• search
  • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪಶ್ಚಿಮ ಬಂಗಾಳ ಚುನಾವಣೆ 2021: 3ನೇ ಹಂತಕ್ಕಾಗಿ 30 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

|

ಕೋಲ್ಕತಾ, ಮಾರ್ಚ್ 22: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ 2021ರ ಮೂರನೇ ಹಂತದ ಮತದಾನಕ್ಕಾಗಿ ಕಾಂಗ್ರೆಸ್ ಪಕ್ಷವು 30 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಎಐಸಿಸಿ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಮತ್ತು ಪಕ್ಷದ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಸಚಿನ್ ಪೈಲಟ್, ನವಜೋತ್ ಸಿಂಗ್ ಸಿಧು ಸೇರಿದಂತೆ ಒಟ್ಟು 30 ಸ್ಟಾರ್ ಪ್ರಚಾರಕರು ಪಟ್ಟಿಯಲ್ಲಿದ್ದಾರೆ.

ಕೇರಳ ಬಿಟ್ಟು ಪಶ್ಚಿಮ ಬಂಗಾಳದ ಕಡೆ ಹೋಗದ ರಾಹುಲ್: ಕಾರಣವೇನು?

ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣಾ ಆಖಾಡವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಟಿಎಂಸಿ, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಈ ಬಾರಿ ಹೇಗಾದರೂ ಮಾಡಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿಯಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದಾರೆ. ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಾಂಗ್ರೆಸ್ ಪ್ರಚಾರದ ನೇತೃತ್ವ ವಹಿಸಿಕೊಂಡಿದ್ದಾರೆ.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅನಾರೋಗ್ಯ ಸಂಬಂಧ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳುತ್ತಿಲ್ಲವಾದರೂ ಅವರ ಹೆಸರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದೆ. ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಹಾಗೂ ಬಿ.ಕೆ ಹರಿಪ್ರಸಾದ್ ಅವರ ಹೆಸರೂ ಪಟ್ಟಿಯಲ್ಲಿದೆ.

ಟಿಎಂಸಿ ಪರ ಪ್ರಚಾರ ಮಾಡದಂತೆ ಆರ್‌ಜೆಡಿ, ಎನ್‌ಸಿಪಿ ಮುಖಂಡರಿಗೆ ಕಾಂಗ್ರೆಸ್ ಪತ್ರ

ಟಿಎಂಸಿ ನಾಯಕಿ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾಲು ನೋವಿನ ನಡುವೆಯೂ ಪ್ರಚಾರ ಸಭೆಗಳಲ್ಲಿ ಭಾಗುವಹಿಸುತ್ತಿದ್ದು, ಇತ್ತ ಬಿಜೆಪಿಯ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತಾ ಶಾ ಸೇರಿದಂತೆ ಘಟಾನುಘಟಿ ನಾಯಕರು ಭಾರೀ ಜನಸ್ತೋಮ ಸೇರಿಸಿ ಪ್ರಚಾರ ಮಾಡುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ 30 ಸ್ಟಾರ್ ಪ್ರಚಾರಕರ ಪಟ್ಟಿ ಇಲ್ಲಿದೆ.

* ಸೋನಿಯಾ ಗಾಂಧಿ

* ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್

* ರಾಹುಲ್ ಗಾಂಧಿ

* ಪ್ರಿಯಾಂಕಾ ಗಾಂಧಿ ವಾದ್ರಾ

* ಸಚಿನ್ ಪೈಲಟ್

* ನವಜೋತ್ ಸಿಂಗ್ ಸಿಧು

* ಮಲ್ಲಿಕಾರ್ಜುನ ಖರ್ಗೆ

* ಅಶೋಕ್ ಗೆಹ್ಲೋಟ್

* ಅಮರಿಂದರ್ ಸಿಂಗ್

* ಬಿ.ಕೆ ಹರಿಪ್ರಸಾದ್

* ಮನೀಷ್ ತಿವಾರಿ ಹಾಗೂ ಅಭಿಜಿತ್ ಮುಖರ್ಜಿ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರ ಹೆಸರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದೆ.

English summary
Congress has released a list of 30 star campaigners for the third phase of the West Bengal assembly elections 2021. Party's interim chief Sonia Gandhi, former-PM Dr Manmohan Singh, included.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X