ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳ ಚುನಾವಣೆ; ಬಿಜೆಪಿ ತೊರೆದ ಕೋಲ್ಕತಾ ಮಾಜಿ ಮೇಯರ್

|
Google Oneindia Kannada News

ಕೋಲ್ಕತಾ, ಮಾರ್ಚ್ 15: 2018ರಲ್ಲಿ ತೃಣಮೂಲ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಕೋಲ್ಕತ್ತಾ ಮಾಜಿ ಮೇಯರ್ ಸೋವನ್ ಚಟರ್ಜಿ ಭಾನುವಾರ, ಮಾರ್ಚ್ 14ರಂದು ಬಿಜೆಪಿ ತೊರೆದಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಇನ್ನು ಕೆಲವೇ ದಿನಗಳಿರುವಾಗ ಬಿಜೆಪಿ ತೊರೆದಿದ್ದು, ತಮ್ಮ ಸಾಂಪ್ರದಾಯಿಕ ವಿಧಾನಸಭಾ ಕ್ಷೇತ್ರ ಬೆಹಾಲಾ ಪೂರ್ವದಿಂದ ಚುನಾವಣಾ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿದುಬಂದಿದೆ.

ಬಂಗಾಳದಲ್ಲಿ ಮೂವರು ಸಂಸದರನ್ನು ವಿಧಾನಸಭಾ ಕಣಕ್ಕಿಳಿಸಿದ ಬಿಜೆಪಿ!ಬಂಗಾಳದಲ್ಲಿ ಮೂವರು ಸಂಸದರನ್ನು ವಿಧಾನಸಭಾ ಕಣಕ್ಕಿಳಿಸಿದ ಬಿಜೆಪಿ!

ಇದೇ ಫೆಬ್ರವರಿ 15ರಂದು ಬಿಜೆಪಿ ಸೇರಿದ್ದ ನಟಿ ಪಾಯಲ್ ಸರ್ಕಾರ್ ಅವರನ್ನು ಪೂರ್ವ ಬೆಹಾಲಾ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿತ್ತು. ಹೀಗಾಗಿ ಭಾನುವಾರ ಬಿಜೆಪಿಯಿಂದ ಸೋವನ್ ಚಟರ್ಜಿ ಹೊರನಡೆದಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರಿಗೆ ಪತ್ರ ಬರೆದಿದ್ದಾರೆ.

Kolkata Former Mayor Sovan Chatterjee Quits BJP

ಸೋವನ್ ಚಟರ್ಜಿ 2011ರಲ್ಲಿ ತೃಣಮೂಲ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಪೂರ್ವ ಬೆಹಾಲಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. 2016ರಲ್ಲಿ ಬಂಗಾಳ ಸಂಪುಟದಲ್ಲಿ ಸಚಿವರಾಗಿದ್ದ ಸೋವನ್ 2018ರಲ್ಲಿ ಮೇಯರ್ ಹುದ್ದೆ ತ್ಯಜಿಸಿ, 2019ರ ಆಗಸ್ಟ್‌ನಲ್ಲಿ ಬಿಜೆಪಿ ಸೇರಿದ್ದರು.

ಇದೇ ಮಾರ್ಚ್ 27ರಿಂದ ಪಶ್ಚಿಮ ಬಂಗಾಳ ಚುನಾವಣೆ ಆರಂಭವಾಗಲಿದ್ದು, 294 ಕ್ಷೇತ್ರಗಳಿಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೇ 2ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

English summary
Former Mayor of Kolkata Sovan Chatterjee quit BJP on Sunday, 14 March, just days ahead of the West Bengal Assembly elections,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X