ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾಘಟಬಂಧನಕ್ಕಾಗಿ ಕೋಲ್ಕತ್ತಾದಲ್ಲಿ ಇಂದು ವಿಪಕ್ಷಗಳ ಬೃಹತ್ rally

|
Google Oneindia Kannada News

ಕೋಲ್ಕತ್ತಾ, ಜನವರಿ 19: ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರದ ವಿರುದ್ಧ ಹೋರಾಡಲು ವಿಪಕ್ಷಗಳೆಲ್ಲವೂ ಸಿದ್ಧವಾಗಿದ್ದು, ಇಂದು ಒಗ್ಗಟ್ಟು ಪ್ರದರ್ಶನದ ಸಂಕೇತವೆಂಬಂತೆ ಕೋಲ್ಕತ್ತಾದಲ್ಲಿ ಬೃಹತ್ rally ನಡೆಯಲಿದೆ.

ಟಿಎಂಸಿ ನಾಯಕಿ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನೇತೃತ್ವದಲ್ಲಿ ನಡೆಯಲಿರುವ ಈ rally ಯಲ್ಲಿ ಮಾಜಿ ಕೇಂದ್ರ ಸಚಿವರಾದ ಯಶವಂತ್ ಸಿನ್ಹಾ, ಶತ್ರುಘ್ನ ಸಿನ್ಹಾ, ಅರುಣ್ ಶೌರಿ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಕರ್ನಾಟಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಆಂಧ್ರಪ್ರದೇಶ ಮುಖ್ಯಮಂತ್ರಿಚಂದ್ರಬಾಬು ನಾಯ್ಡು, ಮಾಜಿ ಮುಖ್ಯಮಂತ್ರಿಗಳಾದ ಓಮರ್ ಅಬ್ದುಲ್ಲಾ, ಅಖಿಲೇಶ್ ಯಾದವ್ ಸೇರಿದಂತೆ 20 ಕ್ಕೂ ಹೆಚ್ಚು ಮುಖಂಡರು ಭಾಗಿಯಾಗಲಿದ್ದಾರೆ.

ಮಹಾಘಟಬಂಧನದ ವಿರಾಟರೂಪ ದರ್ಶನಕ್ಕೆ ದೀದಿ ರೆಡಿ! ಯಾರೆಲ್ಲ ಹಾಜರು?ಮಹಾಘಟಬಂಧನದ ವಿರಾಟರೂಪ ದರ್ಶನಕ್ಕೆ ದೀದಿ ರೆಡಿ! ಯಾರೆಲ್ಲ ಹಾಜರು?

Kolkata is all set to opposition rally today

ಅನಾರೋಗ್ಯದ ಕಾರಣ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಭಾಗವಹಿಸುತ್ತಿಲ್ಲ. ವೈಯಕ್ತಿಕ ಕಾರಣಗಳಿಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೂ ಸಭೆಯಲ್ಲಿ ಭಾಗವಹಿಸುವುದಿಲ್ಲ ಎನ್ನಲಾಗುತ್ತಿದ್ದು, ಈಗಾಗಲೇ ಅವರು ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದು ತಮ್ಮ ಬೆಂಬಲ ಸೂಚಿಸಿದ್ದಾರೆ.

ಬಿಜೆಪಿ ವಿರುದ್ಧ ಸಿಡಿದು ನಿಂತ ಮಮತಾಗೆ ರಾಹುಲ್ ಗಾಂಧಿ ಪತ್ರ ಬೆಂಬಲಬಿಜೆಪಿ ವಿರುದ್ಧ ಸಿಡಿದು ನಿಂತ ಮಮತಾಗೆ ರಾಹುಲ್ ಗಾಂಧಿ ಪತ್ರ ಬೆಂಬಲ

Rally ಕಾರಣ ಕೋಲ್ಕತ್ತಾದಾದ್ಯಂತ ಬ್ರಿಗೆಡ್ ಪರೇಡ್ ಮೈದಾನದಲ್ಲಿ ಬಿಗಿಬಂದೋಬಸ್ತ್ ನಿಯೋಜಿಸಲಾಗಿದೆ. 20 ವೀಕ್ಷಣಾ ಗೋಪುರ, 1000 ಮೈಕ್ರೋಫೋನ್ ಗಳು, 30 ಎಲ್ ಇಡಿ ಸ್ಕ್ರೀನ್ ಗಳನ್ನು ಅಳವಡಿಸಲಾಗಿದೆ.

ಬಿಜೆಪಿ ವಿರುದ್ಧ ತೊಡೆತಟ್ಟಲು ಕೊಲ್ಕತ್ತಕ್ಕೆ ತೆರಳಿದ ಕುಮಾರಸ್ವಾಮಿಬಿಜೆಪಿ ವಿರುದ್ಧ ತೊಡೆತಟ್ಟಲು ಕೊಲ್ಕತ್ತಕ್ಕೆ ತೆರಳಿದ ಕುಮಾರಸ್ವಾಮಿ

10,000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದ್ದು, ದೇಶದಾದ್ಯಂತ ಸಾವಿರಾರು ಟಿಎಂಸಿ ಕಾರ್ಯಕರ್ತರು ಆಗಮಿಸಲಿದ್ದಾರೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರದ ನಿದ್ದೆ ಕೆಡಿಸುವಂಥ rally ಇಂದು ನಡೆಯಲಿದೆ.

English summary
The stage is set for West Bengal Chief Minister and Trinamool Congress supremo Mamata Banerjee's mega Opposition rally against the Narendra Modi government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X