ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳದಲ್ಲಿ ನಡ್ಡಾ ಕಾರಿನ ಮೇಲೆ ದಾಳಿ: ಇಬ್ಬರು ಅಧಿಕಾರಿಗಳಿಗೆ ಸಮನ್ಸ್

|
Google Oneindia Kannada News

ಕೋಲ್ಕತ್ತಾ, ಡಿಸೆಂಬರ್ 11: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಕಾರಿನ ಮೇಲಾದ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಹಾಗೂ ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ನೀಡಿದೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ರಾಜ್ಯಪಾಲರು, ಜೆಪಿ ನಡ್ಡಾ ರ‍್ಯಾಲಿ ವೇಳೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಬಗ್ಗೆ ಡಿಜಿಪಿ ಮತ್ತು ಮುಖ್ಯ ಕಾರ್ಯದರ್ಶಿಗೆ ಎಚ್ಚರಿಕೆ ನೀಡಲಾಗಿತ್ತು ಆದಾಗ್ಯೂ, ಅವರು ಸ್ಪಂದಿಸಿದ ರೀತಿ ರಾಜ್ಯದಲ್ಲಿ ಸಂವಿಧಾನಿಕ ಹುದ್ದೆಗಳ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಮತಾ ಬ್ಯಾನರ್ಜಿಗೆ ಸವಾಲು ಹಾಕಿದ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾಮಮತಾ ಬ್ಯಾನರ್ಜಿಗೆ ಸವಾಲು ಹಾಕಿದ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ಬಗ್ಗೆ ರಾಜ್ಯಪಾಲ ಜಗದೀಪ್ ದಾನ್ಕಾರ್ ಕಳವಳ ವ್ಯಕ್ತಪಡಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಜೆ. ಪಿ. ನಡ್ಡಾ ಅವರ ಸಭೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಬಗ್ಗೆ ಎಚ್ಚರಿಕೆ ನೀಡಲಾಗಿದ್ದರೂ ಇಂತಹ ಚಟುವಟಿಕೆಗಳನ್ನು ತಡೆಯುವಲ್ಲಿ ಆಡಳಿತ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ.

Home Ministry Summons Top 2 Bengal Officers After BJP Chief Convoy Attack

ಭಾಷಣ ಮಾಡಲು ತೆರಳುತ್ತಿದ್ದ ಜೆ. ಪಿ. ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹರ್ಬೊರು ಪ್ರದೇಶದ ಸಿರಾಕೊಲ್ ಬಳಿ ಟಿಎಂಸಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರು.

ಕೈಲಾಸ್ ವಿಜಯ್ ವರ್ಗೀಸ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಗಾಯಗೊಂಡಿರುವುದಾಗಿ ಬಿಜೆಪಿ ಪಕ್ಷ ಹೇಳಿದೆ. ಹಾಗಿದ್ದರೂ ಕೂಡ ಪರಿಸ್ಥಿತಿ ಶಾಂತವಾಗಿತ್ತೆಂದು ಬಂಗಾಳ ಪೊಲೀಸರು ಸಮರ್ಥನೆ ನೀಡಿದ್ದಾರೆ.

English summary
West Bengal Governor Jagdeep Dhankhar today submitted his report on law and order in Bengal, sought by Home Minister Amit Shah hours after an attack on party chief JP Nadda's convoy on Thursday. The Home Ministry has summoned the state's Chief Secretary and police chief on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X