ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿಗೆ ಆಯೋಗದ ನೋಟಿಸ್

|
Google Oneindia Kannada News

ಕೋಲ್ಕತ್ತಾ, ಏಪ್ರಿಲ್ 08: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಕೋಮು ಭಾವನೆಗಳನ್ನು ಕೆರಳಿಸುವಂತಾ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ ನಂದಿಗ್ರಾಮ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಅವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿಗೊಳಿಸಿದೆ.

ಸಿಪಿಐ-ಎಂಎಲ್ ಕೇಂದ್ರ ಸಮಿತಿಯ ಕವಿತಾ ಕೃಷ್ಣನ್ ಅವರು ನೀಡಿದ ದೂರಿನಡಿ ಬಿಜೆಪಿ ಮುಖಂಡ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ನೋಟಿಸ್‌ಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ.

"900 ಕೋಟಿ ರೂ. ಕಲ್ಲಿದ್ದಲು ಹಗರಣದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ"

ಕಳೆದ ಮಾರ್ಚ್ 29ರಂದು ನಂದಿಗ್ರಾಮ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಅವರು ಕೋಮು ಸೌಹಾರ್ದತೆಯನ್ನು ಪ್ರಚೋದಿಸುವಂತಾ ಆಕ್ಷೇಪಾರ್ಹ ಭಾಷಣವನ್ನು ಮಾಡಿದ್ದರು ಎಂದು ಆರೋಪಿಸಲಾಗಿದೆ.

Election Commission Notice To BJP Candidate Suvendu Adhikari For Hate Speech At Nandigram

ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಸ್ಪರ್ಧೆ:

ಪಶ್ಚಿಮ ಬಂಗಾಳದ ನಂದಿಗ್ರಾಮ್ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸುವೇಂದು ಅಧಿಕಾರಿ ಸ್ಪರ್ಧಿಸಿದ್ದಾರೆ. ಮತದಾರರನ್ನು ಸೆಳೆಯುವ ಭರದಲ್ಲಿ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪವಿದೆ.

ಬುಧವಾರ ದೀದಿಗೆ ನೋಟಿಸ್ ನೀಡಿದ್ದ ಆಯೋಗ:

ಒಂದು ಸಮುದಾಯಕ್ಕೆ ಕುರಿತು ಮಾತನಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬುಧವಾರವಷ್ಟೇ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿತ್ತು. ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಮುಂದಿನ 48 ಗಂಟೆಗಳಲ್ಲಿ ಚುನಾವಣಾ ಆಯೋಗ ನೀಡಿರುವ ನೋಟಿಸ್‌ಗೆ ಉತ್ತರ ನೀಡುವಂತೆ ಸೂಚಿಸಲಾಗಿತ್ತು.

English summary
West Bengal Assembly Election 2021: Election Commission Notice To BJP Candidate Suvendu Adhikari For Hate Speech At Nandigram.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X