ಬ್ಯೂಟಿಪಾರ್ಲರ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ದುರುಳರು

ಕೋಲ್ಕತಾ:, ನವೆಂಬರ್ 25: ಬ್ಯೂಟಿಪಾರ್ಲರ್ ಒಳಗೆ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಕೋಲ್ಕತ್ತದ ಟಿಲ್ಜಲಾ ಪ್ರದೇಶದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಸಂತ್ರಸ್ತೆ ದೂರಿನ ಆಧಾರದ ಮೇಲೆ ಮೂವರನ್ನು ಬಂಧಿಸಲಾಗಿದೆ. ಮಹಿಳೆಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಸಾಮೂಹಿಕ ಅತ್ಯಾಚಾರವಾಗಿರುವ ಕುರಿತು ದೃಢಪಟ್ಟಿದೆ.

ಆರೋಪಿಯೋರ್ವ ಮಹಿಳೆಗೆ ಕರೆ ಮಾಡಿ ಬರುವಂತೆ ತಿಳಿಸಿದ್ದಾನೆ. ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಇನ್ನಿಬ್ಬರು ಈ ದೃಶ್ಯವನ್ನು ವಿಡಿಯೋ ಮಾಡಿದ್ದಾರೆ. ಬಳಿಕ ಅವರಿಬ್ಬರು ಆಕೆ ಮೇಲೆ ಅತ್ಯಾಚಾರ ಎಸಗಿದ್ದಾರೆ.

Gang rape in beauty parlour: Three arrest

ಸದ್ಯ ತನಿಖೆ ಕೈಗೊಂಡಿರುವ ಪೊಲೀಸರು ಸಾಕ್ಷಿಗಳನ್ನು ಕಲೆ ಹಾಕುತ್ತಿದ್ದಾರೆ. ವಿಶೇಷ ಅಧಿಕಾರಿ ಸಂತ್ರಸ್ತೆಯೊಂದಿಗೆ ಮಾತನಾಡಿದ್ದಾರೆ.

ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ವಿಡಿಯೋವನ್ನು ಎಲ್ಲೆಡೆ ಹರಿಬಿಡುವುದಾಗಿ ಬೆದರಿಕೆ ಒಡ್ಡಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯು ಅಳಲು ತೋಡಿಕೊಂಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+