Get Updates
Get notified of breaking news, exclusive insights, and must-see stories!

ಬ್ಯಾಂಕ್ ಖಾತೆ ಸ್ಥಗಿತ; ಕೇಂದ್ರದ ವಿರುದ್ಧ ಮಮತಾ ಗರಂ!

ಕೋಲ್ಕತ್ತಾ, ಡಿಸೆಂಬರ್ 27; ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವೆ ಮತ್ತೆ ಜಟಾಪಟಿ ಆರಂಭವಾಗಿದೆ. ಮದರ್ ತೆರೇಸಾ ಮಿಷನರೀಸ್ ಆಫ್ ಚಾರಿಟಿಗೆ ಸೇರಿದ ಬ್ಯಾಂಕ್ ಖಾತೆಗಳನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿರುವ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ.

ಸೋಮವಾರ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಈ ಕುರಿತು ಟ್ವೀಟ್ ಮಾಡಿದ್ದಾರೆ, "ಕೇಂದ್ರ ಸರ್ಕಾರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಮೂಲಕ 22 ಸಾವಿರ ರೋಗಿಗಳು ಮತ್ತು ಉದ್ಯೋಗಿಗಳಿಗೆ ಆಹಾರ, ಔಷಧಿ ಸಿಗದಂತೆ ಮಾಡಿದೆ" ಎಂದು ಆರೋಪಿಸಿದ್ದಾರೆ.

"ಕ್ರಿಸ್ ಮಸ್ ಸಂದರ್ಭದಲ್ಲಿ ಇದನ್ನು ಕೇಳಿ ನನಗೆ ಆಘಾತವಾಗಿದೆ. ಕಾನೂನು ಎಲ್ಲದಕ್ಕಿಂತ ಮೇಲೂ ಆದರೆ ಮಾನವೀಯ ಕಾರ್ಯಗಳ ವಿಚಾರದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳಬಾರದು" ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.

Mamta Banerjee

ಆದರೆ ಕೇಂದ್ರ ಗೃಹ ಸಚಿವಾಲಯ ಈ ಕುರಿತು ಈಗಾಗಲೇ ಸ್ಪಷ್ಟನೆ ನೀಡಿದೆ. ಮದರ್ ತೆರೇಸಾ ಮಿಷನರೀಸ್ ಆಫ್ ಚಾರಿಟಿಗೆ ಸೇರಿದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿಲ್ಲ ಎಂದು ಹೇಳಿದೆ.

ಡಿಸೆಂಬರ್ 25ರಂದು ಸಂಸ್ಥೆ ವಿದೇಶಿ ಅನುದಾನಗಳನ್ನು ಪಡೆಯಲು ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ( ಪರವಾನಗಿ ನವೀಕರಣಕ್ಕೆ ಮನವಿ ಮಾಡಿತ್ತು. ಆದರೆ ದಾಖಲೆಗಳ ಪರಿಶೀಲನೆ ಬಳಿಕ ನವೀಕರಣ ಮನವಿಯನ್ನು ತಿರಸ್ಕಾರ ಮಾಡಲಾಗಿದೆ ಎಂದು ಗೃಹ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಕೇಂದ್ರ ಗೃಹ ಸಚಿವಾಲಯ ಯಾವುದೇ ಖಾತೆಗಳನ್ನು ಸ್ಥಗಿತಗೊಳಿಸಲು ನಿರ್ದೇಶನ ನೀಡಿಲ್ಲ. ತನ್ನ ಖಾತೆಗಳನ್ನು ಫ್ರೀಜ್ ಮಾಡಲು ಮಿಷನರೀಸ್ ಆಫ್ ಚಾರಿಟಿಯೇ ಬ್ಯಾಂಕ್‌ಗೆ ವಿನಂತಿ ಮಾಡಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೇಳಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+