ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳ ಚುನಾವಣೆ; ತೃಣಮೂಲ, ಬಿಜೆಪಿ ನಡುವೆ ಕಣಕ್ಕಿಳಿಯಲು ಸಿದ್ಧವಾದ ಕಾಂಗ್ರೆಸ್-ಎಡಪಕ್ಷ

|
Google Oneindia Kannada News

ಕೋಲ್ಕತ್ತಾ, ಜನವರಿ 28: ಮುಂಬರುವ ವಿಧಾನಸಭೆ ಚುನಾವಣೆಗೆ ಪಶ್ಚಿಮ ಬಂಗಾಳ ಸಜ್ಜಾಗುತ್ತಿದೆ. ರಾಜ್ಯದಲ್ಲಿ 294 ಸೀಟುಗಳಿಗೆ ಚುನಾವಣೆ ನಡೆಯುತ್ತಿದ್ದು, ಆಡಳಿತದಲ್ಲಿರುವ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಇದೀಗ ಕಾಂಗ್ರೆಸ್ ಹಾಗೂ ಎಡಪಕ್ಷ 116 ಸೀಟುಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಿವೆ.

ಇನ್ನುಳಿದ 77 ಸೀಟುಗಳ ಕುರಿತು ಮಾತುಕತೆ ನಡೆಯುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ಘೋಷಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಮತಾಗೆ ಭಾರೀ ಹಿನ್ನಡೆ: ಖ್ಯಾತ ಜ್ಯೋತಿಷಿಯ ಭವಿಷ್ಯ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಮತಾಗೆ ಭಾರೀ ಹಿನ್ನಡೆ: ಖ್ಯಾತ ಜ್ಯೋತಿಷಿಯ ಭವಿಷ್ಯ

2016ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಎಡಪಕ್ಷ ಮೈತ್ರಿಯಾಗಿ ಸ್ಪರ್ಧಿಸಿದ್ದವು. 77 ಸೀಟುಗಳನ್ನು ಕಾಂಗ್ರೆಸ್ ಹಾಗೂ ಎಡಪಕ್ಷಗಳು ಗಳಿಸಿದ್ದವು. ಕಾಂಗ್ರೆಸ್ 44 ಸೀಟು ಗಳಿಸಿದ್ದರೆ, ಎಡಪಕ್ಷ 33 ಸೀಟುಗಳನ್ನು ಪಡೆದುಕೊಂಡಿತ್ತು. ಮೈತ್ರಿಯಾಗಿ ಸ್ಪರ್ಧಿಸಿದ್ದರೂ ತೃಣಮೂಲ ಕಾಂಗ್ರೆಸ್ ಗೆಲುವು ಸಾಧಿಸುವುದನ್ನು ತಡೆಯಲು ಸಾಧ್ಯವಾಗಲಿಲ್ಲ. 294 ಸೀಟುಗಳಲ್ಲಿ 211 ಸೀಟುಗಳು ತೃಣಮೂಲ ಕಾಂಗ್ರೆಸ್ ಪಾಲಾಗಿದ್ದವು.

Congress And Left Front Decide To Contest 116 Seats In West Bengal

ಈ ಬಾರಿ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪಶ್ಚಿಮ ಬಂಗಾಳದಲ್ಲಿ ಭಾರೀ ಪೈಪೋಟಿ ಶುರುವಾಗಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಪ್ರಚಾರ ಕಾರ್ಯವೂ ಭರದಿಂದ ಸಾಗಿವೆ. ಇದೀಗ ಕಾಂಗ್ರೆಸ್ -ಎಡಪಕ್ಷಗಳು ಕೂಡ ಹೋರಾಟಕ್ಕೆ ಸನ್ನದ್ಧವಾಗಿವೆ.

English summary
Congress and the Left Front have decided to contest 116 seats for the upcoming west bengal state assembly elections,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X