ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪೊಲೀಸರ ಮೇಲೆ ಕಲ್ಲು ತೂರಾಟ
ಕೋಲ್ಕತ್ತಾ (ಪಶ್ಚಿಮ ಬಂಗಾಲ), ಜೂನ್ 12: ಬಿಜೆಪಿ ಕಾರ್ಯಕರ್ತರು ಪೊಲೀಸರ ಮಧ್ಯೆ ಬುಧವಾರ ಹೊಡೆದಾಟ ನಡೆದಿದೆ. ಬಿಜೆಪಿಯವರ ಭಾರೀ ಮೆರವಣಿಗೆ ವೇಳೆ ಈ ಘಟನೆ ಸಂಭವಿಸಿದೆ. ಲೋಕಸಭಾ ಚುನಾವಣೆ ನಂತರ ನಡೆದ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರ ಮೇಲಿನ ಹಿಂಸಾಚಾರ ಹಾಗೂ ದಾಳಿ ವಿರೋಧಿಸಿ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿತ್ತು.
ಬಿಜೆಪಿ ಕಾರ್ಯಕರ್ತರು ಬೌಬಜಾರ್ ದಾಟುವ ವೇಳೆ ಪೊಲೀಸರು ಅಶ್ರುವಾಯು ಹಾಗೂ ಜಲಫಿರಂಗಿ ಬಳಸಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರು ಸಹ ಘೋಷಣೆಗಳನ್ನು ಕೂಗಿದ್ದಾರೆ. ಅಧಿಕಾರಿಗಳ ಮೇಲೆ ಕಲ್ಲು ಹಾಗೂ ಬಾಟಲಿಗಳನ್ನು ತೂರಿದ್ದಾರೆ. ಪಕ್ಷದ ಕೆಲವು ಕಾರ್ಯಕರ್ತರು ಸ್ಥಳದಲ್ಲಿ ಕುಳಿತು ಧರಣಿ ನಡೆಸಿದ್ದಾರೆ.

ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗಿಂತ ಎರಡು ಸ್ಥಾನವಷ್ಟೇ ಕಡಿಮೆ ಪಶ್ಚಿಮ ಬಂಗಾಲದಲ್ಲಿ ಬಿಜೆಪಿಗೆ ಬಂದಿದೆ. ಆ ನಂತರ ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ವಿವಿಧೆಡೆ ಹಿಂಸಾಚಾರದ ಘಟನೆಗಳು ವರದಿ ಆಗಿದ್ದು, ಕೇಂದ್ರವು ಈ ಬಗ್ಗೆ ವರದಿ ಕೇಳಿದೆ.












Click it and Unblock the Notifications