ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಕಾಂಗ್ರೆಸ್

ಕೊಲ್ಕತ್ತಾ, ಅಕ್ಟೋಬರ್ 11: ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಕಾಂಗ್ರೆಸ್‌ ಹಿರಿಯ ಸಂಸದ ಅಧೀರ್ ರಂಜನ್ ಚೌಧರಿ, 'ರಾಜ್ಯದಲ್ಲಿ ಹಿಂಸೆ ತಾಂಡವವಾಡುತ್ತಿದೆ, ಕೂಡಲೇ ರಾಷ್ಟ್ರಪತಿ ಆಡಳಿತವನ್ನು ಹೇರಬೇಕು' ಎಂದು ಅವರು ಕೇಂದ್ರವನ್ನು ಒತ್ತಾಯಿಸಿದ್ದಾರೆ.

ನಿನ್ನೆಯಷ್ಟೆ ಆರ್‌ಎಸ್‌ಎಸ್ ಕಾರ್ಯಕರ್ತ ಆತನ ಗರ್ಭಿಣಿ ಪತ್ನಿ ಮತ್ತು ಮಗುವನ್ನು ಹಾಡ ಹಗಲೇ ಕೊಂದಿರುವ ಘಟನೆ ಬಗ್ಗೆ ಮಾತನಾಡುತ್ತಾ ಅವರು ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

Impose President Rule In West Bengal: Congress

ರಾಜ್ಯದ ಬಿಜೆಪಿ ಸಹ ಇದೇ ಒತ್ತಾಯ ಮಾಡಿದ್ದು, ದೀದಿ ಆಡಳಿತದಲ್ಲಿ ಹಿಂಸಾಚಾರ ಮೇರೆ ಮೀರಿದ್ದು ಕೂಡಲೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಒತ್ತಾಯಿಸಿದೆ.

ಪೋನ್ಜಿ ಹಗರಣದ ಬಗ್ಗೆಯೂ ಪ್ರಸ್ತಾಪಿಸಿದ ಅಧೀರ್ ರಂಜನ್ ಚೌಧರಿ, 'ಇತ್ತೀಚೆಗಷ್ಟೆ ಮಮತಾ ಬ್ಯಾನರ್ಜಿ ಅವರು, ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಅವರನ್ನು ಭೇಟಿ ಆಗಿದ್ದಾರೆ. ಆಗಿನಿಂದ ಹಗರಣದ ತನಿಖೆ ನಿಧಾನವಾಗಿದೆ ಇವರಲ್ಲಿ ಏನಾದರೂ ಒಳ ಒಪ್ಪಂದ ಆಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹಿಂಸಾಚಾರದ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿವೆ. ಅದರಲ್ಲಿಯೂ ರಾಜಕೀಯ ಪ್ರೇರಿತ ಹತ್ಯೆಗಳು ರಾಜ್ಯದಲ್ಲಿ ಹೆಚ್ಚಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+