ಪಶ್ಚಿಮ ಬಂಗಾಳ ನೇಮಕಾತಿ ಹಗರಣ: ಸಚಿವನ ಆಪ್ತರ ಮನೆಯಲ್ಲಿ 20 ಕೋಟಿ ರು. ನಗದು ಪತ್ತೆ

ಕೋಲ್ಕತ್ತಾ, ಜುಲೈ22: ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಆಪ್ತರಾದ ಅರ್ಪಿತಾ ಮುಖರ್ಜಿ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದು, ದಾಳಿ ವೇಳೆ 20 ಕೋಟಿ ರುಪಾಯಿ ನಗದು ಪತ್ತೆಯಾಗಿದೆ.

ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ, ಪಾರ್ಥ ಚಟರ್ಜಿಯವರ ನಿಕಟವರ್ತಿಯಾಗಿರುವ ಅರ್ಪಿತಾ ಮುಖರ್ಜಿಯವರ ವಸತಿ ಆವರಣದಿಂದ ಸುಮಾರು 20 ಕೋಟಿ ರೂಪಾಯಿ ಮೊತ್ತದ ಬೃಹತ್ ಹಣವನ್ನು ಇಡಿ ವಶಪಡಿಸಿಕೊಂಡಿದೆ. ಈ ನಗದು ಶಾಲಾ ಸೇವಾ ಆಯೋಗದ ಹಗರಣದಿಂದ ಬಂದಿರುವ ಆಕ್ರಮ ಆದಾಯ ಎಂದು ಶಂಕಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಡಬ್ಲ್ಯುಬಿ-ಎಸ್‌ಎಸ್‌ಸಿ) ಮತ್ತು ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯಲ್ಲಿ ನಡೆದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ವಿವಿಧ ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಹುಡುಕಾಟ ನಡೆಸುತ್ತಿರುವ ವ್ಯಕ್ತಿಗಳಲ್ಲಿ ಟಿಎಂಸಿಯ ಪಾರ್ಥ ಚಟರ್ಜಿ, ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಹಾಲಿ ಸಚಿವರೂ ಸೇರಿದ್ದಾರೆ.

ಪ್ರಸ್ತುತ ಕೈಗಾರಿಕೆಗಳು ಮತ್ತು ವಾಣಿಜ್ಯ ಸಚಿವರಾಗಿರುವ ಪಾರ್ಥ ಚಟರ್ಜಿ ಅವರು ಶಿಕ್ಷಣ ಸಚಿವರಾಗಿದ್ದಾಗ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ರಮ ನೇಮಕಾತಿಗಳನ್ನು ಮಾಡಲಾಗಿದೆ ಎನ್ನುವ ಆರೋಪವಿದೆ.

 20ಕ್ಕೂ ಹೆಚ್ಚು ಮೊಬೈಲ್ ಪತ್ತೆ

20ಕ್ಕೂ ಹೆಚ್ಚು ಮೊಬೈಲ್ ಪತ್ತೆ

ದಾಳಿ ವೇಳೆ ಪತ್ತೆಯಾಗಿರುವ ಹಣವನ್ನು ಎಣಿಸಲು ಎಣಿಕೆ ಯಂತ್ರಗಳನ್ನು ಬಳಕೆ ಮಾಡಲು ಶೋಧ ತಂಡ ಬ್ಯಾಂಕ್ ಅಧಿಕಾರಿಗಳ ನೆರವು ಪಡೆಯುತ್ತಿದೆ. ಅರ್ಪಿತಾ ಮುಖರ್ಜಿ ಅವರ ಮನೆಯಲ್ಲಿ ಒಟ್ಟು 20 ಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅದರ ಉದ್ದೇಶ ಮತ್ತು ಬಳಕೆಯ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಇ.ಡಿ. ಅಧಿಕಾರಿಗಳು ತಿಳಿಸಿದ್ದಾರೆ.

 ಹಗರಣಕ್ಕೆ ಸಂಬಂಧಪಟ್ಟ ದಾಖಲೆಗಳು ವಶಕ್ಕೆ

ಹಗರಣಕ್ಕೆ ಸಂಬಂಧಪಟ್ಟ ದಾಖಲೆಗಳು ವಶಕ್ಕೆ

ಶಾಲಾ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಗಳ ವಿವಿಧ ಆವರಣಗಳಿಂದ ಕೆಲವು ದೋಷಾರೋಪಣೆಯ ದಾಖಲೆಗಳು, ದಾಖಲೆಗಳು, ಸಂಶಯಾಸ್ಪದ ಕಂಪನಿಗಳ ವಿವರಗಳು, ಎಲೆಕ್ಟ್ರಾನಿಕ್ ಸಾಧನಗಳು, ವಿದೇಶಿ ಕರೆನ್ಸಿ ಮತ್ತು ಚಿನ್ನವನ್ನು ಕೂಡ ಇ.ಡಿ ಪತ್ತೆ ಮಾಡಿದೆ.

