂದರೆ ವರ್ಷದಲ್ಲಿ 5 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದಾರೆ.
ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಲು ತೆರಳಿದ್ದ ವೇಳೆ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ ನಡೆಸಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ವ್ಹೀಲ್‌ಚೇರ್‌ನಲ್ಲಿಯೇ ಚುನಾವಣಾ ಪ್ರಚಾರ ನಡೆಸಿದ್ದಾರೆ.












Click it and Unblock the Notifications