ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಯಲ್ಲ ಮಿತ್ರಪಕ್ಷಗಳ ವಿರುದ್ಧವೂ ಸಿಡಿದೆದ್ದ ಮಮತಾ ಬ್ಯಾನರ್ಜಿ

|
Google Oneindia Kannada News

ಕೋಲ್ಕತ್ತಾ, ಜನವರಿ.09: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೊಂದಣಿ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಹೋರಾಟವನ್ನು ಮುಂದುವರಿಸಿದ್ದಾರೆ. ಆದರೆ, ಈ ಬಾರಿ ಕೆರಳಿರುವ ದೀದಿ, ಮಿತ್ರಪಕ್ಷಗಳ ಸಹವಾಸವೇ ಬೇಡ ಎನ್ನುವ ಧಾಟಿಯಲ್ಲಿ ಮಾತನಾಡಿದ್ದಾರೆ.

Recommended Video

ಜ್ಯೋತಿ ನಿವಾಸ್ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಟನೆಯ ಉದ್ದೇಶ ಏನು ? | JYOTHI NIVAS | CAA | ONEINDIA KANNADA

ಅಚ್ಚರಿ ಎನಿಸಿದರೂ ಇದು ಸತ್ಯ. ಕೇಂದ್ರ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳದ ಮಧ್ಯಮಗ್ರಾಮ್ ನಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರೆಲ್ಲ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದರು. ಸ್ವತಃ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಸಿಎಎ, ಎನ್‌ಆರ್‌ಸಿ ಪರ ಜಾಗೃತಿ ಮೂಡಿಸಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಸಿಎಎ, ಎನ್‌ಆರ್‌ಸಿ ಪರ ಜಾಗೃತಿ ಮೂಡಿಸಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ

ಈ ಮೊದಲು ಕೇಂದ್ರ ಸರ್ಕಾರ ಜಾರಿಗೊಳಿಸಿದ ಸಿಎಎ ಹಾಗೂ ಎನ್ಆರ್ ಸಿ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸುವ ಎನ್ನುತ್ತಿದ್ದರು. ಆದರೆ, ಮಮತಾ ಬ್ಯಾನರ್ಜಿ ದಿಢೀರ್ ಎಂದು ತಮ್ಮ ನಿಲುವನ್ನು ಬದಲಾಯಿಸಿಕೊಂಡಿದ್ದಾರೆ. ಯಾವ ಪಕ್ಷಗಳ ಬೆಂಬಲವೂ ಬೇಕಾಗಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.

ಕೇಂದ್ರದ ವಿರುದ್ಧ ಮಮತಾ ಬ್ಯಾನರ್ಜಿ ಏಕಾಂಗಿ ಹೋರಾಟ

ಕೇಂದ್ರದ ವಿರುದ್ಧ ಮಮತಾ ಬ್ಯಾನರ್ಜಿ ಏಕಾಂಗಿ ಹೋರಾಟ

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೊಂದಣಿ ವಿರುದ್ಧ ಮೊದಲಿನಿಂದಲೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಧ್ವನಿ ಎತ್ತುತ್ತಲೇ ಬಂದಿದ್ದಾರೆ. ಕೇಂದ್ರ ಸರ್ಕಾರದ ತಾರತಮ್ಯ ನೀತಿ ವಿರುದ್ಧ ಪ್ರತಿಭಟನೆ ನಡೆಸುತ್ತಲೇ ಬಂದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಏಕಾಂಗಿಯಾಗಿಯೇ ಕೇಂದ್ರದ ವಿರುದ್ಧ ಹೋರಾಟವನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

