Breaking; ಪಿಕಪ್ ವಾಹನಕ್ಕೆ ವಿದ್ಯುತ್ ಸ್ಪರ್ಶ; 10 ಜನರು ಸಾವು

ಕೋಲ್ಕತ್ತಾ, ಆಗಸ್ಟ್ 01; ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ ಪಿಕಪ್ ವಾಹನಕ್ಕೆ ವಿದ್ಯುತ್ ಸ್ಪರ್ಶವಾಗಿದೆ. ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ.

ಭಾನುವಾರ ರಾತ್ರಿ ಸುಮಾರು 27 ಜನರಿದ್ದ ಪಿಕಪ್ ವಾಹನಕ್ಕೆ ವಿದ್ಯುತ್ ಸ್ಪರ್ಶವಾಗಿದೆ. ವಾಹನದಲ್ಲಿದ್ದ 10 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಜಲ್ಪಗುರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಮಿತ್ ವರ್ಮಾ ಘಟನೆ ಕುರಿತು ಮಾಹಿತಿ ನೀಡಿದ್ದಾರೆ, "12 ಗಂಟೆ ಸುಮಾರಿಗೆ ಮೇಕಿಲ್ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿ ಅನ್ವಯ ವಾಹನದ ಹಿಂದೆ ಜೋಡಿಸಲಾಗಿದ್ದ ಡಿಜೆ ಸಿಸ್ಟಮ್‌ ಜನರೇಟರ್‌ನಿಂದ ವಿದ್ಯುತ್ ಅವಘಡ ನಡೆದಿದೆ" ಎಂದರು.

Electrocution In Cooch Behar 10 Dead Many Injured

"27 ಜನರಲ್ಲಿ 16 ಜನರನ್ನು ಜಲ್ಪಗುರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಲ್ಲರಿಗೂ ಚಿಕ್ಕಪುಟ್ಟ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. 10 ಜನರು ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ಅಧೀಕ್ಷಕರು ಘೋಷಣೆ ಮಾಡಿದ್ದಾರೆ" ಎಂದು ಅಮಿತ್ ವರ್ಮಾ ಹೇಳಿದರು.

ಮೃತಪಟ್ಟ ಎಲ್ಲರೂ ಸೀತಾಕುಲ್ಚಿ ಎಂಬ ಪ್ರದೇಶಕ್ಕೆ ಸೇರಿದವರು. ಅವರ ಕುಟುಂಬಗಳನ್ನು ಸಂಪರ್ಕಿಸಿ ಘಟನೆ ಬಗ್ಗೆ ಮಾಹಿತಿ ನೀಡಲಾಗಿದೆ. ವಾಹನವನ್ನು ವಶಕ್ಕೆ ಪಡೆಯಲಾಗಿದ್ದು, ಚಾಲಕ ಪರಾರಿಯಾಗಿದ್ದಾನೆ.

ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆ ಕುರಿತು ತನಿಖೆ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+