ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೌರತ್ವ ಕಾಯ್ದೆ ವಿರುದ್ಧದ ಜಾಹೀರಾತು ಹಿಂಪಡೆಯುವಂತೆ ದೀದಿಗೆ ಆಗ್ರಹ

|
Google Oneindia Kannada News

ಬೆಂಗಳೂರು, ಡಿಸೆಂಬರ್ 16 : ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧವಾಗಿ ಸುದ್ದಿವಾಹಿನಿಗಳಲ್ಲಿ ನೀಡುತ್ತಿರುವ ಜಾಹೀರಾತನ್ನು ಹಿಂಪಡೆಯಬೇಕು ಎಂದು ಪಶ್ಚಿಮ ಬಂಗಾಳ ರಾಜ್ಯಪಾಲರು ಸೂಚನೆ ನೀಡಿದ್ದಾರೆ.

ಎನ್‌ಆರ್‌ಸಿ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ಎರಡಕ್ಕೂ ಈಗಾಗಲೇ ವಿರೋಧ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೀಗ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಚಾನೆಲ್‌ಗಳಲ್ಲಿ ಜಾಹೀರಾತುಗಳನ್ನು ಪ್ರಸಾರ ಮಾಡಿಸುತ್ತಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆ: ಪೌರತ್ವ ತಿದ್ದುಪಡಿ ಮಸೂದೆ: "ನಮ್ಮ ರಾಜ್ಯದಲ್ಲಿ ನಿಮ್ಮ ಆಟ ನಡೆಯಲ್ಲ"!

ಮಮತಾ ಬ್ಯಾನರ್ಜಿ ಸರ್ಕಾರ ಸಾರ್ವಜನಿಕರ ಹಣ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನಕರ್ ಆಪಾದಿಸಿದ್ದಾರೆ. ತಕ್ಷಣ ಈ ಜಾಹೀರಾತುಗಳನ್ನು ವಾಪಸ್ ಪಡೆಯಲು ಆಗ್ರಹಿಸಿದ್ದಾರೆ.

Governor Appeals CM Banerjee To Withdraw Ads Opposing CAA

ಈ ಜಾಹೀರಾತಿನಲ್ಲಿ ಸಿಎಂ ಮಮತಾ ಬ್ಯಾನರ್ಜಿ ಹಿಂಸಾಕೃತ್ಯಗಳನ್ನು ಕೈಬಿಡುವಂತೆ ಮನವಿ ಮಾಡಿತ್ತು. ಸಿಎಎ ಹಾಗೂ ಎನ್‌ಆರ್‌ಸಿಯನ್ನು ಬಂಗಾಳದಲ್ಲಿ ಅನುಷ್ಠಾನಗೊಳಿಸುವುದಿಲ್ಲ.

ಸಂಸತ್ತಿನಲ್ಲಿ ಅನುಮೋದನೆ ಪಡೆದ ಮಸೂದೆಯನ್ನು ವಿರೋಧಿಸುವುದು ಅಸಂವಿಧಾನಿಕ ಹಾಗೂ ಇದು ಅರಾಜಕತೆಗೆ ಎಡೆ ಮಾಡಿಕೊಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮಮತಾ ಸರ್ಕಾರ ಪೌರತ್ವ ತಿದ್ದುಪಡಿ ವಿರೋಧಿ ಪ್ರತಿಭಟನೆಯನ್ನು ಪೊಲೀಸರ ನೆರವಿನೊಂದಿಗೆ ಪರಿಣಾಮಕಾರಿಯಾಗಿ ಹತ್ತಿಕ್ಕುವ ಬದಲು ಟಿವಿ ಚಾನೆಲ್‌ಗಳಲ್ಲಿ ಸಿಎಎ ವಿರೋಧಿ ಜಾಹೀರಾತು ನೀಡುತ್ತಿದೆ. ಇದು ಅಸಂವಿಧಾನಿಕ ಇದನ್ನು ತಕ್ಷಣ ವಾಪಸ್ ಪಡೆಯಬೇಕು.

ಸರ್ಕಾರ ಈ ಜಾಹೀರಾರು ವಿಚಾರದಲ್ಲಿ ತಕ್ಷಣ ನಿರ್ಧಾರ ಕೈಗೊಳ್ಳಬೇಕಿದೆ. ಕನಿಷ್ಠ ಜಾಹೀರಾತುಗಳನ್ನು ವಾಪಾಸು ಪಡೆಯಬೇಕಿದೆ. ಅನುಮತಿ ನೀಡಲು ಸಾಧ್ಯವಿಲ್ಲ. ಇದು ಸಾರ್ವಜನಿಕ ನಿಧಿಯ ದುರ್ಬಳಕೆ ಎಂದು ತಿಳಿಸಿದ್ದಾರೆ.

English summary
West Bengal Governor Jagdeep Dhankhar has appealed to WB Chief Minister Mamata Banerjee to withdraw advertisements defying National Register of Citizens (NRC) and Citizenship (Amendment) Act.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X