 ತನಿಖೆ ನಡೆಸಲು ಸಿಬಿಐಗೆ ನಿರ್ದೇಶನ ನೀಡಿದ್ದ ಕೋರ್ಟ್

ತನಿಖೆ ನಡೆಸಲು ಸಿಬಿಐಗೆ ನಿರ್ದೇಶನ ನೀಡಿದ್ದ ಕೋರ್ಟ್

ಗ್ರೂಪ್ 'ಸಿ' ಮತ್ತು 'ಡಿ' ಸಿಬ್ಬಂದಿ, 9ರಿಂದ 12ನೇ ತರಗತಿಗಳ ಸಹಾಯಕ ಶಿಕ್ಷಕರು ಮತ್ತು ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣದ ಬಗ್ಗೆ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿದ ತಿಂಗಳ ನಂತರ ಈ ಬೆಳವಣಿಗೆಯಾಗಿದೆ.

ಪ್ರಾಥಮಿಕ ಶಾಲೆಯಲ್ಲಿ ಬೋಧಕೇತರ ಸಿಬ್ಬಂದಿ, ಬೋಧಕ ಸಿಬ್ಬಂದಿ ಮತ್ತು ಶಿಕ್ಷಕರ ಅಕ್ರಮ ನೇಮಕಾತಿಯನ್ನು ಒಳಗೊಂಡಿರುವ ಪ್ರಕರಣದಲ್ಲಿ, ಜಾರಿ ನಿರ್ದೇಶನಾಲಯ ಮನಿ ಲಾಂಡರಿಂಗ್ ತಡೆ ಕಾಯ್ದೆ, 2002 (PMLA) ಅಡಿಯಲ್ಲಿ ಪ್ರಕರಣಗಳನ್ನು ತನಿಖೆ ನಡೆಸುತ್ತಿದೆ.

 ಹಲವು ಕಡೆಗಳಲ್ಲಿ ಇ.ಡಿ. ದಾಳಿ

ಹಲವು ಕಡೆಗಳಲ್ಲಿ ಇ.ಡಿ. ದಾಳಿ

ಇ.ಡಿ. ಅಧಿಕಾರಿಗಳು ಶಿಕ್ಷಣ ರಾಜ್ಯ ಸಚಿವ ಪರೇಶ್ ಸಿ ಅಧಿಕಾರಿ ಮೇಲೂ ದಾಳಿ ನಡೆಸುತ್ತಿದ್ದಾರೆ. ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ, ಸಚಿವ ಪಾರ್ಥ ಚಟರ್ಜಿಯವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ, ಉದ್ಯೋಗಗಳ ಡೀಲ್ ಕುದುರಿಸುವ ಏಜೆಂಟ್ ಚಂದನ್ ಮೊಂಡಲ್, ಪಾರ್ಥ ಭಟ್ಟಾಚಾರ್ಯರ ಅಳಿಯ ಕಲ್ಯಾಣಮಯ್ ಭಟ್ಟಾಚಾರ್ಯ, ಪಶ್ಚಿಮ ಬಂಗಾಳದ ಕೇಂದ್ರೀಯ ಶಾಲಾ ಸೇವಾ ಆಯೋಗದ ಸಲಹೆಗಾರ ಡಾ ಎಸ್ಪಿ ಸಿನ್ಹಾ, ಪಶ್ಚಿಮ ಬಂಗಾಳದ ಪ್ರೌಢ ಶಿಕ್ಷಣ ಮಂಡಳಿಯ ಮಾಜಿ ಅಧ್ಯಕ್ಷ ಕಲ್ಯಾಣ್ಮೋಯ್ ಗಂಗೂಲಿ, ಪಶ್ಚಿಮ ಬಂಗಾಳದ ಕೇಂದ್ರ ಶಾಲಾ ಸೇವಾ ಆಯೋಗದ ಮಾಜಿ ಅಧ್ಯಕ್ಷೆ ಸೌಮಿತ್ರಾ ಸರ್ಕಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಲೋಕ್ ಕುಮಾರ್ ಸರ್ಕಾರ್ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+