ಪಶ್ಚಿಮ ಬಂಗಾಳದಲ್ಲಿ ಲಾಕ್ ಡೌನ್ ಆ.31ರ ತನಕ ವಿಸ್ತರಣೆ

ಕೋಲ್ಕತ್ತಾ, ಜುಲೈ 28 : ಪಶ್ಚಿಮ ಬಂಗಾಳ ಸರ್ಕಾರ ಕೊರೊನಾ ವೈರಸ್ ಸೋಂಕು ಹರಡದಂತೆ ಘೋಷಣೆ ಮಾಡಿದ್ದ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 60,830.

Recommended Video

      India and Nepal border dispute explained | Oneindia Kannada

      ಮಂಗಳವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಕಂಟೈನ್ಮೆಂಟ್ ಝೋನ್‌ಗಳಲ್ಲಿ ಆಗಸ್ಟ್ 31ರ ತನಕ ಲಾಕ್ ಡೌನ್ ಮುಂದುವರೆಯಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

      ಕಂಟೈನ್ಮೆಂಟ್ ಝೋನ್ ಅಲ್ಲದ ಪ್ರದೇಶಗಳಲ್ಲಿ ನೀಡಿರುವ ವಿನಾಯಿತಿ ಜೊತೆಗೆ ಜನ ಜೀವನ ಎಂದಿನಂತೆ ಇರಲಿದೆ. ಆದರೆ, ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ.

      Lockdown Extended Till August 31 At West Bengal

      ಕೇಂದ್ರ ಗೃಹ ಇಲಾಖೆ ಘೋಷಣೆ ಮಾಡಿರುವ ಅನ್ ಲಾಕ್ 2.0 ಜುಲೈ 30ಕ್ಕೆ ಅಂತ್ಯಗೊಳ್ಳಲಿದೆ. ಹೊಸ ಮಾರ್ಗಸೂಚಿಯನ್ನು ಕೇಂದ್ರ ಬಿಡುಗಡೆ ಮಾಡಿದ ಬಳಿಕ ಪಶ್ಚಿಮ ಬಂಗಾಳ ರಾಜ್ಯವೂ ಲಾಕ್ ಡೌನ್ ಮಾರ್ಗಸೂಚಿ ಬಿಡುಗಡೆಗೊಳಿಸುವ ನಿರೀಕ್ಷೆ ಇದೆ.

      ಪಶ್ಚಿಮ ಬಂಗಾಳ ರಾಜ್ಯದಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 60,830. ಇವುಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 19,502. ರಾಜ್ಯದಲ್ಲಿ ಇದುವರೆಗೂ 1,411 ಜನರು ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ.

      ಸಂಪೂರ್ಣ ಲಾಕ್ ಡೌನ್; ಪಶ್ಚಿಮ ಬಂಗಾಳ ರಾಜ್ಯದಲ್ಲಿ ಜುಲೈ 29, ಆಗಸ್ಟ್ 2 ಮತ್ತು 5ರಂದು ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿ ಮಮತಾ ಬ್ಯಾನರ್ಜಿ ಆದೇಶ ಹೊರಡಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+