ಅಂಫಾನ್ ಚಂಡಮಾರುತದಿಂದ ಪಶ್ಚಿಮ ಬಂಗಾಳಕ್ಕೆ ಆದ ನಷ್ಟವೆಷ್ಟು?

ಕೊಲ್ಕತ್ತ, ಜೂನ್ 7: ಅಂಫಾನ್ ಚಂಡಮಾರುತವು ಪಶ್ಚಿಮ ಬಂಗಾಳಕ್ಕೆ 1 ಲಕ್ಷ ಕೋಟಿ ರೂ ನಷ್ಟ ಉಂಟು ಮಾಡಿದೆ ಎಂದು ಕೇಂದ್ರ ಸರ್ಕಾರಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಮಾಹಿತಿ ನೀಡಿದೆ.

ಅಂಫಾನ್ ಚಂಡಮಾರುತದಿಂದಾಗಿ 1,02,422 ಕೋಟಿ ರೂ. ನಷ್ಟವಾಗಿದೆ. ಈ ಪೈಕಿ ಮನೆಗಳಿಗೆ ಆದ ಹಾನಿಯಿಂದಲೇ ಗರಿಷ್ಠ ಅಂದರೆ 28.56 ಕೋಟಿ ರೂ. ನಷ್ಟ ಸಂಭವಿಸಿದೆ.

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳೂ ಸೇರಿದಂತೆ ಕೈಗಾರಿಕಾ ವಲಯಕ್ಕೆ 26,790 ಕೋಟಿ ರೂ. ನಷ್ಟವಾಗಿದೆ. ಕೃಷಿ ಕ್ಷೇತ್ರಕ್ಕೆ 15,860 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ರಾಜ್ಯ ಸರ್ಕಾರವು ಕೇಂದ್ರ ಸಮಿತಿಗೆ ವರದಿ ಸಲ್ಲಿಸಿದೆ.

Cyclone Amphan Caused Damages Of Over Rs 1 Lakh Crore In West Bengal

ಚಂಡಮಾರುತದಿಂದಾಗಿ ಸಂಭವಿಸಿರುವ ಹಾನಿಯ ಬಗ್ಗೆ ಕೇಂದ್ರ ಸರ್ಕಾರದ ಅಂತರ ಸಚಿವಾಲಯ ಸಮಿತಿಯು ಪಶ್ಚಿಮ ಬಂಗಾಳದಲ್ಲಿ ಎರಡು ದಿನಗಳ ಸಮೀಕ್ಷೆ ನಡೆಸುತ್ತಿದೆ.

ನಷ್ಟದ ಪ್ರಮಾಣದ ಪಟ್ಟಿಯನ್ನು ಕೇಂದ್ರದ ತಂಡಕ್ಕೆ ನೀಡಲಾಗಿದೆ. ನಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಾಗಿದ್ದು, ತುರ್ತು ನೆರವು ನೀಡುವಂತೆ ಮನವಿ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮೀನುಗಾರಿಕೆಗೆ 2 ಸಾವಿರ ಕೋಟಿ, ತೋಟಗಾರಿಕೆಗೆ 6581 ಕೋಟಿ, ಪ್ರಾಣಿ ಮತ್ತು ಸಂಪನ್ಮೂಲ ಅಭಿವೃದ್ಧಿ ಇಲಾಖೆಗೆ 452 ಕೋಟಿ, ನಗರ ಮೂಲಸೌಕರ್ಯ ಕ್ಷೇತ್ರಕ್ಕೆ 6750 ಕೋಟಿ ರೂ. ನಷ್ಟವಾಗಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+