ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬುಲೆಟ್‌ಗಳಿಗೆ ಬ್ಯಾಲಟ್ ಮೂಲಕ ಉತ್ತರ ನೀಡುತ್ತೇನೆ; ಮಮತಾ ಬ್ಯಾನರ್ಜಿ

|
Google Oneindia Kannada News

ಕೋಲ್ಕತ್ತಾ, ಏಪ್ರಿಲ್ 14: ಪಶ್ಚಿಮ ಬಂಗಾಳದ ಕೂಚ್‌ಬೆಹಾರ್‌ನಲ್ಲಿ ನಾಲ್ಕನೇ ಹಂತದ ಚುನಾವಣೆ ವೇಳೆ ನಡೆದ ಸಂಘರ್ಷದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಅವರ ಸಾವಿಗೆ ಕಾರಣರಾದವರ ಕುರಿತು ಸರ್ಕಾರ ತನಿಖೆ ನಡೆಸಲಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಮಮತಾ ಬ್ಯಾನರ್ಜಿ ಮೇಲೆ ಚುನಾವಣಾ ಆಯೋಗ 24 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ನಿರ್ಬಂಧ ಹೇರಿತ್ತು. ಈ ನಿರ್ಬಂಧದ ಅವಧಿ ಮುಗಿದ ನಂತರ ಮಮತಾ ಬ್ಯಾನರ್ಜಿ, ಗುಂಡಿನ ದಾಳಿಯಲ್ಲಿ ಮೃತಪಟ್ಟ ಕುಟುಂಬದವರನ್ನು ಬುಧವಾರ ಭೇಟಿ ಮಾಡಿದ್ದಾರೆ. ಈ ಸಂದರ್ಭ ಮಾತನಾಡಿದ ಅವರು, ನಾಲ್ವರ ಹತ್ಯೆಗೆ ಕಾರಣರಾದವರನ್ನು ಪತ್ತೆ ಹಚ್ಚಿ ಕಾನೂನು ಪ್ರಕಾರ ಶಿಕ್ಷೆ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

ಸುಳ್ಳು ಹೇಳಿದ್ದು ಸಾಬೀತಾದರೆ ಮೋದಿ ಬಸ್ಕಿ ಹೊಡೆಯಬೇಕು; ಮಮತಾ ಬ್ಯಾನರ್ಜಿಸುಳ್ಳು ಹೇಳಿದ್ದು ಸಾಬೀತಾದರೆ ಮೋದಿ ಬಸ್ಕಿ ಹೊಡೆಯಬೇಕು; ಮಮತಾ ಬ್ಯಾನರ್ಜಿ

"ಸತ್ತ ವ್ಯಕ್ತಿಗಳ ಕುಟುಂಬದವರು ನನ್ನ ಕುಟುಂಬವಿದ್ದಂತೆ. ಅವರ ಮೇಲೆ ಹಾರಿರುವ ಬುಲೆಟ್‌ಗೆ ತಕ್ಕ ಉತ್ತರ ನಾನು ನೀಡುತ್ತೇನೆ. ಅವರಿಗೆ ಕಾನೂನಿನಡಿಯಲ್ಲಿ ಶಿಕ್ಷೆ ಖಚಿತ" ಎಂದು ಹೇಳಿದ್ದಾರೆ.

 I Will Respond To Bullets With Ballots Says Mamata Banerjee

ಮತದಾನ ಕೇಂದ್ರದ ಹೊರಗೆ ಗುಂಡಿನ ದಾಳಿಯಿಂದ ಮೃತಪಟ್ಟ ಅದೇ ಜಿಲ್ಲೆಯ ಆನಂದ್ ಬರ್ಮನ್ ಅವರ ಕುಟುಂಬಕ್ಕೂ ನ್ಯಾಯ ದೊರಕಿಸಿಕೊಡುವುದಾಗಿ ತಿಳಿಸಿದರು.

ಶನಿವಾರ ನಾಲ್ಕನೇ ಹಂತದ ಚುನಾವಣೆ ಸಂದರ್ಭ ಸಿಐಎಸ್‌ಎಫ್ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಪಶ್ಚಿಮ ಬಂಗಾಳದ 294 ಕ್ಷೇತ್ರಗಳಿಗೆ ಎಂಟು ಹಂತಗಳಲ್ಲಿ ಮತದಾನ ನಡೆಯಲಿದ್ದು, ಈಗಾಗಲೇ ನಾಲ್ಕು ಹಂತದ ಚುನಾವಣೆ ಪೂರ್ಣಗೊಂಡಿದೆ. ಮೇ 2ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

English summary
"I have met the kin of all five victims. They are like my own family... I will respond to bullets with ballots" says west bengal cm mamata banerjee to koochbehar incident
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X