ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣೆ ಸಮೀಪದಲ್ಲೇ ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಹೊಡೆತ

|
Google Oneindia Kannada News

ನವದೆಹಲಿ, ಮಾರ್ಚ್ 6: ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಹೊಡೆತ ಬಿದ್ದಂತೆ ಕಾಣುತ್ತಿದೆ. ಫೆ.12ರಂದು ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಟಿಎಂಸಿ ಮಾಜಿ ಸಂಸದ ದಿನೇಶ್ ತ್ರಿವೇದಿ ಶನಿವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಸದ್ಯಕ್ಕೆ ಬಿಜೆಪಿಯಿಂದ ತ್ರಿವೇದಿಗೆ ಬಾರಕ್ ‌ಪುರದಿಂದ ವಿಧಾನಸಭೆ ಚುನಾವಣೆ ಟಿಕೆಟ್ ದೊರೆಯಲಿದೆ ಎಂದು ನಿರೀಕ್ಷಿಸಲಾಗಿದೆ.

 ತೃಣಮೂಲ ಕಾಂಗ್ರೆಸ್ ಪಟ್ಟಿ ಬಿಡುಗಡೆ; ನಂದಿಗ್ರಾಮದ ಕಣದಲ್ಲಿ ಮಮತಾ ಬ್ಯಾನರ್ಜಿ ತೃಣಮೂಲ ಕಾಂಗ್ರೆಸ್ ಪಟ್ಟಿ ಬಿಡುಗಡೆ; ನಂದಿಗ್ರಾಮದ ಕಣದಲ್ಲಿ ಮಮತಾ ಬ್ಯಾನರ್ಜಿ

ತನ್ನ ರಾಜ್ಯದಲ್ಲಿ ಗಲಭೆ ವಾತಾವರಣವಿದ್ದು, ಇದನ್ನು ತಡೆಯಲು ತನ್ನಿಂದ ಏನೂ ಮಾಡಲು ಸಾಧ್ಯವಾಗುತ್ತಿಲ್ಲ. ಇಲ್ಲಿ ನನಗೆ ಉಸಿರು ಕಟ್ಟಿದಂಥ ವಾತಾವರಣವಿದೆ ಎಂದು ಹೇಳಿದ್ದ ತ್ರಿವೇದಿ ರಾಜ್ಯಸಭೆ ಸದಸ್ಯತ್ವಕ್ಕೆ ಫೆ.12ರಂದು ರಾಜೀನಾಮೆ ಘೋಷಿಸಿದ್ದರು. ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜೆ.ಪಿ.ನಡ್ಡಾ ಅವರ ಉಪಸ್ಥಿತಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

Ex TMC Rajya Sabha Member Dinesh Trivedi Joins BJP

ತೃಣಮೂಲ ಕಾಂಗ್ರೆಸ್‌ ಬಗ್ಗೆ ತ್ರಿವೇದಿ ದೂಷಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ ಪಕ್ಷದ ಕುರಿತು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಇದೇ ಮಾರ್ಚ್ 27ರಿಂದ ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಆರಂಭವಾಗಲಿದೆ. 294 ಕ್ಷೇತ್ರಗಳಿಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಮೇ 2ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

English summary
Ex TMC Rajya Sabha member and a well known personality from West Bengal Dinesh Trivedi joins BJP on saturday,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X