• search
  • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ವಿರುದ್ಧದ ಹೋರಾಟ; ಪಶ್ಚಿಮ ಬಂಗಾಳದ ದಿಟ್ಟ ತೀರ್ಮಾನ

|

ಕೋಲ್ಕತ್ತಾ, ಜುಲೈ 15 : ಕೊರೊನಾ ವೈರಸ್ ಸೋಂಕಿನ ವಿರುದ್ಧದ ಹೋರಾಟದಲ್ಲಿ ಪಶ್ಚಿಮ ಬಂಗಾಳ ಸರ್ಕಾರ ದಿಟ್ಟ ತೀರ್ಮಾನವೊಂದನ್ನು ಕೈಗೊಂಡಿದೆ. ರಾಜ್ಯದಲ್ಲಿನ ಕೊರೊನಾ ಸೋಂಕಿತರ ಸಂಖ್ಯೆ 34,427ಕ್ಕೆ ಏರಿಕೆಯಾಗಿದೆ.

"ಕೊರೊನಾ ವೈರಸ್ ಸೋಂಕಿನ ವಿರುದ್ಧ ಹೋರಾಟ ಮಾಡುವಾಗ ಕೊರೊನಾ ವಾರಿಯರ್ಸ್ ಮೃತಪಟ್ಟರೆ ಅವರ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ಲಾಕ್‌ಡೌನ್‌

ಪಶ್ಚಿಮ ಬಂಗಾಳದಲ್ಲಿ ಇದುವರೆಗೂ 12 ಸರ್ಕಾರಿ ಅಧಿಕಾರಿಗಳು ಕೊರೊನಾ ವಿರುದ್ಧ ಹೋರಾಟ ಮಾಡುವಾಗ ಮೃತಪಟ್ಟಿದ್ದಾರೆ. ಮೃತಪಟ್ಟ ಅಧಿಕಾರಿಗಳಿಗೆ ಮೆಡಲ್ ಮತ್ತು ಪ್ರಮಾಣ ಪತ್ರ ನೀಡಿ ಸನ್ಮಾನ ಮಾಡಲಾಗುತ್ತದೆ ಎಂದು ಸರ್ಕಾರ ಹೇಳಿದೆ.

ಪಶ್ಚಿಮ ಬಂಗಾಳದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದೆ. ರಾಜ್ಯದ ವಿಧಾನಸಭೆ ಸಿಬ್ಬಂದಿಗೆ ಸೋಂಕು ತಗುಲಿದ್ದು, ಕಟ್ಟಡದಲ್ಲಿರುವ ಎಲ್ಲಾ ಇಲಾಖೆಗಳ ಕಚೇರಿಗಳನ್ನು ಜುಲೈ 24ರ ತನಕ ಬಂದ್ ಮಾಡಲಾಗಿದೆ.

ಕೋಲ್ಕತ್ತಾ; 217 ಪೊಲೀಸ್ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು

ಕೊರೊನಾ ವೈರಸ್ ಸೋಂಕಿನ ವಿರುದ್ಧ ಹೋರಾಟ ನಡೆಸುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಪೌರ ಕಾರ್ಮಿಕರು, ಪೊಲೀಸರನ್ನು ಕೊರೊನಾ ವಾರಿಯರ್ಸ್ ಎಂದು ಘೋಷಣೆ ಮಾಡಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಬಡವರಿಗೆ ಜೂನ್ 2021ರವರೆಗೆ ಉಚಿತ ಅಕ್ಕಿ:ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಬುಧವಾರ 1589 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ, 20 ಜನರು ಮೃತಪಟ್ಟಿದ್ದಾರೆ.

English summary
West Bengal government decided to offer a government job to the next of kin of Corona Warriors of the state who lost their lives while leading the fight against COVID19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X