ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳ; ಹಂಸಖಾಲಿ ಅತ್ಯಾಚಾರ ಪ್ರಕರಣದ ತನಿಖೆ ಸಿಬಿಐಗೆ

|
Google Oneindia Kannada News

ಕೋಲ್ಕತ್ತಾ, ಏಪ್ರಿಲ್ 12; ನಾಡಿಯಾ ಜಿಲ್ಲೆಯ ಹಂಸಖಾಲಿಯಲ್ಲಿ ನಡೆದ 14 ವರ್ಷದ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಹೈಕೋರ್ಟ್‌ ಸಿಬಿಐಗೆ ವಹಿಸಿದೆ.

ಹುಟ್ಟು ಹಬ್ಬದ ಸಮಾರಂಭವೊಂದರಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಬಳಿಕ ಸಂತ್ರಸ್ತ ಬಾಲಕಿ ಮೃತಪಟ್ಟಿದ್ದಳು. ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಬೇಕು ಎಂದು ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ.

ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಸ್ಥಳೀಯ ಪೊಲೀಸರು ಪ್ರಕರಣದ ಎಲ್ಲಾ ಮಾಹಿತಿ, ದಾಖಲೆಯನ್ನು ಹಸ್ತಾಂತರ ಮಾಡಬೇಕು. ಬಂಧನದಲ್ಲಿರುವ ಆರೋಪಿಗಳನ್ನು ಸಹ ಸಿಬಿಐ ವಶಕ್ಕೆ ನೀಡಬೇಕು ಎಂದು ಹೈಕೋರ್ಟ್ ಹೇಳಿದ್ದು, ಮುಂದಿನ ವಿಚಾರಣೆ ವೇಳೆಗೆ ತನಿಖೆ ಪೂರ್ಣಗೊಳಿಸಬೇಕು ಎಂದು ಹೇಳಿದೆ.

ಬೆಂಗಳೂರಿನಲ್ಲಿ ಪ.ಬಂಗಾಳ‌ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರ ಬಂಧನಬೆಂಗಳೂರಿನಲ್ಲಿ ಪ.ಬಂಗಾಳ‌ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರ ಬಂಧನ

Hanskhali Rape Murder Case Calcutta HC Orders For CBI Probe

ಈ ಪ್ರಕರಣದ ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್ ಪಕ್ಷದ ಪಂಚಾಯಿತಿ ಸದಸ್ಯನ ಪುತ್ರ ಎಂದು ಬಾಲಕಿಯ ಕುಟುಂಬ ಆರೋಪಿಸಿದೆ. ತನಿಖೆ ಕೈಗೊಂಡಿರುವ ಪೊಲೀಸರು ಆರೋಪಿಯನ್ನು ಈಗಾಗಲೇ ಬಂಧಿಸಿದ್ದಾರೆ.

ದೆಹಲಿ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಗೋಣಿ ಚೀಲದಲ್ಲಿ ಶವ ಪತ್ತೆದೆಹಲಿ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಗೋಣಿ ಚೀಲದಲ್ಲಿ ಶವ ಪತ್ತೆ

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ನಡೆದ 4 ದಿನಗಳ ಬಳಿಕ ಪೋಷಕರು ಶನಿವಾರ ಹಂಸಖಾಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. 9 ನೇ ತರಗತಿ ಓದುತ್ತಿದ್ದ ಬಾಲಕಿ ಹುಟ್ಟು ಹಬ್ಬದ ಪಾರ್ಟಿಗಾಗಿ ಆರೋಪಿ ಮನೆಗೆ ಹೋಗಿದ್ದಳು. ಅಲ್ಲಿಂದ ಮನೆಗೆ ಬಂದಾಗ ಅಸ್ವಸ್ಥಗೊಂಡಿದ್ದಳು. ಬಳಿಕ ಮೃತಪಟ್ಟಿದ್ದಳು.

ಬಾಲಕಿ ಮನೆಗೆ ಬಂದಾಗ ತೀವ್ರವಾದ ರಕ್ತಸ್ರಾವವಾಗುತ್ತಿತ್ತು. ಹೊಟ್ಟೆ ನೋವಿನಿಂದ ಆಕೆ ಬಳಲುತ್ತಿದ್ದಳು. ಆಸ್ಪತ್ರೆಗೆ ನಾವು ದಾಖಲಿಸುವ ಮುನ್ನವೇ ಆಕೆ ಮೃತಪಟ್ಟಿದ್ದಾಳೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದರು.

ಆರೋಪಿ ಮತ್ತು ಆತನ ಸ್ನೇಹಿತರು ತಮ್ಮ ಪುತ್ರಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಆಕೆಯ ಮರಣೋತ್ತರ ಪರೀಕ್ಷೆಯ ಪ್ರಮಾಣ ಪತ್ರ ಸಿಗುವ ಮೊದಲೇ ಜನರ ಗುಂಪು ಮಗಳ ಶವವನ್ನು ಅಂತ್ಯ ಸಂಸ್ಕಾರಕ್ಕೆ ಬಲವಂತವಾಗಿ ತೆಗೆದುಕೊಂಡು ಹೋಗಿದೆ ಎಂದು ಮೃತಪಟ್ಟ ಬಾಲಕಿ ತಾಯಿ ಆರೋಪಿಸಿದ್ದಾರೆ.

ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಪಶ್ಚಿಮ ಬಂಗಾಳದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಶಶಿ ಪಂಜ, "ಅಪ್ರಾಪ್ತ ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯವನ್ನು ಸರ್ಕಾರ ಎಂದಿಗೂ ಸಹಿಸುವುದಿಲ್ಲ" ಎಂದು ಹೇಳಿದ್ದರು.

"ಈ ಪ್ರಕರಣದ ತನಿಖೆಯಲ್ಲಿ ಯಾವ ರಾಜಕೀಯ ನಾಯಕರ ಪಾತ್ರವೂ ಇರುವುದಿಲ್ಲ. ಪೊಲೀಸರು ಸ್ವತಂತ್ರವಾಗಿ ತನಿಖೆ ನಡೆಸಲಿದ್ದಾರೆ" ಎಂದು ತಿಳಿಸಿದ್ದರು. ಈಗ ಕೋಲ್ಕತ್ತಾ ಹೈಕೋರ್ಟ್ ತನಿಖೆಯನ್ನು ಸಿಬಿಐಗೆ ವಹಿಸಿದೆ.

English summary
Calcutta high court ordered for CBI probe in Nadia's Hanskhali rape and murder case. Local police should hand over all the documents and accused to CBI said court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X