ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಆಸ್ಪತ್ರೆಗೆ ದಾಖಲು
ಕೋಲ್ಕತಾ, ಡಿಸೆಂಬರ್ 9: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಬುಧವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುದ್ಧದೇವ್ ಅವರ ಶೀಘ್ರ ಚೇತರಿಕೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯಪಾಲ ಜಗದೀಪ್ ಧನಕರ್ ಸೇರಿದಂತೆ ಅನೇಕ ಗಣ್ಯರು ಹಾರೈಸಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಬುದ್ಧದೇವ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆಮ್ಲಜನಕ ಏರಿಳಿತದ ಮಟ್ಟವನ್ನು ವೈದ್ಯರು ಪರಿಶೀಲಿಸುತ್ತಿದ್ದಾರೆ.
'ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವುದು ತಿಳಿದು ಆತಂಕವಾಗಿದೆ. ಅವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ' ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.

ಬುದ್ಧದೇವ್ ಅವರನ್ನು ಖಾಸಗಿ ಆಸ್ಪತ್ರೆಯ ಫ್ಲೂ ಕ್ಲಿನಿಕ್ ಘಟಕದಲ್ಲಿ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಮ್ಮ ಫ್ಲೂ ಕ್ಲಿನಿಕ್‌ನಲ್ಲಿ ಅಗತ್ಯ ಪರೀಕ್ಷೆಗಳನ್ನು ನಡೆಸಲಾಗಿದೆ. ಬಳಿಕ ಅವರು ಆಸ್ಪತ್ರೆಯಲ್ಲಿಯೇ ಇರಬೇಕೇ ಅಥವಾ ಬೇಡವೇ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು' ಎಂದು ವೈದ್ಯರು ತಿಳಿಸಿದ್ದಾರೆ.
2000-2011ರ ಅವಧಿಯವರೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದ ಬುದ್ಧದೇವ್ ಭಟ್ಟಾಚಾರ್ಯ ಅವರು ಹಲವು ಬಾರಿ ವಯೋಸಹಜ ಆರೋಗ್ಯ ಸಮಸ್ಯೆ ಮತ್ತು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರು 2018ರಲ್ಲಿ ಸಿಪಿಎಂನ ಪಾಲಿಟ್ ಬ್ಯೂರೋ ಮತ್ತು ರಾಜ್ಯ ಕಾರ್ಯಾಲಯದ ಹುದ್ದೆಯಿಂದ ಇಳಿದಿದ್ದರು.












Click it and Unblock the Notifications