ದೇಶದ ವಿವಿಧಡೆ ನಡೆಯುತ್ತಿರುವ ಹಿಂಸಾಚಾರಕ್ಕೆ ವಿರೋಧ

ದೇಶದ ವಿವಿಧಡೆ ನಡೆಯುತ್ತಿರುವ ಹಿಂಸಾಚಾರಕ್ಕೆ ವಿರೋಧ

ಕೇಂದ್ರ ಸರ್ಕಾರ ವಿರುದ್ಧ ಹೋರಾಟ ನಡೆಸಬೇಕು ಎಂಬುದು ಎಷ್ಟು ಸತ್ಯವೋ, ಅದೇ ರೀತಿ ದೇಶದಲ್ಲಿ ಹಿಂಸಾಚಾರ ನಡೆಸಬಾರದು ಎಂಬುದು ಅಷ್ಟೇ ಸತ್ಯ. ಆದರೆ, ಇತ್ತೀಚಿನ ಘಟನೆಗಳನ್ನು ಪರಾಮರ್ಶಿಸಿ ನೋಡಿದಾಗ ಪ್ರತಿಭಟನೆ ಹೆಸರಿನಲ್ಲಿ ಹಿಂಸಾಚಾರ ನಡೆಸಲಾಗುತ್ತಿದೆ. ಇದಕ್ಕೆ ನನ್ನ ವಿರೋಧವಿದೆ ಎಂದು ಮಮತಾ ಬ್ಯಾನರ್ಜಿ ಕಿಡಿ ಕಾರಿದ್ದಾರೆ.

ಹೋರಾಟದ ನೆಪದಲ್ಲಿ ಕೀಳು ರಾಜಕಾರಣಕ್ಕೆ ಕೆಂಡಾಮಂಡಲ

ಹೋರಾಟದ ನೆಪದಲ್ಲಿ ಕೀಳು ರಾಜಕಾರಣಕ್ಕೆ ಕೆಂಡಾಮಂಡಲ

ಕಾಂಗ್ರೆಸ್ ಹಾಗೂ ಎಡಪಕ್ಷಗಳು ಕೇಂದ್ರ ಸರ್ಕಾರದ ವಿರೋಧಿ ಹೋರಾಟದ ನೆಪದಲ್ಲಿ ಹಿಂಸಾಚಾರ ನಡೆಸುತ್ತಿವೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ವಿಪಕ್ಷಗಳು ನಡೆಸುತ್ತಿರುವ ಹಿಂಸಾಚಾರವನ್ನು ಸಹಿಸಲು ಸಾಧ್ಯವಿಲ್ಲ. ಈ ರೀತಿಯ ಹಿಂಸಾಚಾರವನ್ನು ಎಂದಿಗೂ ಒಪ್ಪಲು ಸಾಧ್ಯವಿಲ್ಲ. ರಾಜಕೀಯ ನಾಯಕರು ಹೋರಾಟದ ಜೊತೆಗೆ ತಮ್ಮ ಜವಾಬ್ದಾರಿಯನ್ನು ಮರೆಯಬಾರದು ಎಂದು ದೀದಿ ವಾಗ್ದಾಳಿ ನಡೆಸಿದರು.

ವಿಪಕ್ಷಗಳು ಕರೆದಿರುವ ಸಭೆಯನ್ನು ಬಹಿಷ್ಕರಿಸಿದ ದೀದಿ

ವಿಪಕ್ಷಗಳು ಕರೆದಿರುವ ಸಭೆಯನ್ನು ಬಹಿಷ್ಕರಿಸಿದ ದೀದಿ

ಇನ್ನು, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಸಿಎಎ ಹಾಗೂ ಎನ್ಆರ್ ಸಿ ವಿರುದ್ಧ ಹೋರಾಟದ ಬಗ್ಗೆ ತೀರ್ಮಾನಿಸಲು ಜನವರಿ.13ರಂದು ನವದೆಹಲಿಯಲ್ಲಿ ವಿರೋಧ ಪಕ್ಷಗಳೆಲ್ಲ ಸಭೆ ನಡೆಸಲು ತೀರ್ಮಾನಿಸಿವೆ. ಆದರೆ, ದೆಹಲಿಯಲ್ಲಿ ನಡೆಯುವ ಈ ಸಭೆಯನ್ನು ಬಹಿಷ್ಕರಿಸುವುದಾಗಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

English summary
Citizenship Amendment Act: Don't Create Violence In Name Of CAA And NRC Protest. Cm Mamata Banarjee Attacked On Congress And Left Parties.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X