ಪ.ಬಂಗಾಳ ಬಿಜೆಪಿ ನಾಯಕ ಸುವೇಂದು ಅಧಿಕಾರಿ ವಿರುದ್ಧ FIR ದಾಖಲು
ಕೊಲ್ಕತ್ತಾ, ಜೂನ್ 6: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮತ್ತು ಆವರ ಸೋದರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪುರ್ಬಾ ಮೇದಿನಿಪುರ ಜಿಲ್ಲೆಯ ಕಾಂತಿ ಪುರಸಭೆ ಕಛೇರಿಯಿಂದ ಪರಿಹಾರ ಸಾಮಾಗ್ರಿಗಳನ್ನು ಕದ್ದ ಆರೋಪ ಸುವೇಂದು ಅಧಿಕಾರಿ ಹಾಗೂ ಅವರ ಸೋದರನ ಮೇಲಿದೆ.
ಕಾಂತಿ ಪುರಸಭೆ ಆಡಳಿತ ಮಂಡಳಿಯ ಸದಸ್ಯ ರತ್ನದೀಪ್ ಮನ್ನಾ ನೀಡಿದ ದೂರಿನ ಆಧಾರದಲ್ಲಿ ಅಧಿಕಾರಿ ಸಹೋದರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈಸ್ಟ್ ಮಿಡ್ನಾಪೂರ್‌ನ ಕಾಂತಿ ಪೊಲೀಸ್ ಠಾಣೆಯಲ್ಲಿ ಜೂನ್ ಒಂದರಂದು ಈ ದೂರನ್ನು ದಾಖಲಿಸಲಾಗಿತ್ತು.
ಈ ದೂರಿನಲ್ಲಿ "ಮೇ 29, 2021 ರಂದು ಮಧ್ಯಾಹ್ನ 12:30ರ ವೇಳೆಗೆ ಸುವೇಂದು ಅಧಿಕಾರಿ ಮತ್ತು ಅವರ ಸಹೋದರ ಮಾಜಿ ಮುನ್ಸಿಪಲ್ ಮುಖ್ಯಸ್ಥ ಸೌಮೇಂದು ಅಧಿಕಾರಿಯ ನಿರ್ದೇಶನದ ಮೇರೆಗೆ ಕಾಂತಿ ಪುರಸಭೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಟಾರ್ಪಾಲ್‌ಗಳನ್ನು ಬಲವಂತವಾಗಿ ಮತ್ತು ಕಾನೂನಿಗೆ ವಿರುದ್ಧವಾಗಿ ಬೀಗ ತೆಗೆದು ಕೊಂಡೊಯ್ಯಲಾಗಿದೆ" ಎಂದು ಆರೋಪಿಸಲಾಗಿದೆ.

ಈ ಕಳ್ಳತನವನ್ನು ಮಾಡುವ ಸಲುವಾಗಿ ಬಿಜೆಪಿ ನಾಯಕರು ಕೇಂದ್ರ ಸಶಸ್ತ್ರಪಡೆಗಳನ್ನು ಬಳಸಿಕೊಂಡಿದೆ ಎಂದು ಈ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ಯಾಸ್ ಚಂಡಮಾರುತ ಅಬ್ಬರಿಸಿತ್ತು. ಇದರ ಪರಿಹಾರ ಕಾರ್ಯಾಚಣೆಗೆ ಬಳಸಲು ಸಂಗ್ರಸಿದ್ದ ಸಾಮಾಗ್ರಿಗಳನ್ನು ಕಳ್ಳತನ ಮಾಡಿದ ಆರೋಪ ಇದಾಗಿದೆ.
ಈ ದೂರಿನ ಆಧಾರದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಸುವೇಂದು ಅಧಿಕಾರಿ, ಸೌಮೇಂದು ಅಧಿಕಾರಿ, ಹಿಮಾಂಗ್ಶು ಮನ್ನಾ ಮತ್ತು ಪ್ರತಾಪ್ ಡಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದರಲ್ಲಿ ಪ್ರತಾಪ್ ದೇ ಪೊಲೀಸರ ವಶದಲ್ಲಿದ್ದು ಪ್ರಕರಣದ